Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಯುಗಾದಿ, ರಂಜಾನ್ ರಜೆ ಮುಗಿಸಿ ಬರೋಕೆ ಬಂತು ಸ್ಪೆಷಲ್ ಟ್ರೈನ್!: ಯಾವ ಊರಿಗೆ ಯಾವ ಸಮಯ? ಇಲ್ಲಿದೆ ಕಂಪ್ಲೀಟ್ ‘ವೇಳಾಪಟ್ಟಿ’*
  • *ರಾಜ್ಯಕ್ಕೆ ತಟ್ಟಿದ ಇರಾನ್ ಯುದ್ಧದ ಬಿಸಿ: ವಾಣಿಜ್ಯ ಸಿಲಿಂಡರ್ ಪೂರೈಕೆಯಲ್ಲಿ ಶೇ. 80ರಷ್ಟು ಕಡಿತ; ಹೋಟೆಲ್ ಉದ್ಯಮಕ್ಕೆ ಭಾರಿ ಪೆಟ್ಟು!*
  • *20-03-2026 ಶುಕ್ರವಾರ ರಂಜಾನ್ – ಈದುಲ್ ಫಿತ್ರ್ ಶವ್ವಾಲ್ – 01*
  • *ಒತ್ತೋರ್ಮೆರ ಕೊಡವ ಕೂಟದ ಅಧ್ಯಕ್ಷರಾಗಿ ಚೆಟ್ಟೋಳಿರ ಶರತ್ ಸೋಮಣ್ಣ ಆಯ್ಕೆ*
  • *ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಸಹೋದರಿ ನಿಧನ*
  • *ಒತ್ತೋರ್ಮೆರ ಕೊಡವ ಕೂಟದ ಅಧ್ಯಕ್ಷರಾಗಿ ಚೆಟ್ಟೋಳಿರ ಶರತ್ ಸೋಮಣ್ಣ ಆಯ್ಕೆ*
  • *ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ : ಸ್ಥಳದಲ್ಲೇ ಸವಾರ ಸಾವು : ಮತ್ತೊಬ್ಬರಿಗೆ ಗಂಭೀರ ಗಾಯ*
  • *ರಾಷ್ಟ್ರೀಯ ಹೆದ್ದಾರಿ ಬದಿಯ ಹಣ್ಣಿನ ಅಂಗಡಿ ಮತ್ತು ಗೂಡಂಗಡಿಗಳನ್ನು ಮಾ.23 ರೊಳಗೆ ತೆರವುಗೊಳಿಸಲು ಕಟ್ಟುನಿಟ್ಟಿನ ಸೂಚನೆ*
  • *ನೂತನ ಡಿಸಿಪಿಯಾಗಿ ಅಧಿಕಾರ ಸ್ವೀಕಾರ*
  • *ಏ.10 ರಿಂದ ಕೊಡವ ಲೆದರ್ ಬಾಲ್ ಕ್ರಿಕೆಟ್ ಲೀಗ್ ಮೂರನೇ ಆವೃತ್ತಿ ಆರಂಭ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಬಿಜೆಪಿ ಸರಕಾರದ ಯೋಜನೆಗಳಿಗೆ ಕಾಂಗ್ರೆಸ್ ಲೇಬಲ್ : ಮಾಜಿ ಶಾಸಕರುಗಳ ವಾಗ್ಧಾಳಿ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಬಿಜೆಪಿ ಸರಕಾರದ ಯೋಜನೆಗಳಿಗೆ ಕಾಂಗ್ರೆಸ್ ಲೇಬಲ್ : ಮಾಜಿ ಶಾಸಕರುಗಳ ವಾಗ್ಧಾಳಿ*

ಏಪ್ರಿಲ್ 13, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link


ಮಡಿಕೇರಿ ಏ.13 NEWS DESK : ಹಿಂದಿನ ಬಿಜೆಪಿ ಸರಕಾರ ನೀಡಿದ ಯೋಜನೆಗಳಿಗೆ ಕಾಂಗ್ರೆಸ್ ತನ್ನ “ಲೇಬಲ್” ಹಾಕುವ ಮೂಲಕ ಪ್ರಚಾರ ಪಡೆದುಕೊಳ್ಳುತ್ತಿದೆ. ಕೊಡಗಿನ ಶಾಸಕರ ಕೊಡುಗೆ ಏನೂ ಇಲ್ಲ ಎಂದು ಮಾಜಿ ಶಾಸಕರುಗಳಾದ ಕೆ.ಜಿ.ಬೋಪಯ್ಯ ಹಾಗೂ ಎಂ.ಪಿ.ಅಪ್ಪಚ್ಚು ರಂಜನ್ ಟೀಕಿಸಿದ್ದಾರೆ.
ನಗರದ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಾಜಿ ಶಾಸಕರುಗಳು ಕಾಂಗ್ರೆಸ್ ಪಕ್ಷ ಹಾಗೂ ಹಾಲಿ ಶಾಸಕರುಗಳ ವಿರುದ್ಧ ವಾಗ್ಧಾಳಿ ನಡೆಸಿದರು.
ಕೆ.ಜಿ.ಬೋಪಯ್ಯ ಮಾತನಾಡಿ ಸುಮ್ಮನೆ ಶ್ವೇತಪತ್ರ ಹೊರಡಿಸಿದರೆ ಸಾಲದು, ಜನರಿಗೆ ನಿಖರವಾದ ಲೆಕ್ಕ ನೀಡಲಿ. ಬಿಜೆಪಿ ಸರಕಾರದ ಅವಧಿಯ ಅನುದಾನದ ಲೆಕ್ಕ ನಮ್ಮ ಬಳಿ ಇದೆ, ನಿಮ್ಮ ಲೆಕ್ಕ ಕೊಡಿ ಎಂದರು.
ವನ್ಯಜೀವಿ ಸಂರಕ್ಷಣಾ ಕಾಯಿದೆ 1972 ರಡಿ ಪಾರಂಪರಿಕವಾಗಿ ಬಂದ ವನ್ಯಜೀವಿ ಉತ್ಪನ್ನವನ್ನು ಘೋಷಿಸಿಕೊಳ್ಳಲು ಅವಕಾಶವಿದ್ದರೂ ಮಾಹಿತಿ ಕೊರತೆಯಿಂದ ಘೋಷಿಸಿಕೊಂಡಿರಲಿಲ್ಲ. ಜಿಲ್ಲೆಯಲ್ಲಿ ಪಾರಂಪರಿಕ ವನ್ಯಜೀವಿ ಉತ್ಪನ್ನಗಳು ಧಾರ್ಮಿಕ ಆಚರಣೆಯ ಭಾಗವಾಗಿದೆ. ಇದನ್ನು ಸ್ವಾಧೀನಕ್ಕೆ ನೀಡಲು ಹೊರಡಿಸಿರುವ ಸುತ್ತೋಲೆಯನ್ನು ಹಿಂಪಡೆಯಬಹುದಿತ್ತು. ಆದರೆ, ಸರಕಾರದ ಸುತ್ತೋಲೆಗೆ ಸರಕಾರದ ಭಾಗವಾಗಿರುವ ಶಾಸಕರೇ ಪಕ್ಷದ ಮುಖಂಡರ ಮೂಲಕ ತಡೆಯಾಜ್ಞೆ ತಂದಿರುವುದು ಹಾಸ್ಯಾಸ್ಪದ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ವನ್ಯಜೀವಿ ಹಾವಳಿ ತಡೆಗೆ ಏನೂ ಕ್ರಮಕೈಗೊಂಡಿಲ್ಲ ಎನ್ನುವ ಹಾಲಿ ಶಾಸಕರಿಗೆ ರೈಲ್ವೆ ಬ್ಯಾರಿಕೇಡ್, ಸೋಲಾರ್ ಕಂದಕ ಇರುವುದು ಕಾಣುವುದಿಲ್ಲವೇ, ರೂ.150 ಕೋಟಿ ಹಣವನ್ನು ರೈಲ್ವೆ ಬ್ಯಾರಿಕೇಡ್ ನಿರ್ಮಾಣಕ್ಕೆ ಬಜೆಟ್‍ನಲ್ಲಿ ಈ ಹಿಂದೆ ಬಿಜೆಪಿ ಸರ್ಕಾರ ಘೋಷಿಸಿದೆ. ಆದರೆ ಇದುವರೆಗೂ ಅನುದಾನ ಬಳಕೆಯಾಗಿಲ್ಲ. ಇದಕ್ಕೆ ಮೊದಲು ಉತ್ತರ ನೀಡಿ ಎಂದು ಒತ್ತಾಯಿಸಿದ ಬೋಪಯ್ಯ, ಸುಮ್ಮನೆ ಶ್ವೇತಪತ್ರ ಹೊರಡಿಸಿದರೆ ಸಾಲದು ಎಂದರು.
ಕಾಂಗ್ರೆಸ್ ಪಕ್ಷ ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ನಂತರ ಜಿಲ್ಲೆಯಲ್ಲಿ ದ್ವೇಷದ ರಾಜಕಾರಣ ಮಿತಿಮೀರಿದೆ. ಪ್ರಬುದ್ಧ ರಾಜಕಾರಣಕ್ಕೆ ಕೊಡಲಿ ಪೆಟ್ಟು ನೀಡುತ್ತಿರುವ ಕಾಂಗ್ರೆಸ್ ನಾಯಕರು ದುರುದ್ದೇಶಪೂರ್ವಕವಾಗಿ ಬಿಜೆಪಿ ಕಾರ್ಯಕರ್ತರನ್ನು ಗುರಿ ಮಾಡಿ ದೂರು ನೀಡುತ್ತಿದ್ದಾರೆ. ಅಲ್ಲದೆ ಸತ್ಯಾಂಶ ಅರಿಯದೆ ಪೊಲೀಸರು ಪ್ರಕರಣ ದಾಖಲಿಸುತ್ತಿರುವುದು ಸರಿಯಲ್ಲ. ಪರಿಸ್ಥಿತಿ ಇದೇ ರೀತಿ ಮುಂದುವರೆದರೆ ಹೋರಾಟವನ್ನು ನಡೆಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
ಅಪ್ಪಚ್ಚು ರಂಜನ್ ಮಾತನಾಡಿ, ಅಧಿಕಾರಿಗಳನ್ನು ದುರ್ಬಳಕೆ ಮಾಡಿಕೊಂಡು ಪ್ರಕರಣ ದಾಖಲಿಸಿ ಧಮನಕಾರಿ ನೀತಿಯನ್ನು ಕಾಂಗ್ರೆಸ್ ಅನುಸರಿಸುತ್ತಿದೆ ಎಂದು ಆರೋಪಿಸಿದರು.
ಬೆದರಿಕೆ ತಂತ್ರಗಾರಿಕೆಗೆ ನಾವು ಜಗ್ಗುವುದಿಲ್ಲ, ತಾರತಮ್ಯ ತೋರದೆ ಅಧಿಕಾರಿಗಳು ಕೆಲಸ ಮಾಡಬೇಕು. ಈ ಮುನ್ನ ಸೋಮವಾರಪೇಟೆ ತಾಲೂಕು ಆಸ್ಪತ್ರೆಯಲ್ಲಿ 12 ವೈದ್ಯರಿದ್ದರು, ಇದೀಗ ಇಬ್ಬರಿದ್ದಾರೆ. ಜಿಲ್ಲೆಯ ಹಲವು ಕಡೆ ಇದೇ ಪರಿಸ್ಥಿತಿ ತಲೆದೋರಿದೆ. ಪಿಡಿಓಗಳ ಕೊರತೆಯೂ ಇದೆ. ಇದಕ್ಕೆ ಕಾರಣ ಏನು ಎಂದು ಪ್ರಶ್ನಿಸಿದರು.
ಬಿಜೆಪಿ ಜಿಲ್ಲಾಧ್ಯಕ್ಷ ನಾಪಂಡ ರವಿ ಕಾಳಪ್ಪ ಮಾತನಾಡಿ, ಏ.14 ರಂದು ಪ್ರಧಾನಿ ನರೇಂದ್ರ ಮೋದಿ ಅವರು ಮೈಸೂರಿಗೆ ಬರುತ್ತಿದ್ದಾರೆ. ಜಿಲ್ಲೆಯಿಂದ ಕಾರ್ಯಕರ್ತರಲ್ಲದೆ, ಸಾಮಾನ್ಯ ಮತದಾರರು ಕೂಡ ತೆರಳುತ್ತಿದ್ದಾರೆ. ಮತ್ತೊಮ್ಮೆ ಬಿಜೆಪಿ ಅಧಿಕಾರಕ್ಕೆ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಸುದ್ದಿಗೋಷ್ಠಿಯಲ್ಲಿ ವಿಧಾನ ಪರಿಷತ್ ಮಾಜಿ ಸದಸ್ಯ ಸುನಿಲ್ ಸುಬ್ರಮಣಿ, ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಮಹೇಶ್ ಜೈನಿ, ನೆಲ್ಲಚಂಡ ಕಿರಣ್, ಉಪಾಧ್ಯಕ್ಷ ಕಾಂಗೀರ ಸತೀಶ್, ವಕ್ತಾರರಾದ ಸುಬ್ರಮಣ್ಯ ಉಪಾಧ್ಯಾಯ, ತಳೂರು ಕಿಶೋರ್ ಕುಮಾರ್, ರೈತ ಮೋರ್ಚಾ ಜಿಲ್ಲಾಧ್ಯಕ್ಷ ನಾಗೇಶ್ ಕುಂದಲ್ಪಾಡಿ ಮತ್ತಿತರರು ಉಪಸ್ಥಿತರಿದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಯುಗಾದಿ, ರಂಜಾನ್ ರಜೆ ಮುಗಿಸಿ ಬರೋಕೆ ಬಂತು ಸ್ಪೆಷಲ್ ಟ್ರೈನ್!: ಯಾವ ಊರಿಗೆ ಯಾವ ಸಮಯ? ಇಲ್ಲಿದೆ ಕಂಪ್ಲೀಟ್ ‘ವೇಳಾಪಟ್ಟಿ’*

ಮಾರ್ಚ್ 19, 2026

*ರಾಜ್ಯಕ್ಕೆ ತಟ್ಟಿದ ಇರಾನ್ ಯುದ್ಧದ ಬಿಸಿ: ವಾಣಿಜ್ಯ ಸಿಲಿಂಡರ್ ಪೂರೈಕೆಯಲ್ಲಿ ಶೇ. 80ರಷ್ಟು ಕಡಿತ; ಹೋಟೆಲ್ ಉದ್ಯಮಕ್ಕೆ ಭಾರಿ ಪೆಟ್ಟು!*

ಮಾರ್ಚ್ 19, 2026

*20-03-2026 ಶುಕ್ರವಾರ ರಂಜಾನ್ – ಈದುಲ್ ಫಿತ್ರ್ ಶವ್ವಾಲ್ – 01*

ಮಾರ್ಚ್ 19, 2026

*ರಾಜ್ಯಕ್ಕೆ ತಟ್ಟಿದ ಇರಾನ್ ಯುದ್ಧದ ಬಿಸಿ: ವಾಣಿಜ್ಯ ಸಿಲಿಂಡರ್ ಪೂರೈಕೆಯಲ್ಲಿ ಶೇ. 80ರಷ್ಟು ಕಡಿತ; ಹೋಟೆಲ್ ಉದ್ಯಮಕ್ಕೆ ಭಾರಿ ಪೆಟ್ಟು!*

ಮಾರ್ಚ್ 19, 2026 ಇತ್ತೀಚಿನ ಸುದ್ದಿಗಳು ಕರ್ನಾಟಕ

ಬೆಂಗಳೂರು, ಮಾರ್ಚ್ 19, 2026: ಕರ್ನಾಟಕದಲ್ಲಿ ವಾಣಿಜ್ಯ ಎಲ್‌ಪಿಜಿ (LPG) ಸಿಲಿಂಡರ್‌ಗಳ ಕೊರತೆ ತೀವ್ರಗೊಂಡಿದ್ದು, ಬೇಡಿಕೆಯ ಕೇವಲ ಶೇ. 20ರಷ್ಟು…

*20-03-2026 ಶುಕ್ರವಾರ ರಂಜಾನ್ – ಈದುಲ್ ಫಿತ್ರ್ ಶವ್ವಾಲ್ – 01*

ಮಾರ್ಚ್ 19, 2026

*ಒತ್ತೋರ್ಮೆರ ಕೊಡವ ಕೂಟದ ಅಧ್ಯಕ್ಷರಾಗಿ ಚೆಟ್ಟೋಳಿರ ಶರತ್ ಸೋಮಣ್ಣ ಆಯ್ಕೆ*

ಮಾರ್ಚ್ 19, 2026

*ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಸಹೋದರಿ ನಿಧನ*

ಮಾರ್ಚ್ 19, 2026

*ಒತ್ತೋರ್ಮೆರ ಕೊಡವ ಕೂಟದ ಅಧ್ಯಕ್ಷರಾಗಿ ಚೆಟ್ಟೋಳಿರ ಶರತ್ ಸೋಮಣ್ಣ ಆಯ್ಕೆ*

ಮಾರ್ಚ್ 19, 2026

*ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ : ಸ್ಥಳದಲ್ಲೇ ಸವಾರ ಸಾವು : ಮತ್ತೊಬ್ಬರಿಗೆ ಗಂಭೀರ ಗಾಯ*

ಮಾರ್ಚ್ 19, 2026

*ರಾಷ್ಟ್ರೀಯ ಹೆದ್ದಾರಿ ಬದಿಯ ಹಣ್ಣಿನ ಅಂಗಡಿ ಮತ್ತು ಗೂಡಂಗಡಿಗಳನ್ನು ಮಾ.23 ರೊಳಗೆ ತೆರವುಗೊಳಿಸಲು ಕಟ್ಟುನಿಟ್ಟಿನ ಸೂಚನೆ*

ಮಾರ್ಚ್ 19, 2026

*ನೂತನ ಡಿಸಿಪಿಯಾಗಿ ಅಧಿಕಾರ ಸ್ವೀಕಾರ*

ಮಾರ್ಚ್ 19, 2026

*ಏ.10 ರಿಂದ ಕೊಡವ ಲೆದರ್ ಬಾಲ್ ಕ್ರಿಕೆಟ್ ಲೀಗ್ ಮೂರನೇ ಆವೃತ್ತಿ ಆರಂಭ*

ಮಾರ್ಚ್ 18, 2026

*ಸುಂಟಿಕೊಪ್ಪದಲ್ಲಿ ಶಾಂತಿ ಸಭೆ : ಸೌಹಾರ್ದತೆಯನ್ನು ಕಾಪಾಡಿಕೊಳ್ಳಲು ದಿನೇಶ್‍ಕುಮಾರ್ ಕರೆ*

ಮಾರ್ಚ್ 18, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.