ಮಡಿಕೇರಿ ಏ.7 NEWS DESK : ಬಿಜೆಪಿ ಯುವಮೋರ್ಚಾ ಮಡಿಕೇರಿ ಗ್ರಾಮಾಂತರ ಮಂಡಲದ ಮೊದಲ ಕಾರ್ಯಕಾರಿಣಿ ಸಭೆ ಪಕ್ಷದ ಕಚೇರಿಯಲ್ಲಿಮಂಡಲ ಯುವಮೋರ್ಚಾ ಅಧ್ಯಕ್ಷ ಚೇತನ್ ಬಂಗೇರ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಯುವಮೋರ್ಚಾದ ನೂತನ ಪದಾಧಿಕಾರಿಗಳಿಗೆ ಅದೇಶಪತ್ರವನ್ನು ವಿತರಿಸಿ ಮಾತನಾಡಿದ ಅವರು ಮುಂದಿನ ದಿನಗಳಲ್ಲಿ ಪಕ್ಷದ ಸಂಘಟನಾತ್ಮಕ ಚಟುವಟಿಕೆಗಳಲ್ಲಿ ಯಾವ ರೀತಿಯಾಗಿ ತೊಡಗಿಸಿಕೊಳ್ಳ ಬೇಕು ಮತ್ತು ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಯುವಮೋರ್ಚಾದ ಸದಸ್ಯರ ಕಾರ್ಯ ಚಟುವಟಿಕೆಗಳ ಬಗ್ಗೆ ವಿವರಿಸಿದರು. ಎಲ್ಲಾ ಶಕ್ತಿಕೇಂದ್ರ ಅಥವಾ ಬೂತ್ ಮಟ್ಟದಲ್ಲಿ ಯುವಮೋರ್ಚಾದ ತಂಡಗಳ ರಚನೆಗೆ ಸೂಚಿಸಲಾಯಿತು. ಜಿಲ್ಲಾ ಯುವಮೋರ್ಚಾದ ಪ್ರಧಾನ ಕಾರ್ಯದರ್ಶಿ ವಿನೋದ್ ಸಂಘಟನಾತ್ಮಕ ವಿಚಾರಗಳ ಬಗ್ಗೆ ಮಾಹಿತಿ ನೀಡಿದರು. ಯುವಮೋರ್ಚಾದ ಮಡಿಕೇರಿ ಗ್ರಾಮಾಂತರ ಮಂಡಲದ ಪ್ರಧಾನ ಕಾರ್ಯದರ್ಶಿ ಪ್ರವೀಣ್ ಮಜೀಕೊಡಿ ಸ್ವಾಗತಿಸಿದರು, ಮತ್ತೊಬ್ಬ ಪ್ರಧಾನ ಕಾರ್ಯದರ್ಶಿ ದರ್ಶನ್ ದಂಬೆಕೋಡಿ ವಂದಿಸಿದರು.











