ಮಡಿಕೇರಿ ಏ.6 NEWS DESK : ವಿಶ್ವ ಆರೋಗ್ಯ ದಿನದ ಪ್ರಯುಕ್ತ ಉತ್ತಮ ಆರೋಗ್ಯವನ್ನು ಕಾಪಾಡಿಕೊಳ್ಳಲು, ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ವಿದ್ಯಾರ್ಥಿಗಳಿಂದ ತಂಬಾಕು ಸೇವನೆಯ ದುಷ್ಪರಿಣಾಮಗಳ ಕುರಿತು ಜನರಲ್ಲಿ ಅರಿವು ಮೂಡಿಸಲು ನಗರದ ರಾಜಸೀಟ್ ಮುಂಭಾಗದಲ್ಲಿ ಬೀದಿ ನಾಟಕ ನಡೆಯಿತು.
ಈ ಬೀದಿನಾಟಕದಲ್ಲಿ ಕಡ್ಡಿಪುಡಿ ಹಾಕಿ ಗಂಟಲಿನ ಕ್ಯಾನ್ಸರ್, ಮದ್ಯಪಾನ ಮತ್ತು ಧೂಮಪಾನದಿಂದ ಹೃದಯಾಘಾತ ಹಾಗೂ ಧೂಮಪಾನದ ಹೊಗೆಯ ಪ್ರಭಾವದಲ್ಲಿರುವ, ಚಟ ಇಲ್ಲದವರಿಗೂ ಆಗುವ ತೊಂದರೆಗಳ ಬಗ್ಗೆ ಮಾಹಿತಿ ನೀಡಲಾಯಿತು. ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ನಿರ್ದೇಶಕರಾದ ಡಾ.ವಿಶಾಲ್ ಕುಮಾರ್, ಪ್ರಾಂಶುಪಾಲರಾದ ಡಾ.ನರಸಿಂಹ ರೈ, ವೈದ್ಯಕೀಯ ಅಧೀಕ್ಷಕರಾದ ಡಾ.ಸೋಮಶೇಖರ್, ಜಿಲ್ಲಾ ಶಸ್ತ್ರ ಚಿಕಿತ್ಸಕರಾದ ಡಾ.ನಂಜುಂಡಯ್ಯ, ಮುಖ್ಯ ಆಡಳಿತಾಧಿಕಾರಿ ರೋಹಿಣಿ ಈ ಕಾರ್ಯಕ್ರಮಕ್ಕೆ ಮೆರಗು ನೀಡಿದರು.
ಬೀದಿ ನಾಟಕವನ್ನು ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಮೊದಲನೆಯ ಹಾಗೂ ಅಂತಿಮ ವರ್ಷದ ವೈದ್ಯಕೀಯ ವಿದ್ಯಾರ್ಥಿಗಳು, ಕಿವಿ, ಮೂಗು ಗಂಟಲಿನ ವಿಭಾಗದ ಮುಖ್ಯಸ್ಥರಾದ ಡಾ.ಶ್ವೇತ ಅವರು ಸಂಯೋಜಿಸಿದರು. ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸಲು ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ವೈದ್ಯರು ಹಾಜರಿದ್ದರು.