ಮಡಿಕೇರಿ ಏ.19 NEWS DESK : ಕುಶಾಲನಗರ ತಾಲ್ಲೂಕಿನ ವಾಲ್ನೂರು ಗ್ರಾಮದಲ್ಲಿ ಗುರುವಾರ ರಾತ್ರಿ ಅಪಘಾತದಿಂದ ಬಿಜೆಪಿ ಕಾರ್ಯಕರ್ತ ರಾಮಪ್ಪ (68) ಅವರು ಮೃತಪಟ್ಟು, ಇಬ್ಬರು ಗಂಭೀರವಾಗಿ ಗಾಯಗೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ತಪ್ಪಿತಸ್ಥರನ್ನು ಬಂಧಿಸಬೇಕು ಮತ್ತು ಮೃತರ ಕುಟುಂಬಕ್ಕೆ ಸೂಕ್ತ ಪರಿಹಾರ ಒದಗಿಸಬೇಕೆಂದು ಒತ್ತಾಯಿಸಿ ಬಿಜೆಪಿ ಹಾಗೂ ಹಿಂದೂ ಸಂಘಟನೆಗಳು ಸಿದ್ದಾಪುರದಲ್ಲಿ ಪ್ರತಿಭಟನೆ ನಡೆಸಿದವು.
ಕಾರು ಡಿಕ್ಕಿಪಡಿಸಿ ಪರಾರಿಯಾದ ಆರೋಪಿಗಳ ಪೈಕಿ ಒಬ್ಬನನ್ನು ಮಾತ್ರ ಬಂಧಿಸಲಾಗಿದೆ. ಉಳಿದವರನ್ನು ತಕ್ಷಣ ಬಂಧಿಸಬೇಕು, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಪ್ರತಿಭಟನಾಕಾರರು ಒತ್ತಾಯಿಸಿದರು.
ರಾಜ್ಯ ಕಾಂಗ್ರೆಸ್ ಸರಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಅಸಮಾಧಾನ ವ್ಯಕ್ತಪಡಿಸಿದ ಕಾರ್ಯಕರ್ತರು ರಸ್ತೆ ತಡೆ ಪ್ರತಿಭಟನೆ ನಡೆಸಿ ರಾಮಪ್ಪ ಅವರ ಕುಟುಂಬಕ್ಕೆ 25 ಲಕ್ಷ ರೂ. ಪರಿಹಾರ ನೀಡಬೇಕು ಮತ್ತು ಜಿಲ್ಲಾಧಿಕಾರಿಗಳು ಸ್ಥಳಕ್ಕೆ ಬರಬೇಕೆಂದು ಆಗ್ರಹಿಸಿದರು.
::: ಯದುವೀರ್ ಭೇಟಿ :::
ಮೈಸೂರು- ಕೊಡಗು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯದುವೀರ್ ಒಡೆಯರ್, ಮಾಜಿ ಶಾಸಕರುಗಳಾದ ಎಂ.ಪಿ.ಅಪ್ಪಚ್ಚುರಂಜನ್, ಕೆ.ಜಿ.ಬೋಪಯ್ಯ, ವಿಧಾನ ಪರಿಷತ್ ಸದಸ್ಯ ಸುಜಾ ಕುಶಾಲಪ್ಪ, ಮಾಜಿ ಸದಸ್ಯ ಸುನಿಲ್ ಸುಬ್ರಮಣಿ ಸೇರಿದಂತೆ ಬಿಜೆಪಿ ಮುಖಂಡರುಗಳು ಪ್ರತಿಭಟನಾ ಸ್ಥಳಕ್ಕೆ ಆಗಮಿಸಿ ಘಟನೆಯನ್ನು ತೀವ್ರವಾಗಿ ಖಂಡಿಸಿದರು.
ಪ್ರತಿಭಟನೆಯಿಂದಾಗಿ ಪಟ್ಟಣದಲ್ಲಿ ವಾಹನ ಸಂಚಾರ ಅಸ್ತವ್ಯಸ್ತಗೊಂಡಿತು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಹಾಗೂ ಉಪವಿಭಾಗಾಧಿಕಾರಿ ವಿನಾಯಕ ನರ್ವಾಡೆ ಆಗಮಿಸಿ ಪ್ರತಿಭಟನಾಕಾರರ ಮನವೊಲಿಸುವ ಪ್ರಯತ್ನ ಮಾಡಿದರು. ನಂತರ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಸ್ಥಳಕ್ಕೆ ಭೇಟಿ ನೀಡಿ ಪ್ರತಿಭಟನಾಕಾರರೊಂದಿಗೆ ಮಾತನಾಡಿ, ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಸಾರ್ವಜನಿಕರು ಜಿಲ್ಲಾಡಳಿತದೊಂದಿಗೆ ಸಹಕರಿಸಬೇಕೆಂದರು.
::: ಸಿ.ಟಿ.ರವಿ ಭೇಟಿ :::
ಮಧ್ಯಾಹ್ನ ಸ್ಥಳಕ್ಕೆ ಆಗಮಿಸಿದ ಬಿಜೆಪಿ ಮುಖಂಡ ಸಿ.ಟಿ.ರವಿಯವರು, ರಾಮಪ್ಪ ಅವರ ಸಾವಿಗೆ ಕಾರಣರಾದವರನ್ನು ಕೂಡಲೇ ಬಂಧಿಸಿ ಕುಟುಂಬಕ್ಕೆ ಪರಿಹಾರ ನೀಡದಿದ್ದಲ್ಲಿ ಬೃಹತ್ ಪ್ರತಿಭಟನೆ ಮಾಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
ಎಲ್ಲರು ಮನವೊಲಿಸಿದ ನಂತರ ಪ್ರತಿಭಟನಾ ನಿರತರು ಪ್ರತಿಭಟನೆಯಿಂದ ಹಿಂದಕ್ಕೆ ಸರಿದರು.
ಪ್ರತಿಭಟನೆಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ನಾಪಂಡ ರವಿ ಕಾಳಪ್ಪ, ಪ್ರಧಾನ ಕಾರ್ಯದರ್ಶಿ ವಿ.ಕೆ.ಲೋಕೇಶ್, ನೆಲ್ಲಿರ ಚಲನ್, ಮಹೇಶ್ ಜೈನಿ, ಬಜರಂಗದಳದ ಜಿಲ್ಲಾ ಸಂಚಾಲಕ ಪ್ರವೀಣ್, ಪ್ರಮುಖರಾದ ಸುವಿನ್ ಗಣಪತಿ, ಗೌತಮ್, ನಾಗೇಶ್, ಉಮೇಶ್ ಸುಬ್ರಮಣಿ ಸೇರಿದಂತೆ ಬಿಜೆಪಿ ಹಾಗೂ ವಿವಿಧ ಸಂಘಟನೆಗಳ ಮುಖಂಡರು ಪಾಲ್ಗೊಂಡಿದ್ದರು.
::: ಘಟನೆ ಹಿನ್ನೆಲೆ ::: ಗುರುವಾರ ರಾತ್ರಿ ಬಿಜೆಪಿ ಪರವಾಗಿ ರಾಮಪ್ಪ (68) ಅವರು ಪಕ್ಷದ ಇತರ ಸದಸ್ಯರೊಂದಿಗೆ ಮತಯಾಚನೆ ಮಾಡುತ್ತಾ ರಸ್ತೆಯಲ್ಲಿ ಸಾಗುತ್ತಿದ್ದರು. ಇದೇ ಸಂದರ್ಭ ಕಾರೊಂದು ಇವರಿಗೆ ಡಿಕ್ಕಿಯಾಗಿದ್ದು, ಘಟನೆಯ ಬಳಿಕ ಚಾಲಕ ವಾಹನವನ್ನು ನಿಲ್ಲಿಸದೆ ಪರಾರಿಯಾಗಿದ್ದ. ಗಂಭೀರವಾಗಿ ಗಾಯಗೊಂಡ ರಾಮಪ್ಪ ಅವರು ಕೊನೆಯುಸಿರೆಳೆದರೆ, ತೀವ್ರವಾಗಿ ಗಾಯಗೊಂಡಿದ್ದ ಚಂದ್ರರಾಜ್ ಹಾಗೂ ರತೀಶ್ ಎಂಬುವವರನ್ನು ಮಡಿಕೇರಿಯ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು.
ಸ್ಥಳೀಯರು ಅಪಘಾತ ಮಾಡಿದ ಕಾರನ್ನು ಹಿಂಬಾಲಿಸಿ ಚಿಕ್ಲಿಹೊಳೆ ಬಳಿ ಚಾಲಕ ಹರ್ಷದ್ ಎಂಬಾತನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದರು ಎಂದು ಹೇಳಲಾಗಿದೆ.
ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.
Breaking News
- *ಭಾಗಮಂಡಲ ಫ್ಲೈ ಓವರ್ – ಫ್ಲಾಶ್ ಬ್ಯಾಕ್*
- *ಅರ್ಚಕರ ಮೇಲೆ ನಡೆದ ಹಲ್ಲೆ ಪ್ರಕರಣ : ಸಹಕರಿಸಿದ ಆರೋಪಿಗಳು ಹಾಗೂ ವಾಹನಗಳು ವಶ : ಆರೋಪಿಗಳಿಗೆ ಸಹಾಯ ಮಾಡುತ್ತಿರುವವರ ಕುರಿತು ಮಾಹಿತಿ ಒದಗಿಸಲು ಎಸ್ಪಿ ಮನವಿ*
- *ಮುಖ್ಯಮಂತ್ರಿಗಳಿಗೆ ಕೊಡಗು ಎಸ್ಡಿಪಿಐಯಿಂದ ಪಂಚ ಪ್ರಶ್ನೆ*
- *ಜೀವ ಬೆದರಿಕೆ ಇದೆ ಎಂದು ಆರೋಪಿಸಿ ದೂರು ನೀಡಿದ ಎನ್.ಯು.ನಾಚಪ್ಪ*
- *ಮಡಿಕೇರಿಯಲ್ಲಿ ಹುತಾತ್ಮ ದಿನಾಚರಣೆ : ಗಾಂಧೀಜಿ ತತ್ವ, ಆದರ್ಶ ಮೈಗೂಡಿಸಿಕೊಳ್ಳಿ : ಜಿಲ್ಲಾಧಿಕಾರಿ ವೆಂಕಟ್ ರಾಜಾ ಕರೆ*
- *ಕೊಡಗು : ಫೆ.13 ರವರೆಗೆ “ಸ್ಪರ್ಶ್ ಕುಷ್ಠರೋಗ ಜಾಗೃತಿ ಅಭಿಯಾನ”*
- *ಒಳಮೀಸಲಾತಿ ಶೀಘ್ರ ಜಾರಿಗೆ ತರಲು ದಲಿತ ಸಂಘರ್ಷ ಸಮಿತಿ ಆಗ್ರಹ*
- *ಮೂರ್ನಾಡು ಗಜಾನನ ಯುವಕ ಸಂಘ ಖಂಡನೆ*
- *ಅಮಾಯಕರ ಮೇಲಿನ ಹಲ್ಲೆ ಖಂಡನೀಯ : ಮೂರ್ನಾಡು ಆಪ್ತಮಿತ್ರ ಬಳಗ ಅಸಮಾಧಾನ*
- *ವಿರಾಜಪೇಟೆ ಕೊಡವ ಪೊಮ್ಮಕ್ಕಡ ಒಕ್ಕೂಟದಿಂದ ಸಂಭ್ರಮದ ಪುತ್ತರಿ ಒತ್ತೋರ್ಮೆ ಕೂಟ*