ಮಡಿಕೇರಿ.ಏ.19 NEWS DESK : ಲೋಕಸಭಾ ಸಾರ್ವತ್ರಿಕ ಚುನಾವಣೆ-2024 ಕ್ಕೆ ಸಂಬಂಧಿಸಿದಂತೆ ಚುನಾವಣಾ ಕರ್ತವ್ಯ ನಿರತ ಅಧಿಕಾರಿ ಹಾಗೂ ಸಿಬ್ಬಂಧಿಗಳಿಗೆ ಅಂಚೆ ಸೌಲಭ್ಯ ಕೇಂದ್ರ ಸ್ಥಾಪಿಸಲು ಚುನಾವಣಾ ಆಯೋಗದಿಂದ ನಿರ್ದೇಶನ ನೀಡಲಾಗಿದೆ.
ಅದರಂತೆ 21-ಮೈಸೂರು ಕೊಡಗು ಲೋಕಸಭಾ ಸಾರ್ವತ್ರಿಕ ಚುನಾವಣೆ-2024 ರ ಸಂಬಂಧ, 208-ಮಡಿಕೇರಿ ವಿಧಾನ ಸಭಾ ಕ್ಷೇತ್ರಕ್ಕೆ ಸಂಬಂಧಿಸಿದಂತೆ ನಮೂನೆ-12 ರಲ್ಲಿ ನೀಡಲಾದ ಅರ್ಜಿಗಳಿಗೆ ಮತ ಚಲಾಯಿಸಲು ಸೌಲಭ್ಯವನ್ನು ಒದಗಿಸಬೇಕಾಗಿರುತ್ತದೆ.
ಮತದಾರರಿಗೆ ಅನುಕೂಲವಾಗುವಂತೆ ಅಂಚೆ ಮತದಾನ ಸೌಲಭ್ಯ ಕೇಂದ್ರವನ್ನು (Postal Ballot Facilitation Center) ಮಡಿಕೇರಿಯ ಸಂತ ಜೋಸೇಫರ ಶಾಲೆಯಲ್ಲಿ ಸ್ಥಾಪಿಸಲಾಗಿದ್ದು, ಚುನಾವಣಾ ಕರ್ತವ್ಯದಲ್ಲಿ ನಿರತರಾದ ಅಧಿಕಾರಿ/ಸಿಬ್ಬಂಧಿಗಳಿಗೆ ಏ.20, 21 ಹಾಗೂ 22 ರಂದು ಪೂರ್ವಾಹ್ನ 9 ಗಂಟೆಯಿಂದ ಸಂಜೆ 5 ಗಂಟೆಯ ವರೆಗೆ ಅಂಚೆ ಮತದಾನ ಮಾಡಲು ಅವಕಾಶ ಕಲ್ಪಿಸಲಾಗಿರುವುದರಿಂದ ಅಂಚೆ ಮತದಾರರು ತಪ್ಪದೆ ಮತ ಚಲಾಯಿಸಲು ಮಡಿಕೇರಿ ಉಪವಿಭಾಗಾಧಿಕಾರಿಗಳು ಕೋರಿದ್ದಾರೆ.