
ನಾಪೋಕ್ಲು ಏ.17 NEWS DESK : ಈಸ್ಟ್ ಕೊಳಕೇರಿ ಗ್ರಾಮದ ಮೂಟೇರಿ ಉಮಾಮಹೇಶ್ವರಿ ದೇವಾಲಯದ ವಾರ್ಷಿಕ ಉತ್ಸವವು ಶ್ರದ್ಧಾಭಕ್ತಿಯಿಂದ ನೆರವೇರಿತು.
ಸೋಮವಾರ ಪಟ್ಟಣಿ ಹಬ್ಬದ ಪ್ರಯುಕ್ತ ಭಕ್ತಾದಿ ಗಳು ತಮ್ಮ ಇಷ್ಟಾರ್ಥ ಸಿದ್ದಿಗೆ ವಿಶೇಷ ಸೇವೆಗಳನ್ನು ನೆರವೇರಿಸಲಾಯಿತು.
ಮಧ್ಯಾಹ್ನ ಮಹಾಪೂಜೆ, ತೀರ್ಥ ಪ್ರಸಾದ ವಿತರಣೆ ಬಳಿಕ ಸಂಜೆ ಕಾವೇರಿನದಿಯಲ್ಲಿ ಅವಭೃತಸ್ನಾನದ ಬಳಿಕ ದೇವಾಲಯಕ್ಕೆ ಹಿಂತಿರುಗಿ ಬಂದು ವಾರ್ಷಿಕೋತ್ಸವದ ಅಂಗವಾಗಿ ದೇವಾಲಯದಲ್ಲಿ ವಿವಿಧ ಧಾರ್ಮಿಕ ವಿಧಿವಿಧಾನಗಳನ್ನು ನೆರವೇರಿಸಲಾಯಿತು.
ದೇವರ ಪ್ರದರ್ಶನ ನೃತ್ಯ ಬಲಿಯನ್ನು ಭಕ್ತರು ವೀಕ್ಷಿಸಿದರು. ಈ ಸಂದರ್ಭ ಉತ್ಸವದಲ್ಲಿ ಪಾಲ್ಗೊಂಡ ಭಕ್ತರಿಗೆ ಅನ್ನಸಂತರ್ಪಣೆ ನೆರವೇರಿತು.
ಉತ್ಸವದಲ್ಲಿ ಊರ ಹಾಗೂ ಪರ ಊರಿನ ಭಕ್ತರು ಅಧಿಕ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು.
ವರದಿ : ದುಗ್ಗಳ ಸದಾನಂದ.







