Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*
  • *ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*
  • *ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*
  • *ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*
  • *2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*
  • *ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*
  • *ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*
  • *ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*
  • *36 ವರ್ಷ ಸೇವೆ ಸಲ್ಲಿಸಿದ ಅಂಗನವಾಡಿ ಕಾರ್ಯಕರ್ತೆ ದೇವಮಾಜಿ, ಶಿಕ್ಷಕಿ ಭೋಜಮ್ಮಗೆ ಆತ್ಮೀಯ ಬೀಳ್ಕೊಡುಗೆ*
  • *ವಿರಾಜಪೇಟೆ : ಗಣೇಶ ವಿಸರ್ಜನೆ ಶೋಭಾಯಾತ್ರೆ ಸಂದರ್ಭ ವಿದ್ಯುತ್ ಅವಘಡ : ಐವರಿಗೆ ಗಾಯ : ಇಬ್ಬರ ಸ್ಥಿತಿ ಗಂಭೀರ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಮಡಿಕೇರಿಯಲ್ಲಿ ಕಾಂಗ್ರೆಸ್ ಸಮಾವೇಶ : ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಉಳಿಸಿಕೊಳ್ಳಲು ಲೋಕಸಭಾ ಚುನಾವಣೆ ಅಸ್ತ್ರವಾಗಿದೆ : ಸಮಾಜ ಕಲ್ಯಾಣ ಸಚಿವ ಡಾ.ಹೆಚ್.ಸಿ.ಮಹದೇವಪ್ಪ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಮಡಿಕೇರಿಯಲ್ಲಿ ಕಾಂಗ್ರೆಸ್ ಸಮಾವೇಶ : ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಉಳಿಸಿಕೊಳ್ಳಲು ಲೋಕಸಭಾ ಚುನಾವಣೆ ಅಸ್ತ್ರವಾಗಿದೆ : ಸಮಾಜ ಕಲ್ಯಾಣ ಸಚಿವ ಡಾ.ಹೆಚ್.ಸಿ.ಮಹದೇವಪ್ಪ*

ಏಪ್ರಿಲ್ 23, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಏ.23 NEWS DESK : ಸಂವಿಧಾನವನ್ನು ನಾಶ ಮಾಡುವ ಅಜೆಂಡಾ ಹೊಂದಿರುವ ಕೇಂದ್ರದ ಬಿಜೆಪಿ ನೇತೃತ್ವದ ಸರಕಾರವನ್ನು ಅಧಿಕಾರದಿಂದ ಹೊರಗಿಟ್ಟು ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಉಳಿಸಿಕೊಳ್ಳಲು ಈ ಬಾರಿಯ ಲೋಕಸಭಾ ಚುನಾವಣೆ ಅಸ್ತ್ರವಾಗಿದೆ ಎಂದು ರಾಜ್ಯದ ಸಮಾಜ ಕಲ್ಯಾಣ ಸಚಿವ ಡಾ. ಹೆಚ್.ಸಿ.ಮಹದೇವಪ್ಪ ತಿಳಿಸಿದ್ದಾರೆ.
ನಗರದ ಡಾ.ಅಂಬೇಡ್ಕರ್ ಭವನದಲ್ಲಿ ನಡೆದ ಕೊಡಗು ಜಿಲ್ಲಾ ಕಾಂಗ್ರೆಸ್ ಪರಿಶಿಷ್ಟ ಜಾತಿ ಸಮಾವೇಶವನ್ನು ಡಾ.ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಉದ್ಘಾಟಿಸಿ ಮಾತನಾಡಿದ ಅವರು, ‘ಮತ’ ಎಂದರೆ ಹಕ್ಕು ಮತ್ತು ಕರ್ತವ್ಯವಾಗಿದೆ. ಈ ರಾಷ್ಟ್ರದ ಪ್ರಜಾಪ್ರಭುತ್ವ ವ್ಯವಸ್ಥೆ ಹಾಗೂ ಸಂವಿಧಾನದ ಪರವಾಗಿರುವವರನ್ನು ಆಯ್ಕೆ ಮಾಡಿ ಎಂದು ಕರೆ ನೀಡಿದರು.
ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಈ ರಾಷ್ಟ್ರಕ್ಕೆ ನೀಡಿರುವ ಸಂವಿಧಾನಕ್ಕೆ ವಿರುದ್ಧವಾಗಿ 1947 ರಲ್ಲಿ ಜನಸಂಘ ತನ್ನದೇ ಆದ ‘ಜನ ಸಂಘಿ ಸಂವಿಧಾನ’ವನ್ನು ಮಾಡಿಕೊಂಡಿತ್ತು. ಆ ಮೂಲಕ ಈ ರಾಷ್ಟ್ರದಲ್ಲಿ ಧರ್ಮ ಸಂಸತ್ ಹೇರುವ ಪ್ರಯತ್ನಗಳನ್ನು ಮಾಡಲಾಗುತ್ತಿದೆ. ಕೇಂದ್ರದ ಬಿಜೆಪಿ ನೇತೃತ್ವದ ಸರ್ಕಾರದಿಂದ ಇದರ ಭಾಗವಾಗಿಯೇ “ಒಂದು ದೇಶ- ಒಂದು ಚುನಾವಣೆ” ಎನ್ನುವ ಸರ್ವಾಧಿಕಾರಿ ಧೋರಣೆ ಕಂಡು ಬರುತ್ತಿದೆ. ಇಂತಹ ಧೋರಣೆ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ನಾಶಗೊಳಿಸುತ್ತದೆ ಎಂದರು.
ಕಾಂಗ್ರೆಸ್ ಪಕ್ಷ ಎಂದಿಗೂ ಸಂವಿಧಾನದ ತಂಟೆಗೆ ಹೋಗಿಲ್ಲವೆಂದು ಸ್ಪಷ್ಟಪಡಿಸಿದ ಮಹದೇವಪ್ಪ, 1995ರಲ್ಲಿ ಪ್ರಧಾನಿಗಳಾಗಿದ್ದ ಅಟಲ್ ಬಿಹಾರಿ ವಾಜಪೇಯಿ ಅವರು ಸಂವಿಧಾನದ ಪರಾಮರ್ಷೆಗೆ ಮುಂದಾಗಿದ್ದರಾದರು, ಅಂದು ಅದನ್ನು ಆಗಗೊಡದಂತೆ ಕಾಂಗ್ರೆಸ್ ತೀವ್ರ ವಿರೋಧ ವ್ಯಕ್ತಪಡಿಸಿತ್ತೆಂದು ತಿಳಿಸಿದರು.
ಸಂವಿಧಾನ ಬದ್ಧವಾದ ಪ್ರಜಾಪ್ರಭುತ್ವ ಎಂದರೆ, ಸಮಾಜದಲ್ಲಿನ ಬಲ ಹೀನ ಸಮುದಾಯಗಳಿಗೆ ಬಲ ತುಂಬುವ ವ್ಯವಸ್ಥೆಯೇ ಆಗಿದೆ. ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಸಂವಿಧಾನ ರಚನೆಯ ಮೂಲಕ ರಾಷ್ಟ್ರದ ಎಲ್ಲಾ ಸಮೂಹಗಳಿಗೆ ಸರ್ವ ಸಮಾನವಾದ ಹಕ್ಕುಗಳೊಂದಿಗೆ, ಸಮ ಸಮಾಜದ ನಿರ್ಮಾಣಕ್ಕೆ ಪೂರಕವಾದ ಅಂಶಗಳನ್ನು ನೀಡಿದ್ದಾರೆ. ಇಂತಹ ವ್ಯವಸ್ಥೆಯನ್ನು ಹಾಳು ಗೆಡಹಿ ‘ಮನು ವಾದ’ವನ್ನು ಜಾರಿ ಮಾಡುವ ಯತ್ನ ಬಿಜೆಪಿಯಿಂದ ನಡೆಯುತ್ತಿದೆ. ಇದು ಜಾರಿಯಾದಲ್ಲಿ ದೇಶದ ಬಹುಸಂಖ್ಯಾತ ಶೋಷಿತ ಸಮುದಾಯಗಳು ಕೇವಲ ಶೇ.2.5 ರಷ್ಟಿರುವ ಬಲಾಢ್ಯ ಸಮೂಹಗಳ ಸೇವೆ ಮಾಡುವ ಪರಿಸ್ಥಿತಿ ನಿರ್ಮಾಣವಾಗುತ್ತದೆಂದು ಕಳವಳ ವ್ಯಕ್ತಪಡಿಸಿದರು.
ನೂರಾರು ವರ್ಷಗಳ ಕಾಲ ಮೊಘಲರು, ಬ್ರಿಟಿಷರಿಂದ ಆಳ್ವಿಕೆಗೆ ಒಳಗಾದರು ಈ ರಾಷ್ಟ್ರ ಭಾರತವಾಗಿಯೇ ಇದೆ, ತನ್ನತನವನ್ನು ಉಳಿಸಿಕೊಂಡಿದೆ. ಹೀಗಿದ್ದೂ ಬಿಜೆಪಿ ಹಿಂದೂ ರಾಷ್ಟ್ರ ನಿರ್ಮಾಣದ ಪರಿಕಲ್ಪನೆಯನ್ನು ಹೊಂದುವ ಮೂಲಕ ಸಂವಿಧಾನದ ಬದಲಾವಣೆಗೆ ಪಿತೂರಿ ನಡೆಸುತ್ತಿದೆಯೆಂದು ಜರೆದ ಮಹದೇವಪ್ಪ, ಬಿಜೆಪಿಗೆ ತನ್ನದೆ ಆದ ಜನಪರವಾದ ಯಾವುದೇ ಕಾರ್ಯಕ್ರಮಗಳಿಲ್ಲ, ರಾಜಕೀಯ ನೀತಿ ನಿಲುಮೆಗಳಿಲ್ಲ. ಕೇವಲ ಮೋದಿ, ಮೋದಿ ಎನ್ನುವುದು ಸರ್ವಾಧಿಕಾರಿ ಮನೋಭಾವನೆ. ಇಂತಹ ಸರ್ವಾಧಿಕಾರಿ ಮನೋಭಾವ ಸಂವಿಧಾನದ ಆಶಯಗಳನ್ನು ನಾಶ ಮಾಡಬಹುದೆಂದು ಆತಂಕ ವ್ಯಕ್ತಪಡಿಸಿದರು.
ಕೆಪಿಸಿಸಿ ಸದಸ್ಯರು ಹಾಗೂ ಮಡಿಕೇರಿ ನಗರಸಭಾ ಮಾಜಿ ಅಧ್ಯಕ್ಷ ಹೆಚ್.ಎಂ.ನಂದಕುಮಾರ್ ಮಾತನಾಡಿ, ಸಂವಿಧಾನ ಬದಲಾವಣೆಯ ಚಿಂತನೆಯ ಹಿನ್ನೆಲೆಯಲ್ಲಿ ಬಿಜೆಪಿ ಪಕ್ಷವು ಈ ಬಾರಿ 370 ಸ್ಥಾನಗಳ ಪಡೆಯುವ ಗುರಿಯನ್ನು ಹೊಂದಿದೆ. ಸಂವಿಧಾನದ ಬದಲಾವಣೆಯಿಂದ ಪ್ರಜಾಪ್ರಭುತ್ವ ವ್ಯವಸ್ಥೆ ನಾಶವಾಗಿ, ಸಮಾನತೆ ಮಾಯವಾಗಿ ಗುಲಾಮಗಿರಿ ಉಂಟಾಗುತ್ತದೆ. ಈ ಹಿನ್ನೆಲೆಯಲ್ಲಿ ಸಂವಿಧಾನದ ರಕ್ಷಣೆಗೆ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸುವAತೆ ಮನವಿ ಮಾಡಿದರು.
ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಧರ್ಮಜ ಉತ್ತಪ್ಪ, ಮಾಜಿ ಎಂಎಲ್‌ಸಿ ವೀಣಾ ಅಚ್ಚಯ್ಯ. ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಪಿ.ಚಂದ್ರಕಲಾ, ಪ್ರಚಾರ ಸಮಿತಿ ಅಧ್ಯಕ್ಷ ಟಿ.ಪಿ.ರಮೇಶ್, ಜಿಲ್ಲಾ ಕಾಂಗ್ರೆಸ್ ಮಾಜಿ ಅಧ್ಯಕ್ಷರಾದ ಕೆ.ಕೆ.ಮಂಜುನಾಥ್ ಕುಮಾರ್, ಜಿ.ಪಂ ಮಾಜಿ ಅಧ್ಯಕ್ಷರಾದ ಪಾಪು ಸಣ್ಣಯ್ಯ, ಪಕ್ಷದ ಪ್ರಮುಖರಾದ ವಿ.ಪಿ.ಶಶಿಧರ್, ರಾಜೇಶ್ ಯಲ್ಲಪ್ಪ, ಸುರಯ್ಯ ಅಬ್ರಾರ್, ಕೆ.ಎಂ.ಲೋಕೇಶ್, ಹೆಚ್.ಎ.ಹಂಸ, ಕೆ.ಎ.ಯಾಕುಬ್, ಮಂಜುನಾಥ್ ಗುಂಡೂರಾವ್, ಸೂರಜ್ ಹೊಸೂರು, ತೆನ್ನಿರ ಮೈನಾ, ಕಾನೆಹಿತ್ಲು ಮೊಣ್ಣಪ್ಪ, ಕೆ.ಈ.ಸುರೇಶ್, ಮುತ್ತುರಾಜ್, ಪಾಲಾಕ್ಷ ಜೋಸೆಫ್ ಮೊದಲಾದವರಿದ್ದರು.

Follow us Follow us
Share. WhatsApp Facebook Twitter Email Telegram Copy Link

Related Posts

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*

ಸೆಪ್ಟೆಂಬರ್ 26, 2026

*ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*

ಸೆಪ್ಟೆಂಬರ್ 26, 2026

*ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*

ಸೆಪ್ಟೆಂಬರ್ 26, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿರಾಜಪೇಟೆ, NEWS DESK ಸೆ.26: ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಸ್ಕೃತಿ ಮತ್ತು ಸಾಹಿತ್ಯ ಪರಿಷತ್ತು (ಬೆಂಗಳೂರು) ವತಿಯಿಂದ ದಾವಣಗೆರೆಯಲ್ಲಿ…

*ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*

ಸೆಪ್ಟೆಂಬರ್ 26, 2026

*ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*

ಸೆಪ್ಟೆಂಬರ್ 26, 2026

*2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*

ಸೆಪ್ಟೆಂಬರ್ 26, 2026

*ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*

ಸೆಪ್ಟೆಂಬರ್ 26, 2026

*ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*

ಸೆಪ್ಟೆಂಬರ್ 26, 2026

*ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*

ಸೆಪ್ಟೆಂಬರ್ 26, 2026

*36 ವರ್ಷ ಸೇವೆ ಸಲ್ಲಿಸಿದ ಅಂಗನವಾಡಿ ಕಾರ್ಯಕರ್ತೆ ದೇವಮಾಜಿ, ಶಿಕ್ಷಕಿ ಭೋಜಮ್ಮಗೆ ಆತ್ಮೀಯ ಬೀಳ್ಕೊಡುಗೆ*

ಸೆಪ್ಟೆಂಬರ್ 26, 2026

*ವಿರಾಜಪೇಟೆ : ಗಣೇಶ ವಿಸರ್ಜನೆ ಶೋಭಾಯಾತ್ರೆ ಸಂದರ್ಭ ವಿದ್ಯುತ್ ಅವಘಡ : ಐವರಿಗೆ ಗಾಯ : ಇಬ್ಬರ ಸ್ಥಿತಿ ಗಂಭೀರ*

ಸೆಪ್ಟೆಂಬರ್ 26, 2026

*ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕೊಡಗಿನಲ್ಲಿ ಜನಜಾಗೃತಿ : 50 ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ವಾಹನ ಜಾಥಾ*

ಸೆಪ್ಟೆಂಬರ್ 25, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.