ಮಡಿಕೇರಿ ಏ.7 NEWS DESK : ಲೋಕಸಭಾ ಚುನಾವಣೆ ಹಿನ್ನೆಲೆ ಮೈಸೂರು- ಕೊಡಗು ಕ್ಷೇತ್ರದ ಅಭ್ಯರ್ಥಿ ಯದುವೀರ್ ಒಡೆಯರ್ ಅವರ ಪರ ಏ.8ರಂದು ಸೋಮವಾರಪೇಟೆ ಮಂಡಲದ ವಿವಿಧ ಭಾಗಗಳಲ್ಲಿ ಬಹಿರಂಗ ಪ್ರಚಾರ ಸಭೆ ನಡೆಯಲಿದೆ ಎಂದು ಬಿಜೆಪಿ ಸೋಮವಾರಪೇಟೆ ಮಂಡಲದ ಅಧ್ಯಕ್ಷ ಗೌತಮ್ ಗೌಡ ಹಾಗೂ ವಕ್ತಾರ ಬಲ್ಲಾರಂಡ ಕಂಠಿ ಕಾರ್ಯಪ್ಪ ತಿಳಿಸಿದ್ದಾರೆ.
ಸೋಮವಾರ ಬೆಳಿಗ್ಗೆ 9 ಗಂಟೆಗೆ ಮಾದಾಪುರ, 10 ಗಂಟೆಗೆ ಸುಂಟಿಕೊಪ್ಪ, 11.30 ಗಂಟೆಗೆ ಸೋಮವಾರಪೇಟೆ, ಮಧ್ಯಾಹ್ನ 2 ಗಂಟೆಗೆ ಶನಿವಾರಸಂತೆ, 3 ಗಂಟೆಗೆ ಕೊಡ್ಲಿಪೇಟೆ, ಸಂಜೆ 4 ಗಂಟೆಗೆ ಆಲೂರು ಸಿದ್ದಾಪುರ, 5 ಗಂಟೆಗೆ ಹೆಬ್ಬಾಲೆ, 6 ಗಂಟೆಗೆ ಕುಶಾಲನಗರ ಹಾಗೂ 7 ಗಂಟೆಗೆ ನೆಲ್ಯಹುದುಕೇರಿಯಲ್ಲಿ ಬಹಿರಂಗ ಪ್ರಚಾರ ಸಭೆ ನಡೆಯಲಿದೆ ಎಂದು ಅವರು ಪತ್ರಿಕಾ ಪ್ರಕಟಣೆ ನೀಡಿದ್ದಾರೆ.
ಅಭ್ಯರ್ಥಿ ಯದುವೀರ್ ಒಡೆಯರ್, ಪಕ್ಷದ ಹಿರಿಯ ಮುಖಂಡ ಹಾಗೂ ಮಾಜಿ ಸಚಿವ ಅಶ್ವಥ್ ನಾರಾಯಣ ಗೌಡ, ಸಂಸದ ಪ್ರತಾಪ್ ಸಿಂಹ, ಮಾಜಿ ಶಾಸಕರಾದ ಎಂ.ಪಿ.ಅಪ್ಪಚ್ಚು ರಂಜನ್, ಕೆ.ಜಿ.ಬೋಪಯ್ಯ, ಮಾಜಿ ವಿಧಾನ ಪರಿಷತ್ ಸದಸ್ಯರಾದ ಎಸ್.ಜಿ.ಮೇದಪ್ಪ, ಸುನಿಲ್ ಸುಬ್ರಮಣಿ ಬಿಜೆಪಿ ಜಿಲ್ಲಾಧ್ಯಕ್ಷ ನಾಪಂಡ ರವಿ ಕಾಳಪ್ಪ, ಮಾಜಿ ಅಧ್ಯಕ್ಷ ರಾಬಿನ್ ದೇವಯ್ಯ, ದಕ್ಷಿಣ ಕನ್ನಡ ಪ್ರಬಾರಿ ಬಿ.ಬಿ.ಭಾರತೀಶ್ ಸೇರಿದಂತೆ ಜೆಡಿಎಸ್ ಹಾಗೂ ಬಿಜೆಪಿ ಮುಖಂಡರು, ಹಿರಿಯರು ಸಭೆಯಲ್ಲಿ ಭಾಗವಹಿಸಲಿದ್ದಾರೆ.
ನಿಗಧಿತ ಸ್ಥಳದ ಸುತ್ತಮುತ್ತ ಇರುವ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಾರ್ಯಕರ್ತರು, ಮತದಾರ ಬಂಧುಗಳು ಅತಿ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಗೌತಮ್ ಗೌಡ ಹಾಗೂ ಕಂಠಿ ಕಾರ್ಯಪ್ಪ ಮನವಿ ಮಾಡಿದ್ದಾರೆ.