Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಯುಗಾದಿ, ರಂಜಾನ್ ರಜೆ ಮುಗಿಸಿ ಬರೋಕೆ ಬಂತು ಸ್ಪೆಷಲ್ ಟ್ರೈನ್!: ಯಾವ ಊರಿಗೆ ಯಾವ ಸಮಯ? ಇಲ್ಲಿದೆ ಕಂಪ್ಲೀಟ್ ‘ವೇಳಾಪಟ್ಟಿ’*
  • *ರಾಜ್ಯಕ್ಕೆ ತಟ್ಟಿದ ಇರಾನ್ ಯುದ್ಧದ ಬಿಸಿ: ವಾಣಿಜ್ಯ ಸಿಲಿಂಡರ್ ಪೂರೈಕೆಯಲ್ಲಿ ಶೇ. 80ರಷ್ಟು ಕಡಿತ; ಹೋಟೆಲ್ ಉದ್ಯಮಕ್ಕೆ ಭಾರಿ ಪೆಟ್ಟು!*
  • *20-03-2026 ಶುಕ್ರವಾರ ರಂಜಾನ್ – ಈದುಲ್ ಫಿತ್ರ್ ಶವ್ವಾಲ್ – 01*
  • *ಒತ್ತೋರ್ಮೆರ ಕೊಡವ ಕೂಟದ ಅಧ್ಯಕ್ಷರಾಗಿ ಚೆಟ್ಟೋಳಿರ ಶರತ್ ಸೋಮಣ್ಣ ಆಯ್ಕೆ*
  • *ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಸಹೋದರಿ ನಿಧನ*
  • *ಒತ್ತೋರ್ಮೆರ ಕೊಡವ ಕೂಟದ ಅಧ್ಯಕ್ಷರಾಗಿ ಚೆಟ್ಟೋಳಿರ ಶರತ್ ಸೋಮಣ್ಣ ಆಯ್ಕೆ*
  • *ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ : ಸ್ಥಳದಲ್ಲೇ ಸವಾರ ಸಾವು : ಮತ್ತೊಬ್ಬರಿಗೆ ಗಂಭೀರ ಗಾಯ*
  • *ರಾಷ್ಟ್ರೀಯ ಹೆದ್ದಾರಿ ಬದಿಯ ಹಣ್ಣಿನ ಅಂಗಡಿ ಮತ್ತು ಗೂಡಂಗಡಿಗಳನ್ನು ಮಾ.23 ರೊಳಗೆ ತೆರವುಗೊಳಿಸಲು ಕಟ್ಟುನಿಟ್ಟಿನ ಸೂಚನೆ*
  • *ನೂತನ ಡಿಸಿಪಿಯಾಗಿ ಅಧಿಕಾರ ಸ್ವೀಕಾರ*
  • *ಏ.10 ರಿಂದ ಕೊಡವ ಲೆದರ್ ಬಾಲ್ ಕ್ರಿಕೆಟ್ ಲೀಗ್ ಮೂರನೇ ಆವೃತ್ತಿ ಆರಂಭ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಪ್ರಸ್ತುತ ರಾಜಕೀಯ ವಾತಾವರಣ ಯದುವೀರ್ ಗೆಲುವಿಗೆ ಪೂರಕವಾಗಿದೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಪ್ರಸ್ತುತ ರಾಜಕೀಯ ವಾತಾವರಣ ಯದುವೀರ್ ಗೆಲುವಿಗೆ ಪೂರಕವಾಗಿದೆ*

ಏಪ್ರಿಲ್ 13, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಏ.13 NEWS DESK : ಪ್ರಸ್ತುತ ರಾಜಕೀಯ ವಾತಾವರಣ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯದುವೀರ್ ಒಡೆಯರ್ ಅವರ ಗೆಲುವಿಗೆ ಪೂರಕವಾಗಿದೆ ಎಂದು ವಿಧಾನ ಪರಿಷತ್ ಸದಸ್ಯ ಹೆಚ್.ವಿಶ್ವನಾಥ್ ತಿಳಿಸಿದ್ದಾರೆ.
ನಗರದ ವಾಣಿಜ್ಯೋದ್ಯಮಿಗಳ ವಿವಿಧೋದ್ದೇಶ ಸಭಾಂಗಣದಲ್ಲಿ ನಡೆದ ಬಿಜೆಪಿ ಮತ್ತು ತಟಸ್ಥವಾಗಿ ಉಳಿದಿರುವ ಜೆಡಿಎಸ್ ಪ್ರಮುಖರ ಸಮನ್ವಯ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಜಿಲ್ಲೆಯ ಬಿಜೆಪಿ ನಾಯಕರು ಜೆಡಿಎಸ್‍ನ್ನು ವಿಶ್ವಾಸಕ್ಕೆ ತೆಗೆದುಕೊಂಡು ಚುನಾವಣೆಯಲ್ಲಿ ಮುಂದುವರೆಯಬೇಕು. ಗೆಲುವಿಗೆ ಪೂರಕವಾಗಿ ಎರಡೂ ಪಕ್ಷಗಳು ಪರಸ್ಪರ ಅರ್ಥೈಸಿಕೊಂಡು ಮುನ್ನಡೆಯುವ ಮೂಲಕ ಯದುವೀರ್ ಅವರನ್ನು ಗೆಲ್ಲಿಸಬೇಕೆಂದು ಕರೆ ನೀಡಿದರು.
ತಟಸ್ಥರಾಗಿದ್ದ ಕೊಡಗಿನ ಜೆಡಿಎಸ್ ಪ್ರಮುಖರನ್ನು ಸಂಪರ್ಕಿಸಿ ಈ ಚುನಾವಣೆಯಲ್ಲಿ ಯದುವೀರ್ ಪರವಾಗಿ ಸಕ್ರಿಯರಾಗುವಂತೆ ಮನವಿ ಮಾಡಿದ್ದೇನೆ. ಮೈಸೂರು ರಾಜರು ಈ ನಾಡಿಗೆ ನೀಡಿದ ಕೊಡುಗೆಗಳು ಅನುಪಮವಾದವು. ಇಂತಹ ರಾಜವಂಶಸ್ಥರ ಕುಡಿ ಯದುವೀರ್ ಅವರನ್ನು ಚುನಾವಣೆಯಲ್ಲಿ ಗೆಲ್ಲಿಸವುದು ಉಪಕಾರಸ್ಮರಣೆಯೆಂದು ವಿಶ್ವನಾಥ್ ತಿಳಿಸಿದರು.
ಯಾವುದೇ ಸರ್ಕಾರಗಳು ಮೂಲಭೂತವಾಗಿ ಅಕ್ಷರ, ಆರೋಗ್ಯ ಮತ್ತು ಉದ್ಯೋಗ ಭದ್ರತೆಯನ್ನು ಜನತೆಗೆ ಒದಗಿಸುವ ಮೂಲಭೂತ ಜವಾಬ್ದಾರಿ ಹೊಂದಿವೆ. ಇದನ್ನು ಮೀರಿ ಇಂದು ರಾಜ್ಯದ ಸಿಎಂ ಸಿದ್ದರಾಮಯ್ಯ ಅವರ ನೇತೃತ್ವದ ಸರ್ಕಾರ ಭಾಗ್ಯಗಳ ಮೂಲಕ ಮಹಿಳೆÉಯರಿಗೆ ಮಾಸಿಕ 2 ಸಾವಿರ ಹಣವನ್ನು ನೀಡುತ್ತಿದೆ. ಇದರ ಹೊಂದಾಣಿಕೆಗಾಗಿ ಅಬಕಾರಿ ಇಲಾಖೆಯ ಆದಾಯವನ್ನು 23 ಸಾವಿರ ಕೋಟಿ ರೂ.ಗಳಿಂದ 40 ಸಾವಿರ ಕೋಟಿಗಳಿಗೆ ಬೆಲೆ ಹೆಚ್ಚಳದ ಮೂಲಕ ಮಾಡಿದೆ. ಪುರುಷರಿಗೆ ಮದ್ಯ ಕುಡಿಸಿ ಮಹಿಳೆಯರಿಗೆ 2 ಸಾವಿರ ರೂ. ನೀಡಲಾಗುತ್ತಿದೆ ಎಂದು ವ್ಯಂಗ್ಯವಾಡಿದರು.
ಮಾಜಿ ಶಾಸಕ ಬಿಜೆಪಿಯ ಕೆ.ಜಿ.ಬೋಪಯ್ಯ ಅವರು ಮಾತನಾಡಿ, ಕಳೆದ ಒಂದು ದಶಕದ ಮೋದಿ ಆಡಳಿತವನ್ನು ಇಡೀ ವಿಶ್ವವೆ ಮೆಚ್ಚಿದೆ. ಇಂತಹ ಸರ್ಕಾರದ ವಿರುದ್ಧ ಐಎನ್‍ಡಿಐಎ ಎನ್ನುವ ಕೂಟವನ್ನು ಕಟ್ಟಿ ಮಾಡುತ್ತಿರುವ ಸುಳ್ಳು ಆರೋಪಗಳಿಗೆ ಈ ಲೋಕಸಭಾ ಚುನಾವಣೆಯಲ್ಲಿ ಉತ್ತರ ನೀಡಬೇಕಾಗಿದೆ. ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದರೆ ಸಂವಿಧಾನಕ್ಕೆ ಅಪಾಯವೆನ್ನುವ ಸುಳ್ಳು ಆರೋಪಗಳನ್ನು ಮಾಡಲಾಗುತ್ತಿದೆ. ತುರ್ತು ಪರಿಸ್ಥಿತಿ ಸೇರಿದಂತೆ ವಿವಿಧ ಸಂದರ್ಭಗಳಲ್ಲಿ ಸಂವಿಧಾನವನ್ನು ದುರುಪಯೋಗಪಡಿಸಿಕೊಂಡದ್ದು ಕಾಂಗ್ರೆಸ್ ಎಂದು ಆರೋಪಿಸಿದರು.
ರಾಜ್ಯದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಂಚ ಗ್ಯಾರಂಟಿ ನೀಡಿದ್ದರೆ, ಲೋಕಸಭಾ ಚುನಾವಣೆಯಲ್ಲಿ ಇದರ ಐದು ಪಟ್ಟಿನ 25 ಗ್ಯಾರಂಟಿಗಳನ್ನು ಘೋಷಿಸಿದೆ. ಈ ಚುನಾವಣೆ ರಾಷ್ಟ್ರೀಯ ಹಿತಾಸಕ್ತಿಯ, ಭದ್ರತೆಯ, ದೇಶದ ಭವಿಷ್ಯವನ್ನು ನಿರೂಪಿಸುವ ಚುನಾವಣೆಯೇ ಹೊರತು ‘ಗ್ಯಾರಂಟಿಗಳ ಚುನಾವಣೆ’ ಅಲ್ಲವೆಂದರು.
ಜೆಡಿಎಸ್ ಮಾಜಿ ಜಿಲ್ಲಾಧ್ಯಕ್ಷ ಕೆ.ಎಂ.ಗಣೇಶ್ ಮಾತನಾಡಿ, ಈ ಕ್ಷೇತ್ರದ ಅಭ್ಯರ್ಥಿ ಯದುವೀರ್ ಅವರನ್ನು ಪಕ್ಷಾತೀತವಾಗಿ, ರಾಜಕೀಯ ಮರೆತು ಗೆಲ್ಲಿಸುವ ಕೆಲಸವಾಗಬೇಕು. ಕಳೆದ ಹತ್ತು ವರ್ಷಗಳ ಅವಧಿಯ ಮೋದಿ ಅವರ ಸರ್ಕಾರದ ಅವಧಿಯಲ್ಲಿ ಅಲ್ಪಸಂಖ್ಯಾತರಿಗೆ ಯಾವುದೇ ತೊಂದರೆಗಳಾಗಿಲ್ಲ. ಹೀಗಿದ್ದೂ ಅಲ್ಪಸಂಖ್ಯಾತರಿಗೆ ತೊಂದರೆಯಾಗುತ್ತದೆ ಎಂದು ಕಾಂಗ್ರೆಸ್ ಹೆದರಿಸುವ ಪ್ರಯತ್ನ ಮಾಡುತ್ತಿದೆ. ಇದರಿಂದ ನಾವು ಹೊರ ಬರಬೇಕು ಮತ್ತು ಯದುವೀರ್ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಲು ಮುಂದಾಗಬೇಕೆಂದು ತಿಳಿಸಿದರು.
ವಿಧಾನ ಪರಿಷತ್ ಸದಸ್ಯ ಸುಜಾ ಕುಶಾಲಪ್ಪ ಮಾತನಾಡಿ, ಮೋದಿ ಆಡಳಿತದ ಅವಧಿಯಲ್ಲಿ ಸಮಾಜದ ಎಲ್ಲಾ ವರ್ಗಗಳ ಅಭಿವೃದ್ಧಿಗೆ ಕಾರ್ಯಯೋಜನೆಗಳನ್ನು ರೂಪಿಸಲಾಗಿದೆ. ಈ ಕ್ಷೇತ್ರದಿಂದ ಯದುವೀರ್ ಅವರನ್ನು ಗೆಲ್ಲಿಸುವ ಮೂಲಕ ಮೋದಿ ಅವರ ಕೈ ಬಲಪಡಿಸಬೇಕೆಂದು ಕರೆ ನೀಡಿದರು.
ವಿಧಾನ ಪರಿಷತ್ ಮಾಜಿ ಸದಸ್ಯ ಸುನಿಲ್ ಸುಬ್ರಮಣಿ ಮಾತನಾಡಿ, ನಮ್ಮೆಲ್ಲ ಭಿನ್ನಾಭಿಪ್ರಾಯಗಳನ್ನು ಬಿಟ್ಟು ಈ ಕ್ಷೇತ್ರದ ಅಭ್ಯರ್ಥಿಯ ಗೆಲುವಿಗೆ ಶ್ರಮಿಸೋಣ ಎಂದರು.
ಜಿಲ್ಲಾ ಬಿಜೆಪಿ ಅಧ್ಯಕ್ಷ ನಾಪಂಡ ರವಿ ಕಾಳಪ್ಪ ಮಾತನಾಡಿ, ಈ ಬಾರಿಯ ಚುನಾವಣೆಯಲ್ಲಿ ನಾಲ್ಕು ನೂರು ಸ್ಥಾನಗಳನ್ನು ಗೆಲ್ಲುವ ಗುರಿಯನ್ನು ಬಿಜೆಪಿ ಹೊಂದಿದ್ದು, ಮೈಸೂರು-ಕೊಡಗು ಕ್ಷೇತ್ರದಲ್ಲಿ ಜಯ ಸಾಧಿಸಲಿದ್ದೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಜೆಡಿಎಸ್ ಮುಖಂಡ ಮನ್ಸೂರ್ ಆಲಿ ಮಾತನಾಡಿ ಯದುವೀರ್ ಅವರ ಚುನಾವಣಾ ಪ್ರಚಾರದಲ್ಲಿ ನಮ್ಮನ್ನು ಬಳಸಿಕೊಳ್ಳುವಂತೆ ಬಿಜೆಪಿ ಪ್ರಮುಖರಲ್ಲಿ ಕೋರಿ ಕೊಂಡರಲ್ಲದೆ, ಕಾಂಗ್ರೆಸ್‍ನ ಅನಗತ್ಯ ಸುಳ್ಳು ಆರೋಪಗಳ ಬಗ್ಗೆ ಜನರಿಗೆ ಮನವರಿಕೆ ಮಾಡಿಕೊಡುವ ಕೆಲಸವಾಗಬೇಕೆಂದು ತಿಳಿಸಿದರು.
ಜೆಡಿಎಸ್ ಮಾಜಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಆದಿಲ್ ಪಾಷ ಮಾತನಾಡಿದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಯುಗಾದಿ, ರಂಜಾನ್ ರಜೆ ಮುಗಿಸಿ ಬರೋಕೆ ಬಂತು ಸ್ಪೆಷಲ್ ಟ್ರೈನ್!: ಯಾವ ಊರಿಗೆ ಯಾವ ಸಮಯ? ಇಲ್ಲಿದೆ ಕಂಪ್ಲೀಟ್ ‘ವೇಳಾಪಟ್ಟಿ’*

ಮಾರ್ಚ್ 19, 2026

*ರಾಜ್ಯಕ್ಕೆ ತಟ್ಟಿದ ಇರಾನ್ ಯುದ್ಧದ ಬಿಸಿ: ವಾಣಿಜ್ಯ ಸಿಲಿಂಡರ್ ಪೂರೈಕೆಯಲ್ಲಿ ಶೇ. 80ರಷ್ಟು ಕಡಿತ; ಹೋಟೆಲ್ ಉದ್ಯಮಕ್ಕೆ ಭಾರಿ ಪೆಟ್ಟು!*

ಮಾರ್ಚ್ 19, 2026

*20-03-2026 ಶುಕ್ರವಾರ ರಂಜಾನ್ – ಈದುಲ್ ಫಿತ್ರ್ ಶವ್ವಾಲ್ – 01*

ಮಾರ್ಚ್ 19, 2026

*ರಾಜ್ಯಕ್ಕೆ ತಟ್ಟಿದ ಇರಾನ್ ಯುದ್ಧದ ಬಿಸಿ: ವಾಣಿಜ್ಯ ಸಿಲಿಂಡರ್ ಪೂರೈಕೆಯಲ್ಲಿ ಶೇ. 80ರಷ್ಟು ಕಡಿತ; ಹೋಟೆಲ್ ಉದ್ಯಮಕ್ಕೆ ಭಾರಿ ಪೆಟ್ಟು!*

ಮಾರ್ಚ್ 19, 2026 ಇತ್ತೀಚಿನ ಸುದ್ದಿಗಳು ಕರ್ನಾಟಕ

ಬೆಂಗಳೂರು, ಮಾರ್ಚ್ 19, 2026: ಕರ್ನಾಟಕದಲ್ಲಿ ವಾಣಿಜ್ಯ ಎಲ್‌ಪಿಜಿ (LPG) ಸಿಲಿಂಡರ್‌ಗಳ ಕೊರತೆ ತೀವ್ರಗೊಂಡಿದ್ದು, ಬೇಡಿಕೆಯ ಕೇವಲ ಶೇ. 20ರಷ್ಟು…

*20-03-2026 ಶುಕ್ರವಾರ ರಂಜಾನ್ – ಈದುಲ್ ಫಿತ್ರ್ ಶವ್ವಾಲ್ – 01*

ಮಾರ್ಚ್ 19, 2026

*ಒತ್ತೋರ್ಮೆರ ಕೊಡವ ಕೂಟದ ಅಧ್ಯಕ್ಷರಾಗಿ ಚೆಟ್ಟೋಳಿರ ಶರತ್ ಸೋಮಣ್ಣ ಆಯ್ಕೆ*

ಮಾರ್ಚ್ 19, 2026

*ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಸಹೋದರಿ ನಿಧನ*

ಮಾರ್ಚ್ 19, 2026

*ಒತ್ತೋರ್ಮೆರ ಕೊಡವ ಕೂಟದ ಅಧ್ಯಕ್ಷರಾಗಿ ಚೆಟ್ಟೋಳಿರ ಶರತ್ ಸೋಮಣ್ಣ ಆಯ್ಕೆ*

ಮಾರ್ಚ್ 19, 2026

*ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ : ಸ್ಥಳದಲ್ಲೇ ಸವಾರ ಸಾವು : ಮತ್ತೊಬ್ಬರಿಗೆ ಗಂಭೀರ ಗಾಯ*

ಮಾರ್ಚ್ 19, 2026

*ರಾಷ್ಟ್ರೀಯ ಹೆದ್ದಾರಿ ಬದಿಯ ಹಣ್ಣಿನ ಅಂಗಡಿ ಮತ್ತು ಗೂಡಂಗಡಿಗಳನ್ನು ಮಾ.23 ರೊಳಗೆ ತೆರವುಗೊಳಿಸಲು ಕಟ್ಟುನಿಟ್ಟಿನ ಸೂಚನೆ*

ಮಾರ್ಚ್ 19, 2026

*ನೂತನ ಡಿಸಿಪಿಯಾಗಿ ಅಧಿಕಾರ ಸ್ವೀಕಾರ*

ಮಾರ್ಚ್ 19, 2026

*ಏ.10 ರಿಂದ ಕೊಡವ ಲೆದರ್ ಬಾಲ್ ಕ್ರಿಕೆಟ್ ಲೀಗ್ ಮೂರನೇ ಆವೃತ್ತಿ ಆರಂಭ*

ಮಾರ್ಚ್ 18, 2026

*ಸುಂಟಿಕೊಪ್ಪದಲ್ಲಿ ಶಾಂತಿ ಸಭೆ : ಸೌಹಾರ್ದತೆಯನ್ನು ಕಾಪಾಡಿಕೊಳ್ಳಲು ದಿನೇಶ್‍ಕುಮಾರ್ ಕರೆ*

ಮಾರ್ಚ್ 18, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.