ಮಡಿಕೇರಿ ಏ.7 NEWS DESK : ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಸೋಲುವ ಭೀತಿಯನ್ನು ಎದುರಿಸುತ್ತಿದೆ. ಇದರಿಂದ ಹತಾಶೆಗೊಂಡಿರುವ ವಿರಾಜಪೇಟೆ ಕ್ಷೇತ್ರದ ಶಾಸಕರು ಬಿಜೆಪಿ ಅಭ್ಯರ್ಥಿ ಯದುವೀರ್ ಒಡೆಯರ್ ಅವರು ಜನರ ಕೈಗೆ ಸಿಗುವುದಿಲ್ಲವೆಂದು ಹೇಳಿಕೆ ನೀಡುವ ಮೂಲಕ ಮತದಾರರ ಹಾದಿ ತಪ್ಪಿಸುವ ಯತ್ನ ಮಾಡುತ್ತಿದ್ದಾರೆ ಎಂದು ಬಿಜೆಪಿ ವಿರಾಜಪೇಟೆ ಮಂಡಲದ ವಕ್ತಾರ ಚೆಪ್ಪುಡಿರ ರಾಕೇಶ್ ದೇವಯ್ಯ ಟೀಕಿಸಿದ್ದಾರೆ.
ಪತ್ರಿಕಾ ಪ್ರಕಟಣೆ ನೀಡಿರುವ ಅವರು ದೇಶದಲ್ಲಿ ರಾಜಪ್ರಭುತ್ವ ಕಾಲ ಮುಗಿದು ಪ್ರಜಾಪ್ರಭುತ್ವ ಬಂದಿದೆ. ಈ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಯದುವೀರ್ ಅವರು ಒಬ್ಬ ಸಾಮಾನ್ಯ ವ್ಯಕ್ತಿ ಮತ್ತು ಈಗ ಬಿಜೆಪಿಯ ಅಭ್ಯರ್ಥಿಯಾಗಿದ್ದಾರೆ. ಒಡೆಯರ್ ವಂಶಸ್ಥರಾಗಿ ಹಾಗೂ ಸಾಮಾನ್ಯರಲ್ಲಿ ಸಾಮಾನ್ಯರಾಗಿ ಜನರ ಸಂಕಷ್ಟದ ಬದುಕನ್ನು ಬಹಳ ಹತ್ತಿರದಿಂದ ಬಲ್ಲವರಾಗಿದ್ದಾರೆ ಎಂದು ತಿಳಿಸಿದ್ದಾರೆ.
ರಾಜವಂಶಸ್ಥರು ಅರಮನೆಯಲ್ಲಿದ್ದುಕೊಂಡೇ ಜನಸಾಮಾನ್ಯರ ಸಂಕಷ್ಟಗಳಿಗೆ ಸ್ಪಂದಿಸುತ್ತಿದ್ದ ಉದಾಹರಣೆಗಳು ಇತಿಹಾಸದ ಪುಟಗಳಲ್ಲಿದೆ. ರಾಜ್ಯದ ರೈತರು ಹಾಗೂ ಜನರಿಗಾಗಿ ತಮ್ಮ ಚಿನ್ನಾಭರಣಗಳನ್ನು ಅಡವಿಟ್ಟು ಕೆಆರ್‌ಎಸ್ ಅಣೆಕಟ್ಟು ನಿರ್ಮಾಣಕ್ಕೆ ಸಹಕಾರ ನೀಡಿದ್ದಾರೆ. ಜನರು ಇಂದಿಗೂ ಇದೆಲ್ಲವನ್ನು ಮರೆತಿಲ್ಲ, ಆದ್ದರಿಂದ ಯದುವೀರ್ ಅವರ ಗೆಲುವು ನಿಶ್ಚಿತವಾಗಿದ್ದು, ಇವರು ಸಂಸದರಾಗಿ ಜನಸಾಮಾನ್ಯರ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸಲಿದ್ದಾರೆ ಮತ್ತು ಅಭಿವೃದ್ಧಿ ಕಾರ್ಯಗಳಲ್ಲಿ ಪ್ರಗತಿ ಸಾಧಿಸಲಿದ್ದಾರೆ ಎಂದು ಸ್ಪಷ್ಟಪಡಿಸಿದ್ದಾರೆ.
ಬಿಜೆಪಿಯ ಪ್ರಾಮಾಣಿಕ ಕಾರ್ಯಕರ್ತರಾದ ನಾವು ಎದೆತಟ್ಟಿ ಹೇಳುತ್ತಿದ್ದೇವೆ “ರಾಜವಂಶಸ್ಥ ಯದುವೀರ್ ಅವರು ಅತಿ ಸುಲಭವಾಗಿ ಜನಸಾಮಾನ್ಯರಿಗೆ ಸಿಗಲಿದ್ದಾರೆ.” ಅವರ ಅನುಪಸ್ಥಿತಿಯ ಸಂದರ್ಭ ಕಾರ್ಯಕರ್ತರಾದ ನಾವು ಜನರ ಸಂಕಷ್ಟಗಳಿಗೆ ಸ್ಪಂದಿಸುತ್ತೇವೆ, ಸಂಸದರೊಂದಿಗೆ ಸಂಪರ್ಕ ಸಾಧಿಸುತ್ತೇವೆ. ಇದೇ ಕಾರಣದಿಂದ ಮತ್ತು ವಿಶ್ವಾಸದಿಂದ ಜನ ಬಿಜೆಪಿಗೆ ಅತಿಹೆಚ್ಚು ಮತಗಳನ್ನು ನೀಡಿ ಗೆಲ್ಲಿಸಲಿದ್ದಾರೆ. ಇದನ್ನು ಅರಿತಿರುವ ಶಾಸಕರು ಕಾಂಗ್ರೆಸ್ ಅಭ್ಯರ್ಥಿಯ ಪರ ಮಾತನಾಡದೆ ಬಿಜೆಪಿ ಅಭ್ಯರ್ಥಿಯನ್ನು ಟೀಕಿಸುವುದರಲ್ಲೇ ಕಾಲಹರಣ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.
ಯದುವೀರ್ ಅವರ ರಾಜವಂಶಸ್ಥ ಕುಟುಂಬ ಜಾತಿ, ಮತ ಬೇಧವಿಲ್ಲದೆ ಎಲ್ಲಾ ಧರ್ಮ, ಪಂಗಡದವರಿಗೂ ಸಹಾಯ ಮಾಡಿದೆ. ದಾನ ಧರ್ಮಗಳ ಮೂಲಕ ಹೊಸ ಜೀವನವನ್ನು ರೂಪಿಸಿಕೊಟ್ಟಿದೆ. ಮೈಸೂರು ಭಾಗದ ಜನ ಇಂದಿಗೂ ಒಡೆಯರ್ ಕುಟುಂಬದ ನೆರವನ್ನು ನೆನಪಿಸಿಕೊಳ್ಳುತ್ತಾರೆ. ಯದುವೀರ್ ಅವರ ಪರ ಎಲ್ಲರೂ ಮಾತನಾಡುತ್ತಿದ್ದಾರೆ. ಋಣ ತೀರಿಸುವ ಮತ್ತು ಮತ ನೀಡುವ ಭರವಸೆ ನೀಡುತ್ತಿದ್ದಾರೆ. ಮೈಸೂರು ಜಿಲ್ಲೆಯ ಎಲ್ಲಾ ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯ ಜನ ಒಡೆಯರ್ ಕುಟುಂಬದೊಂದಿಗೆ ಭಾವನಾತ್ಮಕ ಸಂಬಂಧ ಹೊಂದಿದ್ದಾರೆ. ಕೊಡಗಿನ ಜನರಿಗೂ ಯದುವೀರ್ ಅವರ ಬಗ್ಗೆ ಅಪಾರ ಗೌರವವಿದೆ. ಇದೇ ಕಾರಣದಿಂದ ಸುಮಾರು 2ಲಕ್ಷ ಮತಗಳ ಅಂತರದಿಂದ ಮೈಸೂರು- ಕೊಡಗು ಕ್ಷೇತ್ರದಲ್ಲಿ ಬಿಜೆಪಿ ಜಯಭೇರಿ ಬಾರಿಸಲಿದೆ ಎಂದು ರಾಕೇಶ್ ದೇವಯ್ಯ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಶಾಸಕರು ಬಿಜೆಪಿ ಅಭ್ಯರ್ಥಿಯ ಕುರಿತು ಕ್ಷುಲ್ಲಕ ಹೇಳಿಕೆ ನೀಡುವುದನ್ನು ಮೊದಲು ನಿಲ್ಲಿಸಿ ಕಾಂಗ್ರೆಸ್ ಅಭ್ಯರ್ಥಿ ಹೊಂದಿರುವ ಗುಣಲಕ್ಷಣಗಳನ್ನು ಗುಣಗಾನ ಮಾಡಲಿ ಎಂದು ತಿರುಗೇಟು ನೀಡಿದ್ದಾರೆ.
Breaking News
- *71ನೇ ಅಖಿಲ ಭಾರತ ಸಹಕಾರ ಸಪ್ತಾಹದ ಸಮಾರೋಪ ಸಮಾರಂಭ : ಹಿರಿಯರ ದೂರದೃಷ್ಟಿಯಿಂದ ಜಿಲ್ಲೆಯ ಸಹಕಾರ ಸಂಘಗಳು ಬಲಿಷ್ಠ : ಎ.ಕೆ.ಮನುಮುತ್ತಪ್ಪ*
- ಕೊಡಗು : ರಾಷ್ಟ್ರೀಯ ಗ್ರಂಥಾಲಯ ಸಪ್ತಾಹದ ಸಮಾರೋಪ : ಪುಸ್ತಕ ಅಧ್ಯಯನದಿಂದ ಜ್ಞಾನ ವೃದ್ಧಿ : ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ
- *ಮಡಿಕೇರಿಯಲ್ಲಿ ನವಜಾತ ಶಿಶು ಆರೈಕೆ ಸಪ್ತಾಹ : ನವಜಾತ ಶಿಶುವಿನ ಆರೈಕೆಗೆ ಹೆಚ್ಚಿನ ಆದ್ಯತೆ ನೀಡಿ : ಡಾ.ಮಧುಸೂಧನ್*
- *ಬಿಜೆಪಿಯಿಂದ ದಿನಪೂರ್ತಿ ಧರಣಿ ಸತ್ಯಾಗ್ರಹ*
- *ರಾಜ್ಯ ಸರ್ಕಾರದ ವಿರುದ್ಧ ಜನ ಜಾಗೃತರಾಗಬೇಕು : ಕೊಡಗು ಬಿಜೆಪಿ ಎಸ್ಟಿ ಮೋರ್ಚಾ ಕರೆ*
- *ನ.22 ರಂದು ವಿಶೇಷ ಚೇತನರಿಗೆ ಆಟೋಟ ಸ್ಪರ್ಧೆ*
- *“ತೋಕ್ ನಮ್ಮೆ” ಪ್ರಯುಕ್ತ ರಾಜ್ಯ ಮಟ್ಟದ “ಕೋಕನಟ್ ಶೂಟಿಂಗ್”*
- *ತೋಳೂರು ಶೆಟ್ಟಳ್ಳಿಯಲ್ಲಿ “ಶರಣ ಸಂಸ್ಕೃತಿ” ವಿಚಾರಗೋಷ್ಠಿ : ವಚನಗಳು ಸುಂದರ ಜೀವನದ ದೀವಿಗೆಗಳು : ಮೆ.ನಾ.ವೆಂಕಟನಾಯಕ್ ಅಭಿಮತ*
- *ರಾಷ್ಟ್ರೀಯ ಮಟ್ಟದ ಮುಕ್ತ ಕರಾಟೆ ಚಾಂಪಿಯನ್ಶಿಪ್ : ವಿರಾಜಪೇಟೆ ರೋಟರಿ ಶಾಲೆಯ ವಿದ್ಯಾರ್ಥಿಗಳ ಸಾಧನೆ*
- *ಜಿಲ್ಲಾಮಟ್ಟದ ಫುಟ್ಬಾಲ್ ಪಂದ್ಯಾವಳಿ : ಮೂರ್ನಾಡು ಪದವಿ ಪೂರ್ವ ಕಾಲೇಜಿನ ಬಾಲಕರ ತಂಡ ಚಾಂಪಿಯನ್*