Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಹಾತೂರಿನಲ್ಲಿ ಹೊಲಿಗೆ ತರಬೇತಿ ಕಾರ್ಯಕ್ರಮದ ಸಮಾರೋಪ : ಪ್ರಮಾಣಪತ್ರ ವಿತರಣೆ* 
  • *ಶೈಕ್ಷಣಿಕ ಹಾಗೂ ವೈದ್ಯಕೀಯ ಕ್ಷೇತ್ರದಲ್ಲಿ ಕ್ರೈಸ್ತ ಮಿಷನರಿಗಳ ಕೊಡುಗೆ ಅಪಾರ : ಅರುಣ್ ಮಾಚಯ್ಯ*
  • *ಪೊನ್ನಂಪೇಟೆ ಮತ್ತು ಶ್ರೀಮಂಗಲ : ಮಾ.26 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ*
  • *ಮಾ.27 ರಂದು ಕೂಡಿಗೆಯಲ್ಲಿ ವೃತ್ತಿ ಶಿಕ್ಷಣ ಪ್ರದರ್ಶನ, ವೃತ್ತಿ ಮಾರ್ಗದರ್ಶನ*
  • *ಏ.7 ರಿಂದ 30 ರವರೆಗೆ ಬೇಸಿಗೆ ತರಬೇತಿ ಶಿಬಿರ*
  • *ಮಡಿಕೇರಿಯಲ್ಲಿ ದೇವರ ದಾಸಿಮಯ್ಯ ಜಯಂತಿ :  ಕೈಮಗ್ಗ ಉತ್ಪನ್ನಗಳಿಗೆ ಮಾರುಕಟ್ಟೆ ಕಲ್ಪಿಸಿ : ಟಿ.ಕೆ.ಪಾಂಡುರಂಗ*
  • *ಕೊಡಗು ಪ್ರೆಸ್ ಕ್ಲಬ್ ಕ್ರಿಕೆಟ್ ಪ್ರೀಮಿಯರ್ ಲೀಗ್-4 : ಮೀಡಿಯಾ ಚಾಲೆಂಜರ್ಸ್ ತಂಡ ಚಾಂಪಿಯನ್*
  • *ಕೆ.ಜಿ.ಬೋಪಯ್ಯರಿಂದ ಅನೇಕ ಅಭಿವೃದ್ಧಿ ಕಾರ್ಯಗಳು ನಡೆದಿದೆ : ಕಾಂಗ್ರೆಸ್ಸಿಗರು ಅಪಪ್ರಚಾರದಲ್ಲಿ ತೊಡಗಿದ್ದಾರೆ : ಪರಮೇಶ್ವರ್ ಅಸಮಾಧಾನ*
  • *ಸುಂಟಿಕೊಪ್ಪದಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ಶ್ರೀ ಚಾಮುಂಡೇಶ್ವರಿ, ಶ್ರೀಮುತ್ತಪ್ಪ ಮತ್ತು ಪರಿವಾರ ದೇವರುಗಳ ತೆರೆ ಮಹೋತ್ಸವ*
  • *ಕಾಸ್ಮೋಪಾಲಿಟನ್ ಕ್ಲಬ್ ಅಧ್ಯಕ್ಷರಾಗಿ ರತನ್ ತಮ್ಮಯ್ಯ ಆಯ್ಕೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಬಿಜೆಪಿಗೆ ಸೋಲುವ ಆತಂಕ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಬಿಜೆಪಿಗೆ ಸೋಲುವ ಆತಂಕ*

ಏಪ್ರಿಲ್ 18, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link


ಮಡಿಕೇರಿ ಏ.18 NEWS DESK : ಲೋಕಸಭಾ ಚುನಾವಣೆಯಲ್ಲಿ ಸೋಲುವ ಆತಂಕ ಎದುರಿಸುತ್ತಿರುವ ಬಿಜೆಪಿ ಪ್ರಮುಖರು, ಇತ್ತೀಚೆಗೆ ಒಕ್ಕಲಿಗರ ಸಭೆಯಲ್ಲಿ ಉಪ ಮುಖ್ಯಮಂತ್ರಿ ಪಾಲ್ಗೊಂಡಿರುವುದಕ್ಕೆ ಜಾತಿಯ ಲೇಪನವನ್ನು ನೀಡಿ ಇಲ್ಲಸಲ್ಲದ ಆರೋಪಗಳನ್ನು ಮಾಡುತ್ತಿದ್ದಾರೆ ಎಂದು ಕೊಡಗು ಜಿಲ್ಲಾ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿ ಕೊಲ್ಯದ ಗಿರೀಶ್ ಟೀಕಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಗೆ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿಗಳು ಭೇಟಿ ನೀಡಿದ ಸಂದರ್ಭ, ಒಕ್ಕಲಿಗ ಸಮಾಜದ ಸಮಸ್ಯೆಗಳನ್ನು ಅವರ ಮುಂದಿಡುವ ಪ್ರಯತ್ನವಾಗಿಯಷ್ಟೆ ಒಕ್ಕಲಿಗ ಸಮಾಜದ ಸಭೆ ನಡೆದಿತ್ತು ಎಂದು ಸ್ಪಷ್ಟಪಡಿಸಿದರು.
ಮೈಸೂರು-ಕೊಡಗು ಕ್ಷೇತ್ರದಲ್ಲಿ ಕಳೆದ ನಾಲ್ಕು ದಶಕಗಳ ಬಳಿಕ ಕಾಂಗ್ರೆಸ್‍ನಿಂದ ಒಕ್ಕಲಿಗ ಸಮುದಾಯದ ಎಂ.ಲಕ್ಷ್ಮಣ್ ಅವರಿಗೆ ಟಿಕೆಟ್ ದೊರಕಿದೆ. ಇವರು ಒಕ್ಕಲಿಗರ ಸಭೆಯಲ್ಲಿ ಪಾಲ್ಗೊಂಡು ಮಾತನಾಡುವ ಸಂದರ್ಭ, ಸಹಜವಾಗಿ ಎಂಬಂತೆ ಸಮೂಹದ ಬೆಂಬಲಕ್ಕೆ ಮನವಿ ಮಾಡಿದ್ದಾರೆ. ಇದರಲ್ಲಿ ತಪ್ಪೇನು ಎಂದು ಪ್ರಶ್ನಿಸಿ, ಒಕ್ಕಲಿಗ ಸಮಾಜದ ಮಂದಿ ಪ್ರಬುದ್ಧರಾಗಿದ್ದು, ಬಿಜೆಪಿ ಆರೋಪಗಳನ್ನು ಅರ್ಥೈಸಿಕೊಳ್ಳಬಲ್ಲರು ಎಂದರು.
ಕಳೆದ ವಿಧಾನಸಭಾ ಚುನಾವಣೆಯಲ್ಲಿ ಗೌಡ ಸಮಾಜಗಳ ಒಕ್ಕೂಟದ ಅಧ್ಯಕ್ಷರು ಬಿಜೆಪಿ ಅಭ್ಯರ್ಥಿಗೆ ಮುಕ್ತವಾಗಿ ಪ್ರಚಾರ ಮಾಡಿದ್ದಾರೆ. ಅಲ್ಲದೆ ಇತ್ತೀಚೆಗೆ ಹಿಂದೂ ಜಾಗರಣಾ ವೇದಿಕೆಯ ಪ್ರಮುಖರ ಸಭೆಗೂ ಹಾಜರಾಗಿಲ್ಲವೆ ಎಂದು ಪ್ರಶ್ನಿಸಿದರು.
ಜಾತಿ ರಾಜಕಾರಣದ ಆರೋಪ ಮಾಡುವ ಬಿಜೆಪಿ ಸ್ವತಃ ಜಾತಿ, ಧರ್ಮಗಳನ್ನು ಎತ್ತಿಕಟ್ಟುವ ಮೂಲಕ ತನ್ನ ರಾಜಕೀಯ ನಡೆಸಿಕೊಂಡು ಬರುತ್ತಿದೆ. ಪ್ರಸ್ತುತ ಲೋಕಸಭಾ ಚುನಾವಣೆಯಲ್ಲಿ ಸೋಲಿನ ಆತಂಕದಿಂದ ಬಿಜೆಪಿ ಆರೋಪಗಳನ್ನು ಮಾಡುತ್ತಿದೆಯೆಂದು ತಿಳಿಸಿದ ಕೊಲ್ಯದ ಗಿರೀಶ್, ಕಾಂಗ್ರೆಸ್ ಪಕ್ಷಕ್ಕೆ ‘ಪಂಚ ಗ್ಯಾರಂಟಿ’ಗಳೆ ಶ್ರೀರಕ್ಷೆ ಎಂದರು.
ಮೈಸೂರು-ಕೊಡಗು ಕ್ಷೇತ್ರವನ್ನು ಎರಡು ಬಾರಿ ಪ್ರತಿನಿಧಿಸಿರುವ ಬಿಜೆಪಿಯ ಪ್ರತಾಪ ಸಿಂಹ ಅವರನ್ನು ಈ ಚುನಾವಣೆಯಲ್ಲಿ ಬಿಜೆಪಿ ಬದಲಿಸಿದ್ದೇಕೆ, ಈ ಕ್ಷೇತ್ರಕ್ಕೆ ಪ್ರತಾಪ ಸಿಂಹ ಅವರ ಕೊಡುಗೆಗಳಾದರು ಏನೆಂದು ಪ್ರಶ್ನಿಸಿದರು.
ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿರುವ ಮೈಸೂರು ರಾಜವಂಶಸ್ಥ ಯದುವೀರ್ ಅವರ ಬಗ್ಗೆ ತಮಗೆ ಅಪಾರ ಗೌರವವಿದೆ. ಆದರೆ, ಜನಸಾಮಾನ್ಯರಿಗೆ ಜನಪ್ರತಿನಿಧಿಯಾಗಿ ಸಲಭವಾಗಿ ಅವರ ಭೇಟಿ ಸಾಧ್ಯವೇ ಎಂದರು.
ಕಾಂಗ್ರೆಸ್ ಗ್ಯಾರಂಟಿ ಅನುಷ್ಠಾನ ಸಮಿತಿಯ ಮಡಿಕೇರಿ ತಾಲ್ಲೂಕು ಅಧ್ಯಕ್ಷರಾದ ಮಂದ್ರೀರ ಮೋಹನ ದಾಸ್ ಮಾತನಾಡಿ, ಕೊಡಗಿನ ಇಬ್ಬರು ಶಾಸಕರು ಅಭಿವೃದ್ಧಿ ಪರವಾದ ಚಿಂತನೆಗಳೊಂದಿಗೆ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಇದನ್ನು ಸಹಿಸದ ಬಿಜೆಪಿ ಚುನಾವಣಾ ಹಿನ್ನೆಲೆಯಲ್ಲಿ ಅರೆಭಾಷಿಕ ಒಕ್ಕಲಿಗ ಸಮೂಹವನ್ನು ದಿಕ್ಕು ತಪ್ಪಿಸುವ ಪ್ರಯತ್ನವಾಗಿ ಹೇಳಿಕೆಗಳನ್ನು ನೀಡುತ್ತಿದೆ. ಈ ಬಾರಿ ಬಿಜೆಪಿಗೆ ಸೋಲು ಕಟ್ಟಿಟ್ಟ ಬುತ್ತಿ ಎಂದು ಭವಿಷ್ಯ ನುಡಿದರು.
ಸುದ್ದಿಗೊಷ್ಠಿಯಲ್ಲಿ ಕಾಂಗ್ರೆಸ್ ಸೇವಾದಳದ ಜಿಲ್ಲಾಧ್ಯಕ್ಷ ಕಾನೆಹಿತ್ಲು ಮೊಣ್ಣಪ್ಪ, ಕಾಂಗ್ರೆಸ್ ವೃತ್ತಿ ಪರ ಘಟಕದ ಅಧ್ಯಕ್ಷ ಅಂಬೆಕಲ್ ನವೀನ್, ಸಾಮಾಜಿಕ ಜಾಲತಾಣ ಘಟಕದ ಅಧ್ಯಕ್ಷ ಸೂರಜ್ ಹೊಸೂರು ಹಾಗೂ ಸಂಪಾಜೆ ವಲಯದ ಅಧ್ಯಕ್ಷ ಪಿ.ಎಲ್.ಸುರೇಶ್ ಉಪಸ್ಥಿತರಿದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಹಾತೂರಿನಲ್ಲಿ ಹೊಲಿಗೆ ತರಬೇತಿ ಕಾರ್ಯಕ್ರಮದ ಸಮಾರೋಪ : ಪ್ರಮಾಣಪತ್ರ ವಿತರಣೆ* 

ಮಾರ್ಚ್ 23, 2026

*ಶೈಕ್ಷಣಿಕ ಹಾಗೂ ವೈದ್ಯಕೀಯ ಕ್ಷೇತ್ರದಲ್ಲಿ ಕ್ರೈಸ್ತ ಮಿಷನರಿಗಳ ಕೊಡುಗೆ ಅಪಾರ : ಅರುಣ್ ಮಾಚಯ್ಯ*

ಮಾರ್ಚ್ 23, 2026

*ಪೊನ್ನಂಪೇಟೆ ಮತ್ತು ಶ್ರೀಮಂಗಲ : ಮಾ.26 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ*

ಮಾರ್ಚ್ 23, 2026

*ಶೈಕ್ಷಣಿಕ ಹಾಗೂ ವೈದ್ಯಕೀಯ ಕ್ಷೇತ್ರದಲ್ಲಿ ಕ್ರೈಸ್ತ ಮಿಷನರಿಗಳ ಕೊಡುಗೆ ಅಪಾರ : ಅರುಣ್ ಮಾಚಯ್ಯ*

ಮಾರ್ಚ್ 23, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿರಾಜಪೇಟೆ ಮಾ.23 NEWS DESK : ಕೊಡಗು ಕ್ರಿಶ್ಚಿಯನ್ ಅಸೋಸಿಯೇಷನ್ ಸಹಯೋಗದಲ್ಲಿ ಕೂರ್ಗ್ ಕ್ಲಿಫ್ ರೆಸಾರ್ಟ್‍ನಲ್ಲಿ ನಡೆದ ಕ್ಲಿಫ್ ಆಫ್…

*ಪೊನ್ನಂಪೇಟೆ ಮತ್ತು ಶ್ರೀಮಂಗಲ : ಮಾ.26 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ*

ಮಾರ್ಚ್ 23, 2026

*ಮಾ.27 ರಂದು ಕೂಡಿಗೆಯಲ್ಲಿ ವೃತ್ತಿ ಶಿಕ್ಷಣ ಪ್ರದರ್ಶನ, ವೃತ್ತಿ ಮಾರ್ಗದರ್ಶನ*

ಮಾರ್ಚ್ 23, 2026

*ಏ.7 ರಿಂದ 30 ರವರೆಗೆ ಬೇಸಿಗೆ ತರಬೇತಿ ಶಿಬಿರ*

ಮಾರ್ಚ್ 23, 2026

*ಮಡಿಕೇರಿಯಲ್ಲಿ ದೇವರ ದಾಸಿಮಯ್ಯ ಜಯಂತಿ :  ಕೈಮಗ್ಗ ಉತ್ಪನ್ನಗಳಿಗೆ ಮಾರುಕಟ್ಟೆ ಕಲ್ಪಿಸಿ : ಟಿ.ಕೆ.ಪಾಂಡುರಂಗ*

ಮಾರ್ಚ್ 23, 2026

*ಕೊಡಗು ಪ್ರೆಸ್ ಕ್ಲಬ್ ಕ್ರಿಕೆಟ್ ಪ್ರೀಮಿಯರ್ ಲೀಗ್-4 : ಮೀಡಿಯಾ ಚಾಲೆಂಜರ್ಸ್ ತಂಡ ಚಾಂಪಿಯನ್*

ಮಾರ್ಚ್ 23, 2026

*ಕೆ.ಜಿ.ಬೋಪಯ್ಯರಿಂದ ಅನೇಕ ಅಭಿವೃದ್ಧಿ ಕಾರ್ಯಗಳು ನಡೆದಿದೆ : ಕಾಂಗ್ರೆಸ್ಸಿಗರು ಅಪಪ್ರಚಾರದಲ್ಲಿ ತೊಡಗಿದ್ದಾರೆ : ಪರಮೇಶ್ವರ್ ಅಸಮಾಧಾನ*

ಮಾರ್ಚ್ 23, 2026

*ಸುಂಟಿಕೊಪ್ಪದಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ಶ್ರೀ ಚಾಮುಂಡೇಶ್ವರಿ, ಶ್ರೀಮುತ್ತಪ್ಪ ಮತ್ತು ಪರಿವಾರ ದೇವರುಗಳ ತೆರೆ ಮಹೋತ್ಸವ*

ಮಾರ್ಚ್ 23, 2026

*ಕಾಸ್ಮೋಪಾಲಿಟನ್ ಕ್ಲಬ್ ಅಧ್ಯಕ್ಷರಾಗಿ ರತನ್ ತಮ್ಮಯ್ಯ ಆಯ್ಕೆ*

ಮಾರ್ಚ್ 23, 2026

*ಅಡುಗೆ ಅನಿಲ ಬೆಲೆ ಏರಿಕೆ ವಿರೋಧಿಸಿ ಮಡಿಕೇರಿ ನಗರ ಕಾಂಗ್ರೆಸ್ ನಿಂದ ಪ್ರತಿಭಟನೆ*

ಮಾರ್ಚ್ 23, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.