ಮಡಿಕೇರಿ ಏ.5 NEWS DESK : ಭಾರತ ಚುನಾವಣಾ ಆಯೋಗವು ಏ.26 ರಂದು ಲೋಕಸಭಾ ಸಾರ್ವತ್ರಿಕ ಚುನಾವಣೆ 2024 ರ ಸಂಬಂಧ ಕೊಡಗು ಜಿಲ್ಲೆಯಲ್ಲಿ ಮತದಾನ ದಿನವಾಗಿದ್ದು, ಈ ದಿನದಂದು ಜಿಲ್ಲೆಯಾದ್ಯಂತ ಎಲ್ಲಾ ಕಾರ್ಖಾನೆಗಳು, ಅಂಗಡಿಗಳು, ವಾಣಿಜ್ಯ ಸಂಸ್ಥೆಗಳು ಹಾಗೂ ಇತರೆ ಸಂಸ್ಥೆಗಳಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ, ಅರ್ಹ ಮತದಾರರಿಗೆ ವೇತನ ಸಹಿತ ರಜೆ ಘೋಷಿಸಲಾಗಿದ್ದು, ಸಂವಿಧಾನಾತ್ಮಕ/ಶಾಸನಾತ್ಮಕ ಹಕ್ಕಾದ ಮತವನ್ನು ಚಲಾಯಿಸುವುದಕ್ಕಾಗಿ ಎಲ್ಲಾ ಮಾಲೀಕರು/ ಸಂಸ್ಥೆಯವರು ಅನುವು ಮಾಡಿ ಕೊಡುವಂತೆ ಕೊಡಗು ಉಪವಿಭಾಗದ ಕಾರ್ಮಿಕ ಅಧಿಕಾರಿ ತಿಳಿಸಿದ್ದಾರೆ.










