
ಮಡಿಕೇರಿ ಏ.22 NEWS DESK : ಮಡಿಕೇರಿ ಬ್ಲಾಕ್ ಕಾಂಗ್ರೆಸ್‍ನ ಕಾರ್ಯದರ್ಶಿಯಾಗಿ ಹಂಚೆಟ್ಟಿರ ಮನು ಮುದ್ದಪ್ಪ ಹಾಗೂ ಖಜಾಂಚಿಯಾಗಿ ರೋಷನ್ ಕೊಂಬಾರನ ನೇಮಕಗೊಂಡಿದ್ದಾರೆ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹೆಚ್.ಎ.ಹಂಸ ತಿಳಿಸಿದ್ದಾರೆ.
ಮಡಿಕೇರಿ ಕ್ಷೇತ್ರದ ಶಾಸಕರಾದ ಡಾ.ಮಂತರ್ ಗೌಡ ಹಾಗೂ ಕೊಡಗು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಧರ್ಮಜ ಉತ್ತಪ್ಪ ಅವರ ಶಿಫಾರಸ್ಸಿನ ಮೇರೆಗೆ ಇವರಿಬ್ಬರನ್ನು ಆಯ್ಕೆ ಮಾಡಿರುವುದಾಗಿ ಪತ್ರಿಕಾ ಪ್ರಕಟಣೆ ನೀಡಿದ್ದಾರೆ.







