
ಸೋಮವಾರಪೇಟೆ ಏ.16 NEWS DESK : ಶ್ರೀ ರಾಮನವಮಿ ಉತ್ಸವ ಸಮಿತಿ ಮತ್ತು ಹಿಂದೂ ಜಾಗರಣಾ ವೇದಿಕೆ ಸಂಯುಕ್ತ ಆಶ್ರಯದಲ್ಲಿ ಏ.17ರಂದು ಶ್ರೀ ರಾಮನವಮಿ ಕಾರ್ಯಕ್ರಮ ನಡೆಯಲಿದೆ ಎಂದು ಉತ್ಸವ ಸಮಿತಿ ಅಧ್ಯಕ್ಷ ಸುಭಾಷ್ ತಿಮ್ಮಯ್ಯ ತಿಳಿಸಿದ್ದಾರೆ.
ಖಾಸಗಿ ಬಸ್ ನಿಲ್ದಾಣದಲ್ಲಿ ಕಾರ್ಯಕ್ರಮ ನಡೆಯಲಿದ್ದು, ಸಂಜೆ ಶ್ರೀ ರಾಮನ ಉತ್ಸವ ಮೂರ್ತಿಯನ್ನು ವಿದ್ಯುತ್ ಅಲಂಕೃತ ಮಂಟಪದಲ್ಲಿಟ್ಟು ಜಾನಪದ ಕಲಾತಂಡಗಳು ಹಾಗೂ ಸಿಡಿಮದ್ದಿನ ಪ್ರದರ್ಶನದೊಂದಿಗೆ ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಬೃಹತ್ ಶೋಭಾ ಯಾತ್ರೆ ನಡೆಸಲಾಗುವುದೆಂದು ಸುಭಾಷ್ ತಿಮ್ಮಯ್ಯ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.








