
ಮಡಿಕೇರಿ ಏ.12 NEWS DESK : ಇಂದಿರಾನಗರದ ಕುಂದುರುಮೊಟ್ಟೆ ಶ್ರೀ ಮಾರಿಯಮ್ಮ ದೇವಾಲಯದ 134ನೇ ವಾರ್ಷಿಕೋತ್ಸವವು ಏ.15 ರಿಂದ 17ರ ವರೆಗೆ ನಡೆಯಲಿದೆ.
ದೇವಾಲಯದಲ್ಲಿ ಮೂರು ದಿನಗಳ ಕಾಲ ವಿವಿಧ ಧಾರ್ಮಿಕ ಪೂಜಾ ಕೈಂಕರ್ಯಗಳು ಜರುಗಲಿದೆ.
ಏ.15 ರಂದು ಸಂಜೆ 5 ಗಂಟೆಯಿಂದ ರಾತ್ರಿ 9 ಗಂಟೆಯವರೆಗೆ ಮಡಿಕೇರಿ ನಗರದ ಮುಖ್ಯ ಬೀದಿಗಳಲ್ಲಿ ದೇವಿಯ ಮೆರವಣಿಗೆ ನಡೆಯಲಿದೆ.
ಏ.16 ರಂದು ಮಧ್ಯಾಹ್ನ 3 ಗಂಟೆಗೆ ಮನೆ ಮನೆಯಿಂದ ಪೂಜೆಯನ್ನು ದೇವಾಲಯಕ್ಕೆ ತಂದೊಪ್ಪಿಸುವುದು, ರಾತ್ರಿ 8 ಗಂಟೆಗೆ ಹೂವಿನ ವರ ಬೇಡುವುದು, ಮನೆ, ಮನೆಯಿಂದ ಆರತಿಯನ್ನು ದೇವಾಲಯಕ್ಕೆ ತರುವುದು, ರಾತ್ರಿ 9 ಗಂಟೆಗೆ ದೇವಿಗೆ ಮಹಾ ಮಂಗಳಾರತಿ ಮತ್ತು ಮಹಾಪೂಜೆಯ ನಂತರ ಪ್ರಸಾದ ವಿತರಣೆ ನೆರವೇರಲಿದೆ.
ಏ.17 ರಂದು ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 1.30 ಗಂಟೆಯವರೆಗೆ ಶ್ರೀ ದೇವಿಗೆ ಹರಕೆ ಮತ್ತು ಕಾಣಿಕೆ ಒಪ್ಪಿಸುವುದು, ನಂತರ ಭಕ್ತಾಧಿಗಳಿಗೆ ಅನ್ನಸಂತರ್ಪಣೆ ನಡೆಯಲಿದೆ.
ಏ.21 ರಂದು ಅಪರಾಹ್ನ 3 ಗಂಟೆಗೆ ಗುಳಿಗನ ಪೂಜೆ ನಡೆಯಲಿದೆ. ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಎಂದು ದೇವಾಲಯದ ಅಧ್ಯಕ್ಷರು ಹಾಗೂ ಆಡಳಿತ ಮಂಡಳಿ ತಿಳಿಸಿದೆ.








