ಮಡಿಕೇರಿ ಏ.6 NEWS DESK : ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್ ಸಮಿತಿಯ ಉಪಾಧ್ಯಕ್ಷೆಯಾಗಿ ಕರ್ತಂಡ ಶೈಲಾ ಕುಟ್ಟಪ್ಪ ಆಯ್ಕೆಯಾಗಿದ್ದಾರೆ. ಅಖಿಲ ಭಾರತ ಮಹಿಳಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷೆ ಅಲ್ಕಾ ಲಂಬಾ ಅವರ ಆದೇಶದ ಮೇರೆಗೆ ಮಹಿಳಾ ಕಾಂಗ್ರೆಸ್ ರಾಜ್ಯಾಧ್ಯಕ್ಷೆ ಡಾ.ಬಿ.ಪುಷ್ಪ ಅಮರನಾಥ್ ಅವರು ಶೈಲಾ ಕುಟ್ಟಪ್ಪ ಅವರನ್ನು ನೇಮಕ ಮಾಡಿ ಪಕ್ಷದ ಮಹಿಳಾ ಘಟಕವನ್ನು ಸಂಘಟಿಸಲು ಸೂಚನೆ ನೀಡಿದ್ದಾರೆ.








