ಮಡಿಕೇರಿ ಏ.11 NEWS DESK : ಸ್ನಾನಕ್ಕೆಂದು ತೆರಳಿದ ವ್ಯಕ್ತಿ ಹೊಳೆಯಲ್ಲಿ ಮುಳುಗಿ ಸಾವನ್ನಪಿದ ಘಟನೆ ನಾಪೋಕ್ಲು ಗ್ರಾ.ಪಂ ವ್ಯಾಪ್ತಿಯ ಕೊಳಕೇರಿ ಗ್ರಾಮದಲ್ಲಿ ನಡೆದಿದೆ.
ಕಕ್ಕಬ್ಬೆ ಕುಂಜಿಲ ಗ್ರಾಮದ ವಾಟೆಕಾಡು ನಿವಾಸಿ ದೇವಯ್ಯ(38) ಎಂಬುವವರೇ ಮೃತ ದುರ್ದೈವಿಯಾಗಿದ್ದಾರೆ. ದೇವಯ್ಯ ಅವರು ತನ್ನ ಸಹೋದರನ ಜೊತೆ ತೋಟದ ಕೆಲಸಕ್ಕೆ ತೆರಳಿದ್ದು, ಬಿಸಿಲಿನ ತಾಪದಿಂದ ಸ್ನಾನ ಮಾಡಲು ಕುವಲೆಕಾಡು ಗ್ರಾಮದ ಕುಪ್ಪೋಟು ಹೊಳೆಗೆ ಇಳಿದಿದ್ದಾರೆ. ಈ ವೇಳೆ ಆಕಸ್ಮಿಕವಾಗಿ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ ಎಂದು ಹೇಳಲಾಗಿದೆ.
ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಸ್ಥಳೀಯ ಈಜುಗಾರರ ಸಹಾಯದಿಂದ ಮೃತದೇಹವನ್ನು ನೀರಿನಿಂದ ಹೊರ ತೆಗೆಯಲಾಗಿದ್ದು, ನಾಪೋಕ್ಲು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.










