ಮಡಿಕೇರಿ ಏ.11 NEWS DESK : ಹಂಡ್ಲಿ ವಲಯ ಮಟ್ಟದ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಚುನಾವಣಾ ಪ್ರಚಾರ ಸಭೆ ನಡೆಯಿತು.
ಮೈಸೂರು-ಕೊಡಗು ಕಾಂಗ್ರೆಸ್ ಅಭ್ಯರ್ಥಿ ಎಂ.ಲಕ್ಷ್ಮಣ್ ಗೌಡ ಅವರ ಪರ ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಮತಯಾಚಿಸಿದರು.
ಈ ಸಂದರ್ಭ ಕ್ಷೇತ್ರದ ಅಭ್ಯರ್ಥಿ ಲಕ್ಷ್ಮಣ್ ಗೌಡ ಮಾತನಾಡಿ ಕಾಂಗ್ರೆಸ್ ಪಕ್ಷದ ಪ್ರಣಾಳಿಕೆಯಲ್ಲಿನ ಕಾರ್ಯಕ್ರಮಗಳನ್ನು ಜನರಿಗೆ ಮನವರಿಕೆ ಮಾಡಿದರು. ಈ ಬಾರಿ ನಿಮ್ಮ ಸೇವೆ ಮಾಡಲು ಅವಕಾಶ ಮಾಡಿಕೊಟ್ಟರೆ ತಿಂಗಳಿಗೆ 15 ದಿನ ಮಡಿಕೇರಿಯಲ್ಲಿ ವಾಸ್ತವ್ಯ ಹೂಡಿ, ಕಾರ್ಯನಿರ್ವಹಿಸುದಾಗಿ ಜನರಿಗೆ ಭರವಸೆ ನೀಡಿದರು.
ಈ ಸಂದರ್ಭ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಧರ್ಮಜಾ ಉತ್ತಪ್ಪ, ಪ್ರಚಾರ ಸಮಿತಿಯ ಅಧ್ಯಕ್ಷ ಟಿ.ಪಿ.ರಮೇಶ್, ಸೋಮವಾರಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ.ಬಿ.ಸತೀಶ್ ಹಾಗೂ ಕಾಂಗ್ರೆಸ್ ಪಕ್ಷದ ಮುಖಂಡರುಗಳು, ಡಿಸಿಸಿ ಸದಸ್ಯರು, ಮುಂಚೂಣಿ ಘಟಕಗಳ ಅಧ್ಯಕ್ಷರು, ಸೋಮವಾರಪೇಟೆ ಬ್ಲಾಕ್ ಕಾಂಗ್ರೆಸ್ ಪದಾಧಿಕಾರಿಗಳು, ನಾಮ ನಿರ್ದೇಶಿತ ಸದಸ್ಯರುಗಳು, ವಲಯ ಅಧ್ಯಕ್ಷರು, ಬೂತ್ ಅಧ್ಯಕ್ಷರುಗಳು ಹಾಗೂ ಕಾರ್ಯಕರ್ತರು ಪಾಲ್ಗೊಂಡಿದ್ದರು.








