ನಾಪೋಕ್ಲು ಏ.11 NEWS DESK : ಪಾಲೂರು ಗ್ರಾಮದ ಶ್ರೀ ಮಹಾಲಿಂಗೇಶ್ವರ ದೇವಾಲಯದ ವಾರ್ಷಿಕ ಉತ್ಸವ ಏ.13 ರಿಂದ 19 ರವರೆಗೆ ನಡೆಯಲಿದೆ.
ಏ.13 ರಂದು ಮಹಾಲಿಂಗೇಶ್ವರ ದೇವರ ಮೂಲ ಸ್ಥಾನದಲ್ಲಿ ಪೂಜೆ ಸಲ್ಲಿಸುವುದರೊಂದಿಗೆ ವಾರ್ಷಿಕ ಹಬ್ಬಕ್ಕೆ ಚಾಲನೆ ನೀಡಲಾಗುವುದು, ಏ.14 ರಂದು ಗಣ ಹೋಮ ಮತ್ತು ಕೊಡಿಮರ ಏರಿಸುವುದು, ಏ.15 ರಂದು ಬೆಳಿಗ್ಗೆ ಮಧ್ಯಾಹ್ನ ಮತ್ತು ರಾತ್ರಿ ಉತ್ಸವ ಬಲಿ ನಡೆಯಲಿದೆ.
ಏ.16 ರಂದು ಉತ್ಸವ ಬಲಿ ಮತ್ತು ರಾತ್ರಿ ದೀಪಾರಾಧನೆ ನಡೆಯಲಿದೆ. ಏ.17ರಂದು ಹಗಲು ಉತ್ಸವಬಲಿ ನಡೆದು ಸಂಜೆ ದೀಪಾರಾಧನೆ ನಡೆಯಲಿದೆ. ಏ.18 ರಂದು ಪಟ್ಟಣಿ ಹಬ್ಬ ಜರುಗಲಿದೆ. ಬೆಳಗ್ಗೆ ತುಲಾಭಾರ, ಮಧ್ಯಾಹ್ನ ಎತ್ತು ಪೋರಾಟ, ಬಳಿಕ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದ್ದು, ಅಪರಾಹ್ನ ಜೋಡಿ ದೇವರ ನೃತ್ಯೋತ್ಸವ ನಡೆಯಲಿದೆ.
ಭಕ್ತಾಧಿಗಳಿಗೆ ಅನ್ನಸಂತರ್ಪಣೆ ನೆರವೇರಲಿದ್ದು, ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಮಹಾಲಿಂಗೇಶ್ವರ ವಾರ್ಷಿಕೋತ್ಸವ ಸಮಿತಿಯ ಅಧ್ಯಕ್ಷರು ಹಾಗೂ ಸದಸ್ಯರು ಕೋರಿದ್ದಾರೆ.
ವರದಿ : ದುಗ್ಗಳ ಸದಾನಂದ.







