ಮಡಿಕೇರಿ ಏ.5 NEWS DESK : ಜಿಲ್ಲೆಯ ಕುಡಿಯುವ ನೀರಿನ ಸಮಸ್ಯೆಯ ಗಂಭೀರತೆಯನ್ನು ಅಧಿಕಾರಿಗಳು ಅರಿತುಕೊಂಡು ಜನಸಾಮಾನ್ಯರಿಗೆ ಸಮರ್ಪಕವಾಗಿ ಕುಡಿಯುವ ನೀರನ್ನು ಪೂರೈಕೆ ಮಾಡಲು ಆದ್ಯತೆ ವಹಿಸಬೇಕು ಎಂದು ಜಿಲ್ಲಾಧಿಕಾರಿ ವೆಂಕಟ್ ರಾಜಾ ಸೂಚಿಸಿದರು.
ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ ಕುಡಿಯುವ ನೀರಿನ ಪೂರೈಕೆ ಕುರಿತು ಜರುಗಿದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಕ್ತ ನಿರ್ದೇಶನಗಳನ್ನು ನೀಡಿದರು.
ಜಿಲ್ಲೆಯ ನಗರ ಹಾಗೂ ಗ್ರಾಮೀಣ ಪ್ರದೇಶದಲ್ಲಿ ಕುಡಿಯುವ ನೀರು ಸರಬರಾಜಿಗೆ ತಾಲ್ಲೂಕು ಹಂತದಲ್ಲಿ ಟಾಸ್ಕ್ ಪೋರ್ಸ್ ಸಮಿತಿ ಸಭೆಗಳನ್ನು ನಡೆಸಿ ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕು. ಯಾವುದೇ ರೀತಿ ಕುಡಿಯುವ ನೀರಿನ ಸಮಸ್ಯೆ ಉಲ್ಬಣವಾಗದಂತೆ ಅಧಿಕಾರಿಗಳು ತಕ್ಷಣ ಸ್ಪಂದಿಸಿ ಸಮಸ್ಯೆಗೆ ಸೂಕ್ತ ಪರಿಹಾರ ಕಂಡುಕೊಳ್ಳಬೇಕು ಎಂದರು.
ಮಳೆಯ ಅಭಾವದಿಂದಾಗಿ ಜಿಲ್ಲೆಯ ಕೆಲವು ಗ್ರಾಮಗಳಲ್ಲಿ ಕುಡಿಯುವ ನೀರಿನ ಅಭಾವ ಎದುರಾಗಿದ್ದು, ಆ ಗ್ರಾಮಗಳಿಗೆ ಅಧಿಕಾರಿಗಳು ತೆರಳಿ ನೀರು ಪೂರೈಕೆಗೆ ಅಗತ್ಯ ಸಿದ್ಧತೆಗಳನ್ನು ಮಾಡಿಕೊಂಡು ನೀರು ಪೂರೈಕೆ ಮಾಡಬೇಕು. ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಿಸುತ್ತಿರುವ ಗ್ರಾಮಗಳಿಗೆ ಟ್ಯಾಂಕರ್ ಮೂಲಕ ನೀರು ಪೂರೈಕೆಗೆ ಮುಂದಾಗಬೇಕು. ಈ ಕುರಿತು ಸ್ಥಳೀಯ ಹಂತದ ಅಧಿಕಾರಿಗಳು ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು.
ಲೋಕಸಭಾ ಚುನಾವಣೆಗೆ ಈಗಾಗಲೇ ಅಧಿಸೂಚನೆ ಹೊರಡಿಸಿ ನಾಮಪತ್ರಗಳ ಸ್ವೀಕೃತಿಯು ಪೂರ್ಣಗೊಂಡಿದೆ. ಚುನಾವಣೆಗೆ ನಿಯೋಜಿತ ಅಧಿಕಾರಿ/ಸಿಬ್ಬಂದಿಗಳು ಕಾಲ ಕಾಲಕ್ಕೆ ಚುನಾವಣಾ ಆಯೋಗವು ನೀಡುವ ಮಾರ್ಗಸೂಚಿಗಳನ್ನು ಪಾಲಿಸಬೇಕು. ಯಾವುದೇ ಕಾರಣಕ್ಕೂ ಕರ್ತವ್ಯ ಲೋಪ ಸಹಿಸಲಾಗದು ಎಂದರು.
ಸಭೆಯಲ್ಲಿ ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ವರ್ಣಿತ್ ನೇಗಿ, ಅಪರ ಜಿಲ್ಲಾಧಿಕಾರಿ ಬಿ.ಎನ್.ವೀಣಾ, ಉಪ ವಿಭಾಗಾಧಿಕಾರಿ ವಿನಾಯಕ ನಾರ್ವಡೆ ಸೇರಿದಂತೆ ಜಿಲ್ಲಾ ಮಟ್ಟದ, ತಾಲ್ಲೂಕು ಮಟ್ಟದ ಅಧಿಕಾರಿಗಳು, ಆಯಾಯ ತಾಲ್ಲೂಕುಗಳ ತಹಶೀಲ್ದಾರರು, ತಾ.ಪಂ. ಕಾರ್ಯನಿರ್ವಹಣಾಧಿಕಾರಿಗಳು, ಸ್ಥಳೀಯ ಸಂಸ್ಥೆಗಳ ಮುಖ್ಯಸ್ಥರು ಉಪಸ್ಥಿತರಿದ್ದರು.
Breaking News
- *ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಹೆಗ್ಗಳಕ್ಕೆ ಸುವರ್ಣ ಕರ್ನಾಟಕ ರಾಜ್ಯೋತ್ಸವದ ಪ್ರಶಸ್ತಿ*
- *ನ.19 ರಂದು ಮಡಿಕೇರಿ ತಲುಪಲಿರುವ ಮದ್ರಾಸ್ ಎಂಜಿನಿಯರಿಂಗ್ ಆರ್ಮಿ ಗ್ರೂಪ್ನ ಬೈಕ್ ರ್ಯಾಲಿ*
- *ಫೀ.ಮಾ.ಕಾರ್ಯಪ್ಪ ಕಾಲೇಜ್ ನಲ್ಲಿ ಕನಕದಾಸ ಜಯಂತಿಯ ಅರ್ಥಪೂರ್ಣ ಆಚರಣೆ : ದಾಸ ಸಾಹಿತ್ಯಕ್ಕೆ ಮಹತ್ವದ ಕೊಡುಗೆ ನೀಡಿದ ಕನಕದಾಸರು : ಮೇಜರ್ ಡಾ.ರಾಘವ ಶ್ಲಾಘನೆ*
- *ನ.21 ರಂದು ಮಡಿಕೇರಿಯಲ್ಲಿ ರಕ್ತದಾನ ಮತ್ತು ಕಣ್ಣು ತಪಾಸಣಾ ಶಿಬಿರ*
- *ಮಡಿಕೇರಿಯಲ್ಲಿ ವಕೀಲರ ಕ್ರೀಡಾಕೂಟ : ಕ್ರೀಡಾ ಸ್ಫೂರ್ತಿ ಜೀವನಕ್ಕೂ ಸ್ಫೂರ್ತಿಯಾಗಲಿ : ಶಾಸಕ ಡಾ.ಮಂತರ್ ಗೌಡ*
- ಕನಾ೯ಟಕ ಪ್ಲಾಂಟಸ್೯ ಅಸೋಸಿಯೇಷನ್ ನ ವಾಷಿ೯ಕ ಸಮ್ಮೇಳನ : ಕಾಫಿ ಕೃಷಿಕರ ನೆರವಿಗೆ ಸಕಾ೯ರ ಧಾವಿಸಬೇಕು : ಮ್ಯಾಥ್ಯು ಅಬ್ರಾಹಂ*
- *ಡಾ.ಸೂರ್ಯ ಕುಮಾರ್ ಅವರ “ಮಂಗಳಿ” ಪುಸ್ತಕ ಬಿಡುಗಡೆ*
- *ಸಿದ್ದಾಪುರದಲ್ಲಿ ನೃತ್ಯ ಸಂಭ್ರಮ : ಗಮನ ಸೆಳೆದ ನೃತ್ಯ ವೈಭವ*
- *ಎಸ್.ಕೆ.ಎಸ್.ಎಸ್.ಎಫ್ ವಿರಾಜಪೇಟೆ ವಲಯ ಇಸ್ಲಾಮಿಕ್ ಕಲೋತ್ಸವ : ವಿರಾಜಪೇಟೆ ಯೂನಿಟ್ ಚಾಂಪಿಯನ್*
- *ಸುಂಟಿಕೊಪ್ಪ : ಸಂತಮೇರಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮಕ್ಕಳ ದಿನಾಚರಣೆ*