ಸುಂಟಿಕೊಪ್ಪ,ಏ.12 NEWS DESK : ಲೋಕಸಭಾ ಚುನಾವಣೆ ಹಿನ್ನೆಲೆ ಸುಂಟಿಕೊಪ್ಪದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಎಂ.ಲಕ್ಷ್ಮಣ್ ಪರ ಬಿರುಸಿನ ಚುನಾವಣಾ ಪ್ರಚಾರ ನಡೆಯಿತು.
ಸುಂಟಿಕೊಪ್ಪ ವಾಹನ ಚಾಲಕರ ವೇದಿಕೆಯ ಮುಂಭಾಗದಲ್ಲಿ ಸಾರ್ವಜನಿಕರಲ್ಲಿ ಮತಯಾಚಿಸಿ ಮಾತನಾಡಿದ ಕಾಂಗ್ರೆಸ್ ಅಭ್ಯರ್ಥಿ ಎಂ.ಲಕ್ಷ್ಮಣ್ ಗೌಡ, ರಾಜ್ಯದಲ್ಲಿ ಮುಖ್ಯ ಮಂತ್ರಿ ಸಿದ್ಧರಾಮಯ್ಯ ನೇತೃತ್ವದ ಸರಕಾರ ಚುನಾವಣೆಗೆ ಮುನ್ನಘೋಷಣೆ ಮಾಡಿದ 5 ಗ್ಯಾರಂಟಿಗಳನ್ನು ಯಶಸ್ವಿಯಾಗಿ ಜಾರಿಗೊಳಿಸಿದೆ. ಅದೇ ರೀತಿ ಕೇಂದ್ರದ ನಾಯಕರಾದ ಮಲಿಕಾರ್ಜುನ ಖರ್ಗೆ ಮತ್ತು ರಾಹುಲ್ ಗಾಂಧಿಯವರು ಘೋಷಿಸಿದ ಗ್ಯಾರಂಟಿಯನ್ನು ಈಡೇರಿಸುತ್ತಾರೆ. ಆದ್ದರಿಂದ ಪ್ರತಿಯೊಬ್ಬರು ಕಾಂಗ್ರೆಸ್ ಪಕ್ಷಕ್ಕೆ ಮತ ನೀಡುವಂತೆ ಮನವಿ ಮಾಡಿದರು.
ಲೋಕಸಭಾ ಸದಸ್ಯರಾಗಿದ್ದ ಪ್ರತಾಪ್ ಸಿಂಹ ಅವರು ಕಛೇರಿಯನ್ನು ತೆರದಿರಲಿಲ್ಲ ಇಲ್ಲಿ ಉಳಿಯುತ್ತಲೂ ಇರಲಿಲ್ಲ ಎಂದು ಹೇಳಿದ ಅವರು ನಾನು ಗೆದ್ದರೆ 15 ದಿನ ಮಡಿಕೇರಿ ಮತ್ತು 15 ದಿನ ಮೈಸೂರಿನಲ್ಲಿರುತ್ತೇನೆ ಎಂದು ಮತದಾರರಿಗೆ ಭರವಸೆ ನೀಡಿದರು.
ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್‍ಗೌಡ ಮಾತನಾಡಿ, ಕಳೆದ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ನನಗೆ ತೋರಿದ ಪ್ರೀತಿಯನ್ನೆ ನಮ್ಮ ಪಕ್ಷದ ಅಭ್ಯರ್ಥಿ ಎಂಲಕ್ಷ್ಮಣ್‍ಗೌಡ ಅವರಿಗೆ ತೋರಿಸಿ ಎಂದು ಮನವಿ ಮಾಡಿದರು.
ಕುಶಾಲನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಿ.ಪಿ.ಶಶಿಧರ್ ಮಾತನಾಡಿ ಕಾಂಗ್ರೆಸ್ ಅಭ್ಯರ್ಥಿ ಸಾಮಾನ್ಯ ಕಾರ್ಯಕರ್ತರಾಗಿದ್ದು, ಅಪಾರ ವಿದ್ಯಾವಂತರಾಗಿದ್ದಾರೆ. ಸ್ನಾತಕೋತ್ತರ ಪಧವೀದರ ಇಂಜಿನೀಯರ್ ಪಿಎಚ್‍ಡಿ ಪಧವಿಯನ್ನು ಪಡೆದಿದ್ದಾರೆ. ಮೈಸೂರು ಕೊಡಗು ಲೋಕಸಭಾ ಕ್ಷೇತ್ರ ಮುಖ್ಯ ಮಂತ್ರಿಗಳ ತವರು ಕ್ಷೇತ್ರವಾಗಿದ್ದು, ಪ್ರಬುದ್ಧ ಮತ್ತು ಗೆಲುವ ಅಭ್ಯರ್ಥಿಯನ್ನು ನಮಗೆ ನೀಡಿದ್ದು ದೇಶದ ಬಗ್ಗೆ ಕಾಳಜಿ ಇರುವ 4 ದಶಕಗಳ ರಾಜಕೀಯ ಅನುಭವಿರುವ ಎಂ.ಲಕ್ಷ್ಮಣ್ ಅವರನ್ನು ನಾವು ಗೆಲ್ಲಿಸಬೇಕು ಎಂದು ಕರೆ ನೀಡಿದರು.
ಈ ಸಂದರ್ಭ ಕಾಂಗ್ರೆಸ್ ಮುಖಂಡ ಚಂದ್ರಮೌಳಿ, ಜಿ.ಪಂ ಮಾಜಿ ಸದಸ್ಯೆ ಕೆ.ಪಿ.ಚಂದ್ರಕಲಾ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಪಿ.ಎಂ.ಲತೀಫ್, ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ಶಿವಮ್ಮ ಮಹೇಶ್, ಯೂತ್ ಕಾಂಗ್ರೆಸ್ ಅಧ್ಯಕ್ಷ ಅನೂಪ್, ಗ್ರಾ.ಪಂ.ಮಾಜಿ ಸದಸ್ಯರುಗಳಾದ ರೋಸ್‍ಮೇರಿ ರಾಡ್ರಿಗಸ್, ರತ್ನಾ, ರಜಾಕ್ ಸೇರಿದಂತೆ ಕಾಂಗ್ರೆಸ್ ಕಾರ್ಯಕರ್ತರು ಇದ್ದರು.










