
ಮಡಿಕೇರಿ, ಏ. 15 NEWS DESK : ನಗರದ ಮಲ್ಲಿಕಾರ್ಜುನ ನಗರದ ಶ್ರೀ ಕೋದಂಡ ರಾಮ ದೇವಾಲಯದ ವತಿಯಿಂದ ಶ್ರೀ ರಾಮಮಂದಿರ ಟ್ರಸ್ಟ್, ಶ್ರೀರಾಮ ಸೇವಾ ಸಮಿತಿ, ಜ್ಯೋತಿ ಯುವಕ, ಕೋದಂಡ ರಾಮ ಭಜನಾ ಮಂಡಳಿ ಸಹಯೋಗದೊಂದಿಗೆ ಏ.17 ರಂದು ಪುನರ್ ಪ್ರತಿಷ್ಠಾಪನ ವಾರ್ಷಿಕೋತ್ಸವ ಹಾಗೂ ರಾಮನವಮಿ ಉತ್ಸವ ನಡೆಯಲಿದೆ.
ಅಂದು ಬೆಳಿಗ್ಗೆ 7.30ಕ್ಕೆ ತತ್ವ ಕಲಶ ಹೋಮ, ನವಗ್ರಹ ಹೋಮ, ತತ್ವ ಕಲಶಾಭಿಷೇಕ, ಮಹಾಮಂಗಳಾರತಿ, 9 ಗಂಟೆಗೆ ದೇವಾಲಯದ ಆವರಣದಿಂದ ಉತ್ಸವ ಮೂರ್ತಿ ಹೊತ್ತ ಹೂವಿನ ಅಲಂಕೃತ ಮಂಟಪದೊಂದಿಗೆ ನಗರದ ಮುಖ್ಯಬೀದಿಗಳಲ್ಲಿ ಮೆರವಣಿಗೆ, 12.30ಕ್ಕೆ ದೇವಾಲಯದಲ್ಲಿ ಮಹಾಮಂಗಳರಾತಿ ಬಳಿಕ ಕೋಸಂಬರಿ ಪಾನಕ ವಿತರಣೆ ನಡೆದು ಭಕ್ತಾದಿಗಳಿಗೆ ಅನ್ನಸಂರ್ಪಣೆ ಜರುಗಲಿದೆ ಎಂದು ಆಡಳಿತ ಮಂಡಳಿ ಪ್ರಕಟಣೆಯಲ್ಲಿ ತಿಳಿಸಿದೆ.








