ಮಡಿಕೇರಿ ಏ.19 NEWS DESK : ವಾಲ್ನೂರಿನಲ್ಲಿ ನಡೆದ ಅಪಘಾತದಲ್ಲಿ ಸಾವಿಗೀಡಾದ ರಾಮಪ್ಪ ಅವರ ಪಾರ್ಥಿವ ಶರೀರವನ್ನು ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಎ.ಎಸ್.ಪೊನ್ನಣ್ಣ ಆಸ್ಪತ್ರೆಯಲ್ಲಿ ವೀಕ್ಷಿಸಿ, ಅಂತಿಮ ನಮನ ಸಲ್ಲಿಸಿದರು.
ಕುಟುಂಬದವರಿಗೆ ಸಾಂತ್ವನ ಹೇಳಿ ಮಾತನಾಡಿದ ಶಾಸಕರು, ಸರಕಾರದಿಂದ ಮೃತರ ಕುಟುಂಬಕ್ಕೆ ಸೂಕ್ತ ಪರಿಹಾರ ಒದಗಿಸುವುದಲ್ಲದೆ, ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಸೂಚಿಸುವುದಾಗಿ ತಿಳಿಸಿದರು.