

ಮಡಿಕೇರಿ ಏ.24 NEWS DESK : ಮತದಾನ ನಮ್ಮ ಹಕ್ಕು, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾನ ಅತ್ಯಂತ ಪ್ರಮುಖ ಅಂಶವಾಗಿದೆ. ಆದ್ದರಿಂದ ಏ.26 ರಂದು ಪ್ರತಿಯೊಬ್ಬರೂ ತಪ್ಪದೆ ಮತ ಚಲಾಯಿಸುವ ಮೂಲಕ ತಮ್ಮ ತಮ್ಮ ಕರ್ತವ್ಯವನ್ನು ನಿಭಾಯಿಸಬೇಕೆಂದು ಮದನೀಸ್ ಅಸೋಸಿಯೇಷನ್ ನ ಕೊಡಗು ಜಿಲ್ಲಾಧ್ಯಕ್ಷ ಹಮೀದ್ ಮದನಿ ಮನವಿ ಮಾಡಿದ್ದಾರೆ.
ಪತ್ರಿಕಾ ಪ್ರಕಟಣೆ ನೀಡಿರುವ ಅವರು ಪರಂಪರಾಗತ ಜಾತ್ಯಾತೀತ, ಸೌಹಾರ್ಧಯುತ ಭಾರತವೇ ನಮ್ಮ ಗುರಿ. ಜಾತ್ಯಾತೀತ ಮನೋಭಾವವುಳ್ಳ ಪಕ್ಷಗಳನ್ನು ಮತ್ತು ವ್ಯಕ್ತಿಗಳನ್ನು ಆಯ್ಕೆ ಮಾಡುವ ಮೂಲಕ ಉತ್ತಮ ಆಡಳಿತವನ್ನು ಅಸ್ತಿತ್ವಕ್ಕೆ ತರುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆೆ. ಆದ್ದರಿಂದ ಚುನಾವಣಾ ದಿನದಂದು ಎಲ್ಲಾ ಕಾರ್ಯಗಳನ್ನು ಬದಿಗಿಟ್ಟು ಮತದಾನ ಮಾಡಲು ಪ್ರತಿಜ್ಞಾಬದ್ಧರಾಗಬೇಕು ಎಂದು ತಿಳಿಸಿದ್ದಾರೆ.








