

ಮಡಿಕೇರಿ ಏ.19 NEWS DESK : ವಾಲ್ನೂರು ಗ್ರಾಮದಲ್ಲಿ ಗುರುವಾರ ರಾತ್ರಿ ಅಪಘಾತದಿಂದ ಬಿಜೆಪಿ ಕಾರ್ಯಕರ್ತ ರಾಮಪ್ಪ (68) ಅವರು ಮೃತಪಟ್ಟು, ಇಬ್ಬರು ಗಂಭೀರವಾಗಿ ಗಾಯಗೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ತಪ್ಪಿತಸ್ಥರನ್ನು ಬಂಧಿಸಬೇಕು ಮತ್ತು ಮೃತರ ಕುಟುಂಬಕ್ಕೆ ಸೂಕ್ತ ಪರಿಹಾರ ಒದಗಿಸಬೇಕೆಂದು ಒತ್ತಾಯಿಸಿ ಬಿಜೆಪಿ ಹಾಗೂ ಹಿಂದೂ ಸಂಘಟನೆಗಳು ಪ್ರತಿಭಟನೆ ನಡೆಸಿದವು.
ಕಾರು ಡಿಕ್ಕಿಪಡಿಸಿ ಪರಾರಿಯಾದ ಆರೋಪಿಗಳ ಪೈಕಿ ಒಬ್ಬನನ್ನು ಮಾತ್ರ ಬಂಧಿಸಲಾಗಿದೆ. ಉಳಿದವರನ್ನು ತಕ್ಷಣ ಬಂಧಿಸಬೇಕು, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಪ್ರತಿಭಟನಾಕಾರರು ಒತ್ತಾಯಿಸಿದರು.
ರಾಜ್ಯ ಕಾಂಗ್ರೆಸ್ ಸರಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಅಸಮಾಧಾನ ವ್ಯಕ್ತಪಡಿಸಿದ ಕಾರ್ಯಕರ್ತರು ರಸ್ತೆ ತಡೆ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಬೇಕೆಂದು ಆಗ್ರಹಿಸಿದರು.