ಸುಂಟಿಕೊಪ್ಪ ಏ.8 NEWS DESK : ಕೊಡಗರಹಳ್ಳಿಯ ಶ್ರೀ ಬೈತೂರಪ್ಪ ಪೊವ್ವದಿ ಬಸವೇಶ್ವರ ದೇವಾಲಯದಲ್ಲಿ ಏ.9 ರಂದು ಚಂದ್ರಮಾನ ಯುಗಾದಿ ಹಬ್ಬವನ್ನು ಆಚರಿಸಲಾಗುತ್ತದೆ.
ಅಂದು ದೇವಾಲಯದಲ್ಲಿ ವಿಶೇಷ ಪೂಜೆ, ಪಂಚಾಂಗ ಶ್ರವಣ ಹಾಗೂ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ನಡೆಯಲಿದೆ.
ಮಹಾಪೂಜೆಯ ಬಳಿಕ ಭಕ್ತಾಧಿಗಳಿಗೆ ಅನ್ನದಾನ ನಡೆಯಲಿದೆ ಎಂದು ದೇವಸ್ಥಾನ ಆಡಳಿತ ಮಂಡಳಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.
ಏ.29 ರಂದು ದೇವಾಲಯದ ವಾರ್ಷಿಕೋತ್ಸವ ನಡೆಯಲಿದ್ದು, ಅಂದು ಬೆಳಿಗ್ಗೆ 7 ಗಂಟೆಗೆ ಮಹಾಗಣಪತಿ ಹೋಮ ನಡೆಯಲಿದೆ. ಮಹಾಪೂಜೆಯ ಬಳಿಕ ಅನ್ನ ಸಂತರ್ಪಣೆ ನಡೆಯಲಿದೆ. ವಾರ್ಷಿಕೋತ್ಸವ ದ ಅಂಗವಾಗಿ ವಧ್ಯಾಹ್ನ ದೇವಾಲಯದ ತಕ್ಕರ ಮನೆಯಿಂದ ಭಂಡಾರ ತಂದು ದೇವಾಲಯದಲ್ಲಿ ಹಬ್ಬದ ವಿಧಿವಿಧಾನಗಳು ನಡೆಯಲಿದೆ.
ವಾರ್ಷಿಕೋತ್ಸವದ ಹಿನ್ನಲೆಯಲ್ಲಿ ಏ.18 ರಂದು ದೇವಾಲಯದಲ್ಲಿ ಹಬ್ಬದ ಕಟ್ಟು ಬಿಳಲಿದೆ. ಏ.26 ರಂದು ಶ್ರೀ ಬಸವೇಶ್ವರ ದೇವರ ಉತ್ಸವವು ನಡೆಯಲಿದೆ ಎಂದು ದೇವಸ್ಥಾನ ಆಡಳಿತ ಮಂಡಳಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.








