ಮಡಿಕೇರಿ ಏ.7 NEWS DESK : ಲೋಕಸಭಾ ಚುನಾವಣೆಯ ಮತದಾನವು ಇದೇ ಏ.26ರಂದು ನಡೆಯಲಿದ್ದು, ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಎಂ.ಲಕ್ಷ್ಮಣ ಗೌಡ ಅವರ ಗೆಲುವಿಗೆ ಪ್ರತಿ ಮತಗಟ್ಟೆಯ ಕಾಂಗ್ರೆಸ್ ಸಮಿತಿ ಅಧ್ಯಕ್ಷರು, ಬಿಎಲ್‌ಎ ಗಳು, ಡೆಲಿಗೇಟರ್‌ಗಳು, ವಲಯ ಬ್ಲಾಕ್ ಮತ್ತು ಜಿಲ್ಲಾ ಮಟ್ಟದ ಪಕ್ಷದ ಪದಾಧಿಕಾರಿಗಳು, ವಿವಿಧ ಮುಂಚೂಣಿ ಘಟಕದ ಅಧ್ಯಕ್ಷರುಗಳು ಶಕ್ತಿಮೀರಿ ಶ್ರಮಿಸಬೇಕೆಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಧರ್ಮಜ ಉತ್ತಪ್ಪ ಕರೆ ನೀಡಿದ್ದಾರೆ.
ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಮಡಿಕೇರಿ ಬ್ಲಾಕ್ ಮತ್ತು ಮಡಿಕೇರಿ ನಗರ ಕಾಂಗ್ರೆಸ್ ಮತಗಟ್ಟೆ ಸಮಿತಿ ಅಧ್ಯಕ್ಷರುಗಳ, ಬಿಎಲ್‌ಎ ಗಳ ಹಾಗೂ ವಲಯ ಕಾಂಗ್ರೆಸ್ ಅಧ್ಯಕ್ಷರುಗಳ ಸಭೆಯನ್ನುದ್ದೇಶಿಸಿ ಅವರು ಮಾತನಾಡಿದರು.
ಮಡಿಕೇರಿ ಬ್ಲಾಕಿನಲ್ಲಿ 72 ಮತಗಟ್ಟೆಗಳಿದ್ದು, ಕಳೆದ ವಿಧಾನಸಭಾ ಚುನಾವಣೆಯಲ್ಲಿ ನಮ್ಮ ಪಕ್ಷ ಗಳಿಸಿದ ಮತಕ್ಕಿಂತ ಹೆಚ್ಚಿನ ಮತವನ್ನು ಪಡೆಯುವಲ್ಲಿ ಕಾರ್ಯಕರ್ತರು ಮುಂದಾಗಬೇಕು ಹಾಗೂ ಸರ್ಕಾರ ಮಾಡಿರುವ ಕಲ್ಯಾಣ ಕಾರ್ಯಕ್ರಮಗಳನ್ನು ಮುಂದಿಟ್ಟುಕೊಂಡು ಮನೆ ಮನೆಗೆ ಭೇಟಿ ನೀಡಿ ಕಾಂಗ್ರೆಸ್ ಪಕ್ಷಕ್ಕೆ ಮತಯಾಚಿಸಬೇಕೆಂದರು.
ಕೊಡಗು ಜಿಲ್ಲಾ ಕಾಂಗ್ರೆಸ್‌ನ ಪ್ರಚಾರ ಸಮಿತಿ ಅಧ್ಯಕ್ಷರಾದ ಟಿ.ಪಿ.ರಮೇಶ್ ಮಾತನಾಡಿ, ಕಳೆದ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ರಾಜ್ಯದಲ್ಲಿ ನಮ್ಮ ಪಕ್ಷ ಅಧಿಕಾರಕ್ಕೆ ಬಂದಲ್ಲಿ ಪಕ್ಷ ಘೋಷಣೆ ಮಾಡಿದ ಐದು ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸಲು ಮುಂದಾಗುವುದಾಗಿ ಮತದಾರರಿಗೆ ಗ್ಯಾರಂಟಿ ಕಾರ್ಡ್ ಗಳನ್ನು ನೀಡಿ ಅವರೆಲ್ಲರ ಬೆಂಬಲದಿಂದ ನಮ್ಮ ಸರ್ಕಾರ ಅಧಿಕಾರಕ್ಕೆ ಬಂತು. ನುಡಿದಂತೆ ನಡೆದ ಸರ್ಕಾರ ಐದು ಗ್ಯಾರಂಟಿ ಯೋಜನೆಗಳಾದ ಗೃಹಲಕ್ಷ್ಮಿ, ಅನ್ನಭಾಗ್ಯ, ಗೃಹಜ್ಯೋತಿ, ಉಚಿತ ಪ್ರಯಾಣ ಮತ್ತು ಪದವಿದರ ಹಾಗೂ ಡಿಪ್ಲೋಮಾದಾವರಿಗೆ ನೀಡಿದ ಭರವಸೆಯಂತೆ ಗ್ಯಾರಂಟಿಗಳನ್ನು ಅನುಷ್ಠಾನಗೊಳಿಸಿದೆ ಎಂದರು.
ಕೇಂದ್ರದಲ್ಲಿ ಈ ಬಾರಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಐದು ಪ್ರಮುಖ ಗ್ಯಾರಂಟಿಗಳೊಂದಿಗೆ 20 ವಿಶೇಷ ಕಾರ್ಯಕ್ರಮಗಳನ್ನು ತನ್ನ ಪ್ರಣಾಳಿಕೆಯಲ್ಲಿ ತಿಳಿಸಿದೆ. ಅದರಲ್ಲಿ ಐದು ಭಾಗ್ಯಗಳಾದ ಯುವ ನ್ಯಾಯ, ಪಾಲುದಾರಿಕೆ ನ್ಯಾಯ, ಮಹಿಳಾ ನ್ಯಾಯ, ಶ್ರಮಿಕ ನ್ಯಾಯ ಹಾಗೂ ರೈತರ ಸಾಲಮನ್ನಾ ನ್ಯಾಯವನ್ನು ಸೇರಿಸಿದೆ ಎಂದರು.
ಮಡಿಕೇರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹೆಚ್.ಎ.ಹಂಸ, ನಗರಾಧ್ಯಕ್ಷ ಬಿ.ವೈ.ರಾಜೇಶ್, ವಿಧಾನಸಭಾ ಕ್ಷೇತ್ರದ ಪ್ರಚಾರ ಸಮಿತಿ ಅಧ್ಯಕ್ಷ ಹೆಚ್.ಕೆ.ನಟೇಶ್ ಗೌಡ, ಮಡಿಕೇರಿ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಮಂದ್ರಿರ ಮೋಹನ್ ದಾಸ್ ಹಾಗೂ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೊಲ್ಯದ ಗಿರೀಶ್ ಮಾತನಾಡಿದರು.
ವೇದಿಕೆಯಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎಸ್.ಐ.ಮುನೀರ್ ಅಹ್ಮದ್, ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಎಂ.ಎ.ಹನೀಫ್, ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಮಿತಿ ಸಂಯೋಜಕ ತೆನ್ನಿರಾ ಮೈನಾ, ಜಿಲ್ಲಾ ಕಾಂಗ್ರೆಸ್ ಕಾರ್ಮಿಕ ಘಟಕದ ಅಧ್ಯಕ್ಷ ದಿನೇಶ್ ಶೆಟ್ಟಿ, ಜಿಲ್ಲಾ ಕಾಂಗ್ರೆಸ್ ಸೇವಾದಳ ಸಮಿತಿಯ ಅಧ್ಯಕ್ಷ ಕಾನೆಹಿತ್ಲು ಮೊಣ್ಣಪ್ಪ ಮತ್ತಿತರರು ಹಾಜರಿದ್ದರು.
ಮಡಿಕೇರಿ ಬ್ಲಾಕ್ ಪ್ರಚಾರ ಸಮಿತಿ ಅಧ್ಯಕ್ಷ ಪ್ರಕಾಶ್ ಆಚಾರ್ಯ ಸ್ವಾಗತಿಸಿದರು, ಮಡಿಕೇರಿ ಬ್ಲಾಕ್ ಸಮಿತಿ ಉಪಾಧ್ಯಕ್ಷ ರಾವೂಫ್ ವಂದಿಸಿದರು.
Breaking News
- *ನಮ್ಮ ಶೌಚಾಲಯ ನಮ್ಮ ಗೌರವ ವಿಶೇಷ ಆಂದೋಲನಕ್ಕೆ ಚಾಲನೆ*
- *ಕೊಡಗಿನ ನಾಲ್ವರಿಗೆ ಶ್ರೇಷ್ಠ ಸಹಕಾರಿ ಪ್ರಶಸ್ತಿ ಪ್ರದಾನ*
- *71ನೇ ಅಖಿಲ ಭಾರತ ಸಹಕಾರ ಸಪ್ತಾಹದ ಸಮಾರೋಪ ಸಮಾರಂಭ : ಹಿರಿಯರ ದೂರದೃಷ್ಟಿಯಿಂದ ಜಿಲ್ಲೆಯ ಸಹಕಾರ ಸಂಘಗಳು ಬಲಿಷ್ಠ : ಎ.ಕೆ.ಮನುಮುತ್ತಪ್ಪ*
- ಕೊಡಗು : ರಾಷ್ಟ್ರೀಯ ಗ್ರಂಥಾಲಯ ಸಪ್ತಾಹದ ಸಮಾರೋಪ : ಪುಸ್ತಕ ಅಧ್ಯಯನದಿಂದ ಜ್ಞಾನ ವೃದ್ಧಿ : ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ
- *ಮಡಿಕೇರಿಯಲ್ಲಿ ನವಜಾತ ಶಿಶು ಆರೈಕೆ ಸಪ್ತಾಹ : ನವಜಾತ ಶಿಶುವಿನ ಆರೈಕೆಗೆ ಹೆಚ್ಚಿನ ಆದ್ಯತೆ ನೀಡಿ : ಡಾ.ಮಧುಸೂಧನ್*
- *ಬಿಜೆಪಿಯಿಂದ ದಿನಪೂರ್ತಿ ಧರಣಿ ಸತ್ಯಾಗ್ರಹ*
- *ರಾಜ್ಯ ಸರ್ಕಾರದ ವಿರುದ್ಧ ಜನ ಜಾಗೃತರಾಗಬೇಕು : ಕೊಡಗು ಬಿಜೆಪಿ ಎಸ್ಟಿ ಮೋರ್ಚಾ ಕರೆ*
- *ನ.22 ರಂದು ವಿಶೇಷ ಚೇತನರಿಗೆ ಆಟೋಟ ಸ್ಪರ್ಧೆ*
- *“ತೋಕ್ ನಮ್ಮೆ” ಪ್ರಯುಕ್ತ ರಾಜ್ಯ ಮಟ್ಟದ “ಕೋಕನಟ್ ಶೂಟಿಂಗ್”*
- *ತೋಳೂರು ಶೆಟ್ಟಳ್ಳಿಯಲ್ಲಿ “ಶರಣ ಸಂಸ್ಕೃತಿ” ವಿಚಾರಗೋಷ್ಠಿ : ವಚನಗಳು ಸುಂದರ ಜೀವನದ ದೀವಿಗೆಗಳು : ಮೆ.ನಾ.ವೆಂಕಟನಾಯಕ್ ಅಭಿಮತ*