
ಸುಂಟಿಕೊಪ್ಪ ಏ.24 NEWS DESK : ಕೊಡಗರಹಳ್ಳಿ ಮಾರುತಿ ನಗರದ ಶ್ರೀ ಆಂಜನೇಯ ಸ್ವಾಮಿ ದೇವಾಲಯದ ವಾರ್ಷಿಕೋತ್ಸವ ಹಾಗೂ ಹನುಮಾನ್ ಜಯಂತಿ ಶ್ರದ್ಧಾಭಕ್ತಿಯಿಂದ ನಡೆಯಿತು.
ಮುಂಜಾನೆ ಪುಣ್ಯಾಹ ಗಣಪತಿ ಹೋಮ, ನವಕಲಶ ಪೂಜೆ, ಕಲಶಾಭಿಷೇಕ, ಮಂತ್ರಾಕ್ಷತೆ, ಮಹಾಪೂಜೆ ಹಾಗೂ ಮಹಾ ಮಂಗಳಾರತಿ ನಡೆಯಿತು. ನಂತರ ತೀರ್ಥ ಪ್ರಸಾದ ವಿತರಿಸಲಾಯಿತು.
ದಿನದ ವಿಶೇಷ ಪೂಜಾ ಕೈಕರ್ಯಗಳನ್ನು ದೇವಾಲಯದ ಆರ್ಚಕರಾದ ನರಸಿಂಹ ಭಟ್ ಹಾಗೂ ಗಣೇಶ್ ಶರ್ಮಾ ನೇರವೇರಿಸಿದರು.
ವಿವಿಧೆಡೆಯಿಂದ ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು. ನೆರೆದಿದ್ದ ಭಕ್ತಾಧಿಗಳಿಗೆ ಅನ್ನಸಂತರ್ಪಣೆ ನೆರವೇರಿತು.









