ಮಡಿಕೇರಿ ಏ.7 NEWS DESK : ಮೈಸೂರು- ಕೊಡಗು ಲೋಕಸಭಾ ಕ್ಷೇತ್ರದಲ್ಲಿ ನಿಧಾನವಾಗಿ ಲೋಕಸಭಾ ಚುನಾವಣೆ ಕಾವೇರುತ್ತಿದೆ. ಇದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪ್ರತಿಷ್ಠೆಯ ಕ್ಷೇತ್ರವಾಗಿರುವುದರಿಂದ ಎಂ.ಲಕ್ಷ್ಮಣ್ ಗೌಡ ಅವರನ್ನು ಗೆಲ್ಲಿಸಲು ಕಾಂಗ್ರೆಸ್ ಇನ್ನಿಲ್ಲದ ಕಸರತ್ತು ಮಾಡುತ್ತಿದೆ.
ಸ್ವತ: ಮುಖ್ಯಮಂತ್ರಿಗಳು ಏ.14 ರಂದು ಕೊಡಗು ಜಿಲ್ಲೆಗೆ ಭೇಟಿ ನೀಡಿ ಕಾಂಗ್ರೆಸ್ ಪರ ಪ್ರಚಾರ ಮಾಡಲಿದ್ದಾರೆ. ಅಂದು ಬೆಳಗ್ಗೆ 11 ಗಂಟೆಗೆ ಮಡಿಕೇರಿ ಮತ್ತು ಸಂಜೆ 4 ಗಂಟೆಗೆ ವಿರಾಜಪೇಟೆ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ.
ಇವರೊಂದಿಗೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಚಿವರುಗಳು ಹಾಗೂ ಅಭ್ಯರ್ಥಿ ಎಂ.ಲಕ್ಷ್ಮಣ್ ಗೌಡ ಅವರುಗಳು ಹಾಜರಿರುವರು ಎಂದು ಕಾಂಗ್ರೆಸ್ ಪ್ರಮುಖರು ತಿಳಿಸಿದ್ದಾರೆ.










