ಮಡಿಕೇರಿ ಏ.5 NEWS DESK : ಕೊಡಗು ಜಿಲ್ಲಾ ಕಾಂಗ್ರೆಸ್ ಸಮಿತಿ, ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಹಾಗೂ ಆರು ಬ್ಲಾಕ್ ಕಾಂಗ್ರೆಸ್ ಸಮಿತಿಯ ವತಿಯಿಂದ ಬ್ಲಾಕ್ ಕಾಂಗ್ರೆಸ್ ಮಟ್ಟದ ಅಧ್ಯಕ್ಷರುಗಳು, ಬಿಎಲ್‍ಎ ಗಳು, ವಲಯ ಅಧ್ಯಕ್ಷರುಗಳು ಹಾಗೂ ಬೂತ್ ಪ್ರಮುಖರ ಸಭೆ ಏ.6 ರಿಂದ 9ರ ವರೆಗೆ ನಡೆಯಲಿದೆ ಎಂದು ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿಯ ಅಧ್ಯಕ್ಷ ಟಿ.ಪಿ.ರಮೇಶ್ ತಿಳಿಸಿದ್ದಾರೆ.
ನಾಲ್ಕು ದಿನಗಳ ಕಾಲ ನಡೆಯುವ ಸಭೆಗಳ ಕುರಿತು ಪತ್ರಿಕಾ ಪ್ರಕಟಣೆ ಮೂಲಕ ಮಾಹಿತಿ ನೀಡಿರುವ ಅವರು, ಏ.6 ರಂದು ಅಪರಾಹ್ನ 2.30 ಗಂಟೆಗೆ ಮಡಿಕೇರಿ ನಗರ ಕಾಂಗ್ರೆಸ್ ಮತ್ತು ಮಡಿಕೇರಿ ಬ್ಲಾಕ್ ಕಾಂಗ್ರೆಸ್ ಸಭೆ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಡೆಯಲಿದೆ ಎಂದು ಹೇಳಿದ್ದಾರೆ.
ಏ.7 ರಂದು ಬೆಳಿಗ್ಗೆ 10.30 ಗಂಟೆಗೆ ಗೋಣಿಕೊಪ್ಪಲು ಕಿತ್ತಳೆ ಸಹಕಾರ ಸಂಘದ ಸಭಾಂಗಣದಲ್ಲಿ ಪೆÇನ್ನಂಪೇಟೆ ಬ್ಲಾಕ್ ಸಭೆ, ಅಪರಾಹ್ನ 2.30 ಗಂಟೆಗೆ ವಿರಾಜಪೇಟೆ ಬ್ಲಾಕ್ ಕಾಂಗ್ರೆಸ್ ಸಭೆ ಶಾಸಕ ಎ.ಎಸ್.ಪೊನ್ನಣ್ಣ ಅವರ ನಿವಾಸದ ಬಳಿ ನಡೆಯಲಿದೆ.
ಏ.8 ರಂದು ಬೆಳಿಗ್ಗೆ 10.30 ಗಂಟೆಗೆ ಸೋಮವಾರಪೇಟೆ ಕೊಡವ ಸಮಾಜದಲ್ಲಿ ಸೋಮವಾರಪೇಟೆ ಬ್ಲಾಕ್ ಕಾಂಗ್ರೆಸ್ ಸಭೆ ಮತ್ತು ಅಪರಾಹ್ನ 2.30 ಗಂಟೆಗೆ ಕುಶಾಲನಗರ ಕಾಂಗ್ರೆಸ್ ಕಚೇರಿಯಲ್ಲಿ ಕುಶಾಲನಗರ ಬ್ಲಾಕ್ ಕಾಂಗ್ರೆಸ್ ಸಭೆ ಮತ್ತು ಏ.9 ರಂದು ಅಪರಾಹ್ನ 2.30 ಗಂಟೆಗೆ ಕಾರುಗುಂದ ಗೌಡ ಸಮಾಜದಲ್ಲಿ ನಾಪೆÇೀಕ್ಲು ಬ್ಲಾಕ್ ಕಾಂಗ್ರೆಸ್ ಸಭೆಯನ್ನು ಆಯೋಜಿಸಲಾಗಿದೆ.
ಸಭೆಯಲ್ಲಿ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ, ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಪಾಲ್ಗೊಳ್ಳಲಿದ್ದು, ಆಯಾ ಬ್ಲಾಕ್ ನ ಬೂತ್ ಅಧ್ಯಕ್ಷರುಗಳು, ಬಿಎಲ್‍ಎ ಗಳು, ವಲಯಾಧ್ಯಕ್ಷರುಗಳು, ಹಿರಿಯ ನಾಯಕರುಗಳು, ಕೆಪಿಸಿಸಿ ಸದಸ್ಯರುಗಳು, ಜಿಲ್ಲಾ ಹಾಗೂ ಬ್ಲಾಕ್ ಕಾಂಗ್ರೆಸ್ ಪದಾಧಿಕಾರಿಗಳು ಹಾಗೂ ಮುಂಚೂಣಿ ಘಟಕಗಳ ಜಿಲ್ಲಾ ಮತ್ತು ಬ್ಲಾಕ್ ಅಧ್ಯಕ್ಷರುಗಳು ಸಭೆಗೆ ಹಾಜರಾಗುವಂತೆ ಟಿ.ಪಿ.ರಮೇಶ್ ಮನವಿ ಮಾಡಿದ್ದಾರೆ.










