
ಮಡಿಕೇರಿ ಏ.24 NEWS DESK : ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಮಡಿಕೇರಿ, ಕುಶಾಲನಗರ ಸೇರಿದಂತೆ ಕೊಡಗಿನ ವಿವಿಧೆಡೆ ಪೊಲೀಸ್ ಇಲಾಖೆ ವತಿಯಿಂದ ಪಥಸಂಚಲನ ನಡೆಯಿತು.
ಮಡಿಕೇರಿ ನನಗರದ ಜನರಲ್ ತಿಮ್ಮಯ್ಯ ವೃತ್ತದಿಂದ ಪೊಲೀಸ್ ಉಪವಿಭಾಗ, ಜಿಲ್ಲಾ ಶಸಸ್ತ್ರ ದಳ(ಡಿ.ಎ.ಆರ್) ಗುಜರಾತ್ ರಿಸರ್ವ್ ಫೋರ್ಸ್ ಸಿಬ್ಬಂದಿಗಳು ಶಸ್ತ್ರಸಜ್ಜಿತರಾಗಿ ನಗರದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಿ ಜನರಲ್ಲಿ ಸ್ಥೈರ್ಯ ತುಂಬಿದರು.
ಈ ಸಂದರ್ಭ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸುಂದರ್ ರಾಜ್, ಮಡಿಕೇರಿ ಡಿ.ವೈ.ಎಸ್.ಪಿ.ಮಹೇಶ್, ನಗರ ವೃತ್ತ ನಿರೀಕ್ಷಕ ಪಿ.ಕೆ.ರಾಜು, ಮಹಿಳಾ ಪೊಲೀಸ್ ಠಾಣೆ ಇನ್ಸ್‍ಪೆಕ್ಟರ್ ಮಂಜು, ಸೆನ್ ಸ್ಟೇಷನ್ ಇನ್ಸ್‍ಪೆಕ್ಟರ್ ಶ್ರೀಕಾಂತ್, ಗ್ರಾಮಾಂತರ ಪೊಲೀಸ್ ನಿರೀಕ್ಷಕ ಉಮೇಶ್ ಉಪ್ಪಳಿಕೆ, ಡಿಎಆರ್ ಇನ್ಸ್‍ಪೆಕ್ಟರ್ ಚನ್ನನಾಯಕ ಸೇರಿದಂತೆ ಇನ್ನಿತರರು ಹಾಜರಿದ್ದರು.
ಕುಶಾಲನಗರ ಬೈಚನಹಳ್ಳಿ ಪೆಟ್ರೋಲ್ ಬಂಕ್ ಬಳಿಯಿಂದ ಹೊರಟ ಪಥ ಸಂಚಲನಕ್ಕೆ ಕೊಡಗು ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸುಂದರ್‍ರಾಜ್ ಚಾಲನೆ ನೀಡಿದರು.
ಸೋಮವಾರಪೇಟೆ ಪೊಲೀಸ್ ಉಪವಿಭಾಗದ ಡಿವೈಎಸ್‍ಪಿ ಆರ್.ವಿ.ಗಂಗಾಧರಪ್ಪ ನೇತೃತ್ವದಲ್ಲಿ ಏಳು ಮಂದಿ ಇನ್ಸ್‍ಪೆಕ್ಟರ್‍ಗಳು, ಉಪ ನಿರೀಕ್ಷಕರುಗಳು, ಸಿಬ್ಬಂದಿ, ಜಿಲ್ಲಾ ಮೀಸಲು ಪಡೆಯ ಸಿಬ್ಬಂದಿಗಳು ಮತ್ತು ಗುಜರಾತ್ ರಾಜ್ಯದ ವಿಶೇಷ ಭದ್ರತಾ ಪಡೆಯ ಹಿರಿಯ ಅಧಿಕಾರಿಗಳು, ಯೋಧರು ಸೇರಿದಂತೆ ಸುಮಾರು 300ಕ್ಕೂ ಅಧಿಕ ಮಂದಿ ಕುಶಾಲನಗರ ಪಟ್ಟದ ಮುಖ್ಯ ರಸ್ತೆ ಹಾಗೂ ವಿವಿಧ ಬಡಾವಣೆಗಳಲ್ಲಿ ಪಥ ಸಂಚಲನ ನಡೆಸಿದರು.








