ಮಡಿಕೇರಿ ಏ.11 NEWS DESK : ವಿರಾಜಪೇಟೆ ವಿಧಾನ ಸಭಾ ಕ್ಷೇತ್ರದ ವ್ಯಾಪ್ತಿಗೆ ಒಳಪಡುವ ಪೊನ್ನಂಪೇಟೆ ತಾಲೂಕಿನ ಕುಟ್ಟ ಹಾಗೂ ಹುದಿಕೇರಿಯಲ್ಲಿ ಮೈಸೂರು-ಕೊಡಗು ಲೋಕಸಭಾ ಅಭ್ಯರ್ಥಿ ಎಂ.ಲಕ್ಷ್ಮಣ್ ಗೌಡ ಅವರ ಪರ ಬಿರುಸಿನ ಮತಯಾಚನೆ ನಡೆಯಿತು.
ಶಾಸಕ ಎ.ಎಸ್.ಪೊನ್ನಣ್ಣ ಅವರ ನೇತೃತ್ವದಲ್ಲಿ ನೇತೃತ್ವದಲ್ಲಿ ಪಟ್ಟಣದ ಬಸ್ ನಿಲ್ದಾಣ, ಅಂಗಡಿ ಮುಂಗಟ್ಟುಗಳು ಹಾಗೂ ಹೋಟೆಲ್ ಗಳಿಗೆ ತೆರಳಿ ಮತ ಯಾಚಿಸಿದರು.
ಮತದಾರರ ಹಕ್ಕುಗಳ ಬಗ್ಗೆ ಅರಿವು ಮೂಡಿಸಿ, ಜನಸಾಮಾನ್ಯರು, ಕೂಲಿ ಕಾರ್ಮಿಕರಿಗೆ ಜೀವನ ನೆಡೆಸಲು ಬೇಕಾದ ಸೌಲಭ್ಯ ಒದಗಿಸಲು ಕೇಂದ್ರದಲ್ಲಿ ಮತ್ತೆ ಕಾಂಗ್ರೆಸ್ ಪಕ್ಷದ ಅಗತ್ಯ ಇದೆ ಎಂದರು.
ಈ ಸಂದರ್ಭ ಶಾಸಕ ಎ.ಎಸ್.ಪೊನ್ನಣ್ಣ ಮಾತನಾಡಿ,ಲಕ್ಷ್ಮಣ್ ಅವರು ಸರಳ ವ್ಯಕ್ತಿತ್ವ ಹೊಂದಿವರಾಗಿದ್ದು, ಜನಸಾಮಾನ್ಯರ ಸಮಸ್ಯೆಗಳನ್ನು ಬಲ್ಲವರಾಗಿದ್ದಾರೆ. ಈ ಹಿಂದೆ ಇದ್ದ ಸಂಸದ ಪ್ರತಾಪ್ ಸಿಂಹ ಕೊಡಗನ್ನು ಸಂಪೂರ್ಣ ನಿರ್ಲಕ್ಷಿಸಿದ್ದು, ಆದರೆ ಲಕ್ಷ್ಮಣ್ ಅವರು ಕೊಡಗಿನಲ್ಲಿ 15 ದಿನಗಳ ಕಾಲ ನೋಡಬಹುದು ಎಂದು ಭರವಸೆ ವ್ಯಕ್ತಪಡಿದರು. ಈ ಬಾರಿ ಲಕ್ಷ್ಮಣ್ ಅವರು ಗೆಲ್ಲುತ್ತಾರೆ ಎಂಬ ವಿಶ್ವಾಸ ನನಗಿದೆ ಎಂದು ಹೇಳಿದರು.
ಅಭ್ಯರ್ಥಿ ಲಕ್ಷ್ಮಣ್ ಅವರು ಮಾತನಾಡಿ, ಈ ಚುನಾವಣೆ ಬಹಳ ಮಹತ್ವವಾದ ಚುನಾವಣೆ. ಚುನಾವಣೆಯಲ್ಲಿ ಸೂಕ್ತ ವ್ಯಕ್ತಿಯನ್ನು ಆಯ್ಕೆ ಮಾಡುವ ಜವಾಬ್ದಾರಿ ನಿಮ್ಮ ಕೈಯಲ್ಲಿ ಇದೆ. ಬಿಜೆಪಿ ನೇತೃತ್ವದ ಕೇಂದ್ರ ಸರಕಾರ ಪೊಳ್ಳು ಭರವಸೆಗಳ ಮೂಲಕ ಆಡಳಿತ ನಡೆಸುತ್ತಿದೆ. ಬಿಜೆಪಿ ಧರ್ಮದ ಹೆಸರಿನಲ್ಲಿ ರಾಜಕಾರಣ ಮಾಡಿ ಸಮಾಜದಲ್ಲಿ ಒಡಕು ಮೂಡಿಸುತ್ತಿದೆ. ಜನಸಾಮಾನ್ಯರ ಕಷ್ಟಗಳಿಗೆ ಸ್ಪಂದಿಸುವ ಪ್ರಾಮಾಣಿಕತೆ ಬಿಜೆಪಿಗೆ ಇಲ್ಲವೆಂದು ಆರೋಪಿಸಿದರು. ರಾಜ್ಯ ಕಾಂಗ್ರೆಸ್ ಸರಕಾರ ಎಲ್ಲರಿಗೂ ಸಹಕಾರಿ ಆಗಲಿ ಎಂದು ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದು ಯಶಸ್ವಿಯಾಗಿದೆ. ಈ ಯೋಜನೆಗಳಿಂದ ಜನ ಸಂತೃಪ್ತಿಯಿಂದ ಇದ್ದಾರೆ. ಅಭಿವೃದ್ಧಿ ಕಾರ್ಯಗಳು ಕೂಡ ಜನರ ನಿರೀಕ್ಷೆಯಂತೆ ನಡೆಯುತ್ತಿದೆ ಎಂದರು.
ಅಭಿವೃದ್ದಿ ಕಾರ್ಯಗಳನ್ನು ಎಂದಿಗೂ ಕುಂಠಿತ ಗೊಳ್ಳಬಾರದು. ಅದಕ್ಕೆ ನಮ್ಮ ಕಾಂಗ್ರೆಸ್ ಪಕ್ಷ ಅವಕಾಶ ಮಾಡಿ ಕೊಡುವುದಿಲ್ಲ. ಕಾಂಗ್ರೆಸ್ ಗೆದ್ದರೆ ಮತ್ತಷ್ಟು ಅನುದಾನ ವನ್ನು ನಿಮ್ಮ ಕ್ಷೇತ್ರಕ್ಕೆ ಸಿಎಂ ನೀಡುತ್ತಾರೆ. ಆದ್ದರಿಂದ ಈ ಬಾರಿಯ ಚುನಾವಣೆಯಲ್ಲಿ ನನ್ನನ್ನು ಗೆಲ್ಲಿಸುವ ಮೂಲಕ ಕ್ಷೇತ್ರದ ಸೇವೆಗೆ ನನಗೆ ಅವಕಾಶ ಕಲ್ಪಿಸುವಂತೆ ಮನವಿ ಮಾಡಿದರು.
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಧರ್ಮಜ ಉತ್ತಪ್ಪ, ವಿಧಾನ ಪರಿಷತ್ ಮಾಜಿ ಸದಸ್ಯೆ ವೀಣಾ ಅಚ್ಚಯ್ಯ ಬ್ಲಾಕ್ ಅಧ್ಯಕ್ಷರು ಮಿದೇರೀರಾ ನವೀನ್, ಅಕ್ರಮ ಸಕ್ರಮ ಅಧ್ಯಕ್ಷ ಅಪ್ಪಣ್ಣ, ತಾಲೂಕು ಪಂಚಾಯತ್ ಸದಸ್ಯರು ಪಲ್ವಿನ್, ಎಂ.ಬಿ.ಗಣೇಶ್ , ಡಿಸಿಸಿಸಿ ಸದಸ್ಯರು ನವೀನ್ ಅಯ್ಯಪ್ಪ, ಮುಖಂಡರು ಮತ್ತು ಕಾರ್ಯಕರ್ತರು ಹಾಜರಿದ್ದರು.









