ಮಡಿಕೇರಿ ಏ.19 NEWS DESK : ಕುಶಾಲನಗರ ತಾಲ್ಲೂಕಿನ ವಾಲ್ನೂರು ಗ್ರಾಮದಲ್ಲಿ ಗುರುವಾರ ರಾತ್ರಿ ಅಪಘಾತದಿಂದ ಬಿಜೆಪಿ ಕಾರ್ಯಕರ್ತ ರಾಮಪ್ಪ (68) ಅವರು ಮೃತಪಟ್ಟು, ಇಬ್ಬರು ಗಂಭೀರವಾಗಿ ಗಾಯಗೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದಿರುವುದಾಗಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ತಿಳಿಸಿದ್ದಾರೆ.
ಸುಂಟಿಕೊಪ್ಪ ಸಮೀಪದ ಕಂಬಿಬಾಣೆ ನಿವಾಸಿಗಳಾದ ವಾಹನದ ಮಾಲೀಕ ಮಹಮ್ಮದ್ ಹರ್ಷದ್ (26) ಹಾಗೂ ವಾಹನದ ಚಾಲಕ ಶೌಕತ್ ಅಲಿ (32) ಎಂಬುವವರನ್ನು ದಸ್ತಗಿರಿ ಮಾಡಲಾಗಿದೆ. ಇವರ ವಿರುದ್ಧ ಕಾನೂನು ಕ್ರಮ ಕೈಗೊಂಡು ತನಿಖೆಯನ್ನು ಮುಂದುವರೆಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.
ಎಸ್ಪಿ ಅವರ ಮಾರ್ಗದರ್ಶನದಲ್ಲಿ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಕೆ.ಎಸ್.ಸುಂದರ್ ರಾಜ್, ಮಡಿಕೇರಿ ವಿಭಾಗದ ಡಿವೈಎಸ್ಪಿ ಮಹೇಶ್ ಕುಮಾರ್ ಎಸ್, ಸೋಮವಾರಪೇಟೆ ಉಪವಿಭಾಗದ ಡಿವೈಎಸ್ಪಿ ಆರ್.ವಿ.ಗಂಗಾಧರಪ್ಪ, ಸಿದ್ದಾಪುರ ಪೊಲೀಸ್ ಠಾಣೆ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಕಾರ್ಯಾಚರಣೆ ನಡೆಸಿದರು.