Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಯಡೂರು : ಡಾ.ಅಂಬೇಡ್ಕರ್ ಅವರ ಚಿಂತನೆಗಳು ಇಂದಿಗೂ ಪ್ರಸ್ತುತ : ಜಯಪ್ಪ ಹಾನಗಲ್
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಯಡೂರು : ಡಾ.ಅಂಬೇಡ್ಕರ್ ಅವರ ಚಿಂತನೆಗಳು ಇಂದಿಗೂ ಪ್ರಸ್ತುತ : ಜಯಪ್ಪ ಹಾನಗಲ್

ಏಪ್ರಿಲ್ 18, 20241 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಸೋಮವಾರಪೇಟೆ ಏ.18 NEWS DESK : ಶತಮಾನಗಳಿಂದ ನಿರ್ಲಕ್ಷ್ಯಕ್ಕೆ ಒಳಗಾಗಿದ್ದ ದಲಿತರು, ಅಸ್ಪೃಶ್ಯರಿಗೆ ಗೌರವಯುತ ಬದುಕನ್ನು ಕಟ್ಟಿಕೊಟ್ಟ, ಡಾ.ಅಂಬೇಡ್ಕರ್ ಅವರ ಚಿಂತನೆಗಳು ಇಂದಿಗೂ ಪ್ರಸ್ತುತ ಎಂದು ದಲಿತಪರ ಹೋರಾಟಗಾರ ಜಯಪ್ಪ ಹಾನಗಲ್ ಅಭಿಪ್ರಾಯಪಟ್ಟರು.
ಸಮೀಪದ ಯಡೂರು ಗ್ರಾಮದ ಬಿ.ಟಿ.ಚನ್ನಯ್ಯ ಗೌರಮ್ಮ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಈಚೆಗೆ ನಡೆದ ಡಾ.ಬಿ.ಆರ್.ಅಂಬೇಡ್ಕರ್ ಅವರ 133ನೆ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಅವರು ಮಾತನಾಡಿದರು.
ಬಾಬಾ ಸಾಹೇಬರ ಸಾಧನೆ ಅಸಾಧಾರಣವಾದುದು. ಅವರು ಬದುಕಿನುದ್ದಕ್ಕೂ ಅವಮಾನ ಶೋಷಣೆಗಳಿಗೆ ಒಳಗಾಗಿ, ಅವುಗಳನ್ನು ಮೆಟ್ಟಿನಿಂತು ನೊಂದವರ ಬಾಳಿಗೆ ಬೆಳಕಾದವರು ಎಂದು ಹೇಳಿದರು.
ಇನ್ನು ಮುಂದಿನ ದಿನಗಳಲ್ಲಿ ಮೀಸಲಾತಿಯಿಂದ ನೌಕರಿ ಪಡೆಯುವುದು ಅಸಾಧ್ಯದ ಮಾತು. ದೇಶದ ಸ್ವಾಯುತ ಸರ್ಕಾರಿ ಸಂಸ್ಥೆಗಳನ್ನು ಖಾಸಗಿಯವರಿಗೆ ಮಾರಾಟ ಮಾಡಲಾಗಿದೆ. ಸರ್ಕಾರಿ ಸಂಸ್ಥೆಗಳು ಇಲ್ಲದೇ ಹೋದರೆ, ಮೀಸಲಾತಿ ಇಲ್ಲವಾಗುತ್ತದೆ ಎಂಬುದನ್ನು ಆಡಳಿತ ಮಾಡುವವರು ತಿಳಿದುಕೊಂಡಿದ್ದಾರೆ. ಶಿಕ್ಷಣ ತಾರಾತಮ್ಯದಿಂದ ಅನೇಕ ಬಡವರು, ದೀನದಲಿತರು ನೌಕರಿಯಿಂದ ವಂಚಿತರಾಗುವ ಸಂದರ್ಭ ಬರಲಿದೆ. ಈಗಾಗಲೇ ವಿದ್ಯಾರ್ಥಿಗಳು ಎಚ್ಚರ ವಹಿಸಬೇಕಾಗಿದೆ. ಅಂಬೇಡ್ಕರ್ ಅವರಿಗೆ ಬಂದ ಅವಮಾನಕರ ಹಾಗೂ ಕಷ್ಟ ಇಂದಿನ ವಿದ್ಯಾರ್ಥಿಗಳಿಗೆ ಬರಬಾರದು. ನಿರಂತರ ಓದಿನಿಂದ ಐಎಎಸ್, ಐಪಿಎಸ್, ಐಆರ್‍ಎಸ್, ಐಎಫ್‍ಎಸ್ ನಂತಹ ಪರೀಕ್ಷೆಗಳನ್ನು ಬರೆದು ಪಾಸಾಗಬಹುದು ಎಂದು ಹೇಳಿದರು.
ಕಾಲೇಜಿನ ಅರ್ಥಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ.ದೇವರಾಜ್ ಮಾತನಾಡಿ, ಅಂಬೇಡ್ಕರ್ ಅವರು ಬರೆದಿರುವ ಸಂವಿಧಾನ ಇಡೀ ವಿಶ್ವದಲ್ಲಿಯೇ ಅತ್ಯಂತ ವಿಶಿಷ್ಟವಾದುದು. ಅದರಲ್ಲಿರುವ ರಾಜ್ಯ ನಿರ್ದೇಶಕ ತತ್ವಗಳು ಬಹಳ ಮಹತ್ವ ಪೂರ್ಣವಾದುವು. ಡಾ.ಅಂಬೇಡ್ಕರ್ ಒಂದು ಜನಾಂಗಕ್ಕೆ ಸೀಮಿತರಾದ ವ್ಯಕ್ತಿಯಲ್ಲ. ಸರ್ವಮಾನ್ಯ ವ್ಯಕ್ತಿ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಕಾಲೇಜು ವತಿಯಿಂದ ಜಯಪ್ಪ ಹಾನಗಲ್ ಅವರನ್ನು ಸನ್ಮಾನಿಸಿ, ಗೌರವಿಸಲಾಯಿತು.
ಕಾಲೇಜಿನ ಪ್ರಾಂಶುಪಾಲರಾದ ಪ್ರೊ.ಕೆ.ಹೆಚ್.ಧನಲಕ್ಷ್ಮಿ ಅಧ್ಯಕ್ಷತೆ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಇಂಗ್ಲಿಷ್ ಸಹಾಯಕ ಪ್ರಾಧ್ಯಾಪಕ ಎಂ.ಎಸ್.ಶಿವಮೂರ್ತಿ, ವಾಣಿಜ್ಯ ವಿಭಾಗದ ಪ್ರೊ.ಎಂ.ಎಂ.ಸುನಿತ, ಪ್ರೊ. ಪಿ.ಪಾವನಿ ಮತ್ತಿತರರು ಇದ್ದರು.

 

Follow us Follow us
Share. WhatsApp Facebook Twitter Email Telegram Copy Link

Related Posts

ನ.7 ರಂದು ಸಂದರ್ಶನ

ಅಕ್ಟೋಬರ್ 28, 2026

ನ.1 ರಂದು ಕನ್ನಡ ರಾಜ್ಯೋತ್ಸವ ದಿನಾಚರಣೆ

ಅಕ್ಟೋಬರ್ 28, 2026

ಬಿ.ಎಸ್ಸಿ ನರ್ಸಿಂಗ್ ಕೋರ್ಸ್‌ನ ಖಾಲಿ ಸೀಟುಗಳ ಭರ್ತಿಗೆ ವಾಕ್‌-ಇನ್ ಪ್ರವೇಶಾತಿ

ಅಕ್ಟೋಬರ್ 28, 2026

ನ.1 ರಂದು ಕನ್ನಡ ರಾಜ್ಯೋತ್ಸವ ದಿನಾಚರಣೆ

ಅಕ್ಟೋಬರ್ 28, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಅ.28 NEWS DESK : ಕೊಡಗು ಜಿಲ್ಲಾಡಳಿತ ವತಿಯಿಂದ 71 ನೇ ಕನ್ನಡ ರಾಜ್ಯೋತ್ಸವ ದಿನಾಚರಣೆಯು ನವೆಂಬರ್, 01…

ಬಿ.ಎಸ್ಸಿ ನರ್ಸಿಂಗ್ ಕೋರ್ಸ್‌ನ ಖಾಲಿ ಸೀಟುಗಳ ಭರ್ತಿಗೆ ವಾಕ್‌-ಇನ್ ಪ್ರವೇಶಾತಿ

ಅಕ್ಟೋಬರ್ 28, 2026

ವಿರಾಜಪೇಟೆಯಲ್ಲಿ ಅ.31 ರಂದು ಆರ್‌ಎಸ್‌ಎಸ್‌ನಿಂದ ವಿಜಯದಶಮಿ ಪಥಸಂಚಲನ

ಅಕ್ಟೋಬರ್ 28, 2026

ಪೌರಕಾರ್ಮಿಕರಿಗೆ ಅಗತ್ಯ ಮೂಲ ಸೌಲಭ್ಯ ಕಲ್ಪಿಸಿ: ಜಿಲ್ಲಾಧಿಕಾರಿ ಸೋಮಶೇಖರ್

ಅಕ್ಟೋಬರ್ 28, 2026

ಡಾ. ಬಿ.ಆರ್. ಅಂಬೇಡ್ಕರ್ ಶತಮಾನೋತ್ಸವ ಭವನ ನಿರ್ಮಾಣ ಸಮಿತಿಗೆ ಆಡಳಿತಾಧಿಕಾರಿ ನೇಮಕ

ಅಕ್ಟೋಬರ್ 28, 2026

ಅ.29ರಂದು ನಗರಸಭೆ ಬಿಜೆಪಿ ಆಡಳಿತದ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ

ಅಕ್ಟೋಬರ್ 28, 2026

ತಲಕಾವೇರಿ ವನ್ಯಜೀವಿ ಅಭಯಾರಣ್ಯದಲ್ಲಿ ಬೇಟೆಗೆ ಯತ್ನ: 8 ಆರೋಪಿಗಳ ಬಂಧನ, ಓರ್ವ ಪರಾರಿ

ಅಕ್ಟೋಬರ್ 28, 2026

ಕುಶಾಲನಗರದಲ್ಲಿ 191ನೇ ಮಹಾ ಆರತಿ ಕಾರ್ಯಕ್ರಮ; ಕಾವೇರಿ ನದಿ ಸಂರಕ್ಷಣೆಗೆ ಪ್ರತಿಯೊಬ್ಬರೂ ಕೈಜೋಡಿಸಬೇಕು: ಸದಾಶಿವ ಸ್ವಾಮೀಜಿ

ಅಕ್ಟೋಬರ್ 28, 2026

ಅಹಿಂದ ಬಳಗ ಕೊಡಗು ಜಿಲ್ಲೆಗೆ ನೂತನ ಪದಾಧಿಕಾರಿಗಳ ನೇಮಕ

ಅಕ್ಟೋಬರ್ 28, 2026

ಪಾಡಿ ಶ್ರೀ ಇಗ್ಗುತಪ್ಪ ದೇವಾಲಯದಲ್ಲಿ ‘ಪತ್ತಾಲೋಧಿ’ ಆರಾಧನೋತ್ಸವ ಸಂಪನ್ನ

ಅಕ್ಟೋಬರ್ 28, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.