
ಸುಂಟಿಕೊಪ್ಪ,ಏ.16 NEWS DESK : ಸುಂಟಿಕೊಪ್ಪ ವ್ಯಾಪ್ತಿಯಲ್ಲಿ ಮತ್ತೆ ಕಾಡಾನೆಗಳು ಪ್ರತ್ಯಕ್ಷಗೊಂಡು ಬೆಳೆಗಾರರಲ್ಲಿ ಆತಂಕ ಸೃಷ್ಟಿಸಿದೆ.
ಸುಂಟಿಕೊಪ್ಪದ ಕೊಡಗರಹಳ್ಳಿ, ಉಪ್ಪುತೋಡು, ಕಂಬಿಬಾಣೆ, 7ನೇ ಹೊಸಕೋಟೆ, ಮತ್ತಿಕಾಡು, ಭೂತನಕಾಡು ಹಾಗೂ ಮಿನುಕೊಲ್ಲಿ ಕೊಡಗರಹಳ್ಳಿ ಉಪ್ಪುತೋಡು, 7ನೇ ಹೊಸಕೋಟೆ, ಕಂಬಿಬಾಣೆ, ಅತ್ತೂರು ನಲ್ಲೂರು, ತೊಂಡೂರು ವ್ಯಾಪ್ತಿಯಲ್ಲಿ ಕಳೆದ ನಾಲ್ಕು ದಿನಗಳಿಂದ ಸಂಚರಿಸುತ್ತಿದ್ದು, ಕಾಫಿ ತೋಟಗಳಿಗೆ ನುಗ್ಗಿ ಅಡಿಕೆ, ಕಾಫಿ, ಬಾಳೆ ಬೆಳೆಗಳನ್ನು ನಾಶ ಪಡಿಸುತ್ತಿವೆ.
ಮೀಸಲು ಅರಣ್ಯ ಸಂಪೂರ್ಣ ಒಣಗಿದ್ದು, ಅರಣ್ಯದೊಳಗೆ ನೀರಿನ ಕೊರತೆಯಿಂದ ಕಾಡಾನೆನೆಗಳು ಕಾಡು ಬಿಟ್ಟು ಗ್ರಾಮದೊಗೆ ನುಗ್ಗತ್ತುವೆ. ಇದರಿಂದ ಗ್ರಾಮಸ್ಥರು ಭಯಬೀತರಾಗಿದ್ದು, ಕಾಡಾನೆಗಳ ಕಾಟಕ್ಕೆ ರೈತರು ಹೈರಾಣಾಗಿದ್ದಾರೆ. ಅರಣ್ಯ ಇಲಾಖೆ ತಕ್ಷಣವೆ ಆನೆಗಳನ್ನು ಕಾಡಿಗಟ್ಟುವ ಕೆಲಸ ಆಗಬೇಕೆಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.








