ಮಡಿಕೇರಿ ಏ.11 NEWS DESK : ಕೊಡಗು- ಮೈಸೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ರಾಜವಂಶಸ್ಥ ಯದುವೀರ್ ಅವರು ಸುಮಾರು ಎರಡೂವರೆ ಮೂರು ಲಕ್ಷ ಮತಗಳ ಅಂತರದಿಂದ ಗೆಲುವು ಸಾಧಿಸಲಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ ಜಾಲತಾಣಗಳ ಮೂಲಕ ಯದುವೀರ್ ಅವರಿಗೆ ಶುಭಕೋರಿರುವ ಅವರು ಅತ್ಯಧಿಕ ಮತಗಳ ಅಂತರದಿಂದ ಯದುವೀರ್ ಅವರು ಗೆದ್ದು ಬರಲಿ ಎಂದು ದೇವರಲ್ಲಿ ಪ್ರಾರ್ಥಿಸುವುದಾಗಿ ತಿಳಿಸಿದ್ದಾರೆ. ಮೈಸೂರು ಮಾತ್ರವಲ್ಲ ಇಡೀ ರಾಜ್ಯ ಮತ್ತು ದೇಶದಲ್ಲಿ ರಾಜವಂಶಸ್ಥ ಯದುವೀರ್ ಅವರ ಬಗ್ಗೆ ಜನರಿಗೆ ಅಪಾರ ಅಭಿಮಾನವಿದೆ, ಅವರ ಗೆಲುವು ನಿಶ್ಚಿತವಾಗಿದೆ ಎಂದು ಯಡಿಯೂರಪ್ಪ ತಿಳಿಸಿದ್ದಾರೆ.










