ಮಡಿಕೇರಿ ಏ.19 NEWS DESK : ಲೋಕಸಭಾ ಸಾರ್ವತ್ರಿಕ ಚುನಾವಣೆ-2024 ಕ್ಕೆ ಸಂಬಂಧಿಸಿದಂತೆ ಚುನಾವಣಾ ಕರ್ತವ್ಯ ನಿರತ ಅಧಿಕಾರಿ ಹಾಗೂ ಸಿಬ್ಬಂದಿಗಳಿಗೆ ಅಂಚೆ ಸೌಲಭ್ಯ ಕೇಂದ್ರ ಸ್ಥಾಪಿಸಲು ಚುನಾವಣಾ ಆಯೋಗದಿಂದ ನಿರ್ದೇಶನ ನೀಡಲಾಗಿರುತ್ತದೆ.
ಅದರಂತೆ 21-ಮೈಸೂರು ಕೊಡಗು ಲೋಕಸಭಾ ಸಾರ್ವತ್ರಿಕ ಚುನಾವಣೆ-2024 ರ ಸಂಬಂಧ 209-ವಿರಾಜಪೇಟೆ ವಿಧಾನಸಭಾ ಕ್ಷೇತ್ರಕ್ಕೆ ಸಂಬಂಧಿಸಿದಂತೆ ನಮೂನೆ-12 ರಲ್ಲಿ ನೀಡಲಾದ ಅರ್ಜಿಗಳಿಗೆ ಮತ ಚಲಾಯಿಸಲು ಸೌಲಭ್ಯವನ್ನು ಒದಗಿಸಬೇಕಾಗಿರುತ್ತದೆ.
ಈ ಮತದಾರರಿಗೆ ಅನುಕೂಲವಾಗುವಂತೆ ಅಂಚೆ ಮತದಾನ ಸೌಲಭ್ಯ ಕೇಂದ್ರವನ್ನು (ಪೋಸ್ಟಲ್ ಬ್ಯಾಲೆಟ್ ಫೆಸಿಲಿಟೇಷನ್ ಸೆಂಟರ್) ವಿರಾಜಪೇಟೆ ಸಹಾಯಕ ಚುನಾವಣಾಧಿಕಾರಿಗಳ ಕಚೇರಿಯಲ್ಲಿ ಸ್ಥಾಪಿಸಲಾಗಿದ್ದು, ಚುನಾವಣಾ ಕರ್ತವ್ಯದಲ್ಲಿ ನಿರತರಾದ ಅಧಿಕಾರಿ/ಸಿಬ್ಬಂದಿಗಳಿಗೆ ಏ.20, ಏ. 21 ಮತ್ತು ಏ.22 ರಂದು ಬೆಳಗ್ಗೆ 9 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ವಿರಾಜಪೇಟೆ ಸಹಾಯಕ ಚುನಾವಣಾಧಿಕಾರಿ ಕಚೇರಿಯಲ್ಲಿ ಅಂಚೆ ಮತದಾನ ಮಾಡಲು ಅವಕಾಶ ಕಲ್ಪಿಸಲಾಗಿರುವುದರಿಂದ ಅಂಚೆ ಮತದಾರರು ತಪ್ಪದೆ ಮತ ಚಲಾಯಿಸುವಂತೆ 209 ವಿರಾಜಪೇಟೆ ವಿಧಾನಸಭಾ ಕ್ಷೇತ್ರ, 21 ಮೈಸೂರು ಲೋಕಸಭಾ ಕ್ಷೇತ್ರದ ಸಹಾಯಕ ಚುನಾವಣಾಧಿಕಾರಿ ತಿಳಿಸಿದ್ದಾರೆ.