Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಹಾತೂರಿನಲ್ಲಿ ಹೊಲಿಗೆ ತರಬೇತಿ ಕಾರ್ಯಕ್ರಮದ ಸಮಾರೋಪ : ಪ್ರಮಾಣಪತ್ರ ವಿತರಣೆ* 
  • *ಶೈಕ್ಷಣಿಕ ಹಾಗೂ ವೈದ್ಯಕೀಯ ಕ್ಷೇತ್ರದಲ್ಲಿ ಕ್ರೈಸ್ತ ಮಿಷನರಿಗಳ ಕೊಡುಗೆ ಅಪಾರ : ಅರುಣ್ ಮಾಚಯ್ಯ*
  • *ಪೊನ್ನಂಪೇಟೆ ಮತ್ತು ಶ್ರೀಮಂಗಲ : ಮಾ.26 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ*
  • *ಮಾ.27 ರಂದು ಕೂಡಿಗೆಯಲ್ಲಿ ವೃತ್ತಿ ಶಿಕ್ಷಣ ಪ್ರದರ್ಶನ, ವೃತ್ತಿ ಮಾರ್ಗದರ್ಶನ*
  • *ಏ.7 ರಿಂದ 30 ರವರೆಗೆ ಬೇಸಿಗೆ ತರಬೇತಿ ಶಿಬಿರ*
  • *ಮಡಿಕೇರಿಯಲ್ಲಿ ದೇವರ ದಾಸಿಮಯ್ಯ ಜಯಂತಿ :  ಕೈಮಗ್ಗ ಉತ್ಪನ್ನಗಳಿಗೆ ಮಾರುಕಟ್ಟೆ ಕಲ್ಪಿಸಿ : ಟಿ.ಕೆ.ಪಾಂಡುರಂಗ*
  • *ಕೊಡಗು ಪ್ರೆಸ್ ಕ್ಲಬ್ ಕ್ರಿಕೆಟ್ ಪ್ರೀಮಿಯರ್ ಲೀಗ್-4 : ಮೀಡಿಯಾ ಚಾಲೆಂಜರ್ಸ್ ತಂಡ ಚಾಂಪಿಯನ್*
  • *ಕೆ.ಜಿ.ಬೋಪಯ್ಯರಿಂದ ಅನೇಕ ಅಭಿವೃದ್ಧಿ ಕಾರ್ಯಗಳು ನಡೆದಿದೆ : ಕಾಂಗ್ರೆಸ್ಸಿಗರು ಅಪಪ್ರಚಾರದಲ್ಲಿ ತೊಡಗಿದ್ದಾರೆ : ಪರಮೇಶ್ವರ್ ಅಸಮಾಧಾನ*
  • *ಸುಂಟಿಕೊಪ್ಪದಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ಶ್ರೀ ಚಾಮುಂಡೇಶ್ವರಿ, ಶ್ರೀಮುತ್ತಪ್ಪ ಮತ್ತು ಪರಿವಾರ ದೇವರುಗಳ ತೆರೆ ಮಹೋತ್ಸವ*
  • *ಕಾಸ್ಮೋಪಾಲಿಟನ್ ಕ್ಲಬ್ ಅಧ್ಯಕ್ಷರಾಗಿ ರತನ್ ತಮ್ಮಯ್ಯ ಆಯ್ಕೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕುಂಡ್ಯೋಳಂಡ ಹಾಕಿ ಕಾರ್ನಿವಲ್ 2024 : ಏ.28 ರಂದು ಅಂತಿಮ ಪಂದ್ಯಾಟ ಮತ್ತು ಸಮಾರೋಪ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕುಂಡ್ಯೋಳಂಡ ಹಾಕಿ ಕಾರ್ನಿವಲ್ 2024 : ಏ.28 ರಂದು ಅಂತಿಮ ಪಂದ್ಯಾಟ ಮತ್ತು ಸಮಾರೋಪ*

ಏಪ್ರಿಲ್ 25, 20244 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಏ.25  NEWS DESK : ಕೊಡವ ಕುಟುಂಬಗಳ ನಡುವಿನ 24ನೇ ಹಾಕಿ ಹಬ್ಬ ಪ್ರತಿಷ್ಠಿತ “ಕುಂಡ್ಯೋಳಂಡ ಹಾಕಿ ಕಾರ್ನಿವಲ್ 2024” ರ ಅಂತಿಮ ಪಂದ್ಯಾಟ ಮತ್ತು ಸಮಾರೋಪ ಸಮಾರಂಭ ಏ.28 ರಂದು ನಾಪೋಕ್ಲುವಿನ ಕೆಪಿಎಸ್ ಶಾಲೆಯ ಜನರಲ್ ತಿಮ್ಮಯ್ಯ ಕ್ರೀಡಾಂಗಣದಲ್ಲಿ ನಡೆಯಲಿದೆ ಎ ಕ್ರೀಡಾಕೂಟದ ಸಂಚಾಲಕ ಕುಂಡ್ಯೋಳಂಡ ದಿನೇಶ್ ಕಾರ್ಯಪ್ಪ ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಹಾಕಿ ಹಬ್ಬದ ಕೊನೆಯ ಎರಡು ದಿನಗಳ ಕಾರ್ಯಕ್ರಮದ ಕುರಿತು ಮಾಹಿತಿ ನೀಡಿದರು.
ಕುಂಡ್ಯೋಳಂಡ ಹಾಕಿ ಕಾರ್ನಿವಲ್ ಕೊಡವ ಕೌಟುಂಬಿಕ ಹಾಕಿ ಹಬ್ಬದ ಸೆಮಿಫೈನಲ್ ಪಂದ್ಯಾವಳಿ ಏ.27 ರಂದು ಶನಿವಾರ ಬೆಳಿಗ್ಗೆ 10.30 ಗಂಟೆಗೆ ನಡೆಯಲಿದೆ. ಸಭಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಕರ್ನಾಟಕ ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿ ಚೆಪ್ಪುಡಿರ ಮೊಣ್ಣಪ್ಪ ಪೂಣಚ್ಚ ಹಾಗೂ ಕೊಡವ ಹಾಕಿ ಅಕಾಡೆಮಿ ಅಧ್ಯಕ್ಷ ಪಾಂಡಂಡ ಕೆ.ಬೋಪಣ್ಣ ಪಾಲ್ಗೊಳ್ಳಲಿದ್ದಾರೆ. ಏ.27 ರ ಶನಿವಾರ ಬೆಳಗ್ಗೆ 7 ಗಂಟೆಗೆ ಕಕ್ಕಬ್ಬೆಯಿಂದ ನಾಪೋಕ್ಲುವರೆಗೆ ಕೊಡವ ಕುಟುಂಬಗಳ ನಡುವೆ 2.50 * 4 ಕಿ.ಮೀ ದೂರದ ಓಟದ ಸ್ಪರ್ಧೆ “ಫ್ಯಾಮಿಲಿ ರಿಲೇ” ನಡೆಯಲಿದೆ. ಒಂದು ಕುಟುಂಬ ತಂಡದಲ್ಲಿ ಓರ್ವ ಮಹಿಳೆ ಸೇರಿ ನಾಲ್ವರು ಪಾಲ್ಗೊಳ್ಳಬಹುದಾಗಿದೆ. ವಿಜೇತರಿಗೆ ಮೊದಲ ಬಹುಮಾನ ರೂ.50 ಸಾವಿರ, ದ್ವಿತೀಯ ಬಹುಮಾನ 30 ಸಾವಿರ ಹಾಗೂ ತೃತೀಯ 20 ಸಾವಿರ ರೂ. ನೀಡಲಾಗುವುದು. ಸ್ಪರ್ಧಿಗಳು ಅಂದು ಬೆಳಗ್ಗೆ 6 ಗಂಟೆಗೆ ನಾಪೋಕ್ಲುವಿನ ಜನರಲ್ ತಿಮ್ಮಯ್ಯ ಕ್ರೀಡಾಂಗಣದಲ್ಲಿ ಹಾಜರಿರಬೇಕು. ನೋಂದಣಿಗೆ ಏ.26 ಬೆಳಗ್ಗೆ 11 ಗಂಟೆಯವರೆಗೆ ಕಾಲಾವಕಾಶವಿದ್ದು, ಸ್ಪರ್ಧಿಗಳು ಮೊ.ಸಂಖ್ಯೆ 91489 30760 ನ್ನು ಸಂಪರ್ಕಿಸಬಹುದಾಗಿದೆ ಎಂದರು.
“ದೊಡ್ಡ ಮೀಸೆ ಮತ್ತು ಉದ್ದ ಜಡೆಯ ಪ್ರದರ್ಶನ”ದ ಸ್ಪರ್ಧೆಯನ್ನು ಕೂಡ ಆಯೋಜಿಸಲಾಗಿದ್ದು, ಸ್ಪರ್ಧಿಗಳು ಮೊ.ಸಂಖ್ಯೆ 94488 39988 ನ್ನು ಸಂಪರ್ಕಿಸಬಹುದಾಗಿದೆ ಎಂದು ಹಾಕಿ ಹಬ್ಬದ ಸಂಚಾಲಕ ಕುಂಡ್ಯೋಳಂಡ ದಿನೇಶ್ ಕಾರ್ಯಪ್ಪ ತಿಳಿಸಿದ್ದಾರೆ.
ಏ.28 ರಂದು ಭಾನುವಾರ ಬೆಳಿಗ್ಗೆ 10.30 ಗಂಟೆಗೆ ಅಂತಿಮ ಪಂದ್ಯಾವಳಿಯ ಸಭಾ ಕಾರ್ಯಕ್ರಮ ನಡೆಯಲಿದ್ದು, ಮುಖ್ಯ ಅತಿಥಿಗಳಾಗಿ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಅಜ್ಜಿಕುಟ್ಟೀರ ಎಸ್.ಪೊನ್ನಣ್ಣ ಪಾಲ್ಗೊಳ್ಳಲಿದ್ದು, ಕೊಡವ ಹಾಕಿ ಅಕಾಡೆಮಿಯ ಅಧ್ಯಕ್ಷ ಪಾಂಡಂಡ ಕೆ.ಬೋಪಣ್ಣ ಉಪಸ್ಥಿತರಿರುವರು.
ಅತಿಥಿಗಳಾಗಿ ಸಂಸದ ಪ್ರತಾಪ್ ಸಿಂಹ, ಐಆರ್‍ಎಸ್ ಜಾರಿ ನಿರ್ದೇಶನಾಲಯದ ಉಪ ನಿರ್ದೇಶಕ ಡಾ.ಕೊಟ್ಟಂಗಡ ಪೆಮ್ಮಯ್ಯ, ಹೈದರಾಬಾದ್ ವಿದೇಶಿ ತನಿಖಾ ಘಟಕದ ಉಪ ನಿರ್ದೇಶಕ ಮುಕ್ಕಾಟಿರ ಪುನಿತ್ ಕುಟ್ಟಯ್ಯ, ನಾರಾಯಣ ಆರೋಗ್ಯ ಸಮೂಹದ ಮುಖ್ಯ ವೈದ್ಯಕೀಯ ನಿರ್ದೇಶಕ ಡಾ.ಪುಚ್ಚಿಮಾಡ ಎಂ.ಉತ್ತಪ್ಪ (ಸಂತೋಷ್), ಸಿ.ಸಿ.ಇಂಡಿಯಾ ಪ್ರವೈಟ್ ಲಿ. ವ್ಯವಸ್ಥಾಪಕ ನಿರ್ದೇಶಕರ ಕೊಡಂಗಡ ರವಿ ಕರುಂಬಯ್ಯ, ಪಾಂಡಂಡ ಲೀಲಾ ಕುಟ್ಟಪ್ಪ, ಒಲಂಪಿಯನ್ ಡಾ.ಅಂಜಪರವಂಡ ಬಿ.ಸುಬ್ಬಯ್ಯ, ರಿಪಬ್ಲಿಕ್ ನೆಟ್‍ವರ್ಕ್‍ನ ಅಧ್ಯಕ್ಷ ಹಾಗೂ ಅಂತರಾಷ್ಟ್ರೀಯ ಉದ್ಯಮಿ ಚೇರಂಡ ಕಿಶನ್, ದೀಪಕ್ ಚೋಪ್ರಾ ಫೌಂಡೇಶನ್ ಸಿಇಒ ಬಲ್ಯತಂಡ ಪೂಣಚ್ಚ ಮಾಚಯ್ಯ, ಕೊಡವ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಅಜ್ಜಿಕಂಡ ಮಹೇಶ್ ನಾಚಯ್ಯ, ಕೊಡವ ಸಮಾಜಗಳ ಒಕ್ಕೂಟದ ಅಧ್ಯಕ್ಷ ಕಳ್ಳಿಚಂಡ ವಿಷ್ಣು ಕಾರ್ಯಪ್ಪ, ಜಿಲ್ಲಾಧಿಕಾರಿ ವೆಂಕಟ್ ರಾಜಾ, ಪೋಲಿಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಇಬ್ನಿ ಕೂರ್ಗ್ ವ್ಯವಸ್ಥಾಪಕ ನಿರ್ದೇಶಕ ಕ್ಯಾಪ್ಟನ್ ಸಬಾಸ್ಟಿಯನ್, ಮಾರುತಿ ಸುಜುಕಿ ಇಂಡಿಯಾ ಲಿಮಿಟೆಡ್ ನ ಪ್ರಧಾನ ವ್ಯವಸ್ಥಾಪಕ ಪೀಟರ್, ನಾಪೋಕ್ಲು ಗ್ರಾ.ಪಂ ಉಪಾಧ್ಯಕ್ಷರಾದ ಕುಲ್ಲೇಟ್ಟಿರ ಹೇಮಾವತಿ ಅರುಣ್ ಬೇಬಾ, ಟಾಟಾ ಕಾಫಿ ವ್ಯವಸ್ಥಾಪಕ ನಿರ್ದೇಶಕ ಪಿ.ಎ.ಮಂದಣ್ಣ, ನಾಪೋಕ್ಲು ಕೆಪಿಎಸ್ ಸ್ಕೂಲ್‍ನ ಪ್ರಾಂಶುಪಾಲೆ ಮೇದುರ ವಿಶಾಲ ಕುಶಾಲಪ್ಪ, ಉಪ ಪ್ರಾಂಶುಪಾಲೆ ಎಂ.ಎಸ್.ಶಿವಣ್ಣ, ಕ್ರೀಡಾ ಇಲಾಖೆಯ ಉಪ ನಿರ್ದೇಶಕರಾದ ವಿ.ಟಿ.ವಿಸ್ಮಯಿ ಚಕ್ರವರ್ತಿ ಪಾಲ್ಗೊಳ್ಳಲಿದ್ದಾರೆ.
ಅತಿಥಿಗಳಾಗಿ ಆರ್.ವಿ.ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಡಾ.ಎಂ.ಪಿ.ಶ್ಯಾಮ್, ಆರ್.ವಿ.ವಿಶ್ವವಿದ್ಯಾನಿಲಯದ ಉಪಕುಲಪತಿ ಪ್ರೊ.ಡಿ.ಪಿ.ನಾಗರಾಜ್, ಕಾಮಾಕ್ಷಿ ಆಸ್ಪತ್ರೆಯ ಮುಖ್ಯಸ್ಥ ಮಹೇಶ್ ಶೆಣೈ, ಉದ್ಯಮಿ ಕಂಬೆಯಂಡ ಶ್ಯಾಮ್ ಭಾಗವಹಿಸಲಿದ್ದಾರೆ.
ಸಭಾ ಕಾರ್ಯಕ್ರಮದ ನಂತರ ಅಂತಿಮ ಪಂದ್ಯಾಟ ನಡೆಯಲಿದೆ. ಅಂತಿಮ ಪಂದ್ಯಾಟವನ್ನು ಸುಮಾರು 50 ಸಾವಿರ ಕ್ರೀಡಾಭಿಮಾನಿಗಳು ವೀಕ್ಷಿಸುವ ನಿರೀಕ್ಷೆ ಇದೆ ಎಂದರು.
::: ರೂ. 4ಲಕ್ಷ ಬಹುಮಾನ :::
ಕುಂಡ್ಯೋಳಂಡ ಹಾಕಿ ಹಬ್ಬದ ವಿಜೇತ ತಂಡಕ್ಕೆ ರೂ.4ಲಕ್ಷ, ದ್ವಿತೀಯ 3ಲಕ್ಷ, ತೃತೀಯ 2ಲಕ್ಷ ಮತ್ತು ನಾಲ್ಕನೇ ಸ್ಥಾನದ ತಂಡಕ್ಕೆ ರೂ.1 ಲಕ್ಷ ನಗದು, ಆಕರ್ಷಕ ಟ್ರೋಫಿ ಹಾಗೂ ವೈಯುಕ್ತಿಕ ಬಹುಮಾನಗಳನ್ನು ನೀಡಲಾಗುವುದು. ತುಳಸಿ ಜ್ಯುವೆಲ್ಲರ್ಸ್‍ನ ಪ್ರಾಯೋಜಕತ್ವದಲ್ಲಿ 3ಅಡಿ ಎತ್ತರದ ವಿಶಿಷ್ಟವಾದ ಟ್ರೋಫಿಯನ್ನು ಸಿದ್ಧಪಡಿಸಲಾಗಿದ್ದು, ಮೊದಲ ಮೂರು ತಂಡಗಳಿಗೆ ಪ್ರದಾನ ಮಾಡಲಾಗುವುದು. ಪ್ರಥಮ ಟ್ರೋಫಿ ಚಿನ್ನದ ಲೇಪನ, ದ್ವಿತೀಯ ಬೆಳ್ಳಿಯ ಲೇಪನ ಹಾಗೂ ತೃತೀಯ ಟ್ರೋಫಿ ಕಂಚಿನ ಲೇಪನ ಹೊಂದಿರುತ್ತದೆ. ಇವಿ ಸ್ಕೂಟರ್ ಸೇರಿದಂತೆ ಸುಮಾರು 14 ಆಕರ್ಷಕ ಬಹುಮಾನಗಳನ್ನು ನೀಡಲಾಗುವುದು ಎಂದು ದಿನೇಶ್ ಕಾರ್ಯಪ್ಪ ತಿಳಿಸಿದರು.
::: ಸಾಂಸ್ಕೃತಿಕ ಕಾರ್ಯಕ್ರಮ :::
ಅಂದು ಸಂಜೆ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಫ್ಯಾಶನ್ ಶೋ, ಕಾನ್ಸರ್ಟ್ ಕಲಾವಿದರಾದ ಸ್ವರ:, ಗುಬ್ಬಿ ಹಾಗೂ ಕೊಡಗಿನ ಕಲಾವಿದರುಗಳಿಂದ ವೈವಿಧ್ಯಮಯ ಕಾರ್ಯಕ್ರಮಗಳು ನಡೆಯಲಿವೆ.
::: ಏ.27 ರಂದು ಸೆಮಿ ಫೈನಲ್ :::
ಏ.27 ರಂದು ಶನಿವಾರ ಬೆಳಿಗ್ಗೆ 10.30 ಗಂಟೆಗೆ ನಡೆಯುವ ಸೆಮಿ ಫೈನಲ್ ಪಂದ್ಯಾವಳಿಯ ಸಭಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಕರ್ನಾಟಕ ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿ ಚೆಪ್ಪುಡಿರ ಮೊಣ್ಣಪ್ಪ ಪೂಣಚ್ಚ ಹಾಗೂ ಕೊಡವ ಹಾಕಿ ಅಕಾಡೆಮಿ ಅಧ್ಯಕ್ಷ ಪಾಂಡಂಡ ಕೆ.ಬೋಪಣ್ಣ ಪಾಲ್ಗೊಳ್ಳಲಿದ್ದಾರೆ.
ಎರಡನೇ ಪಂದ್ಯದ ಅತಿಥಿಯಾಗಿ ಹಿರಿಯ ಹಾಕಿಪಟು ಡಾ.ಕಲಿಯಾಟಂಡ ಚಿಣ್ಣಪ್ಪ, ಮಾಜಿ ಸೈನಿಕರ ಸಂಘದ ಅಧ್ಯಕ್ಷ ಮೇ.ಜ.ಬಾಚಮಂಡ ಎ.ಕಾರ್ಯಪ್ಪ ಭಾಗವಹಿಸಲಿದ್ದಾರೆ.
::: ಸನ್ಮಾನ :::
ಕಾರ್ಯಕ್ರಮದಲ್ಲಿ ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಕೊಡವ ಕ್ರೀಡಾಪಟುಗಳು, ಪಂದ್ಯಾವಳಿಯಲ್ಲಿ ಕಾರ್ಯನಿರ್ವಹಿಸಿದ ಅಂಪೈರ್‍ಗಳು, ತಾಂತ್ರಿಕವರ್ಗ, ಪತ್ರಿಕಾ ಕ್ಷೇತ್ರದ ಕೊಡವ ಸಾಧಕರು ಹಾಗೂ ಸಹಕಾರ ನೀಡಿದ ಎಲ್ಲರನ್ನು ಅಭಿನಂದಿಸಿ ಗೌರವಿಸಲಾಗುವುದು.
ಏ.27 ಮತ್ತು 28 ರಂದು ಎರಡು ದಿನ ನಡೆಯುವ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕುಂಡ್ಯೋಳಂಡ ಕುಟುಂಬದ ಪಟ್ಟೆದಾರ ಕುಂಡ್ಯೋಳಂಡ ಎ.ನಾಣಯ್ಯ ವಹಿಸಲಿದ್ದಾರೆ.
::: ದಾಖಲೆಯ 360 ತಂಡಗಳು :::
24ನೇ ಹಾಕಿ ಹಬ್ಬವನ್ನು ಕುಂಡ್ಯೋಳಂಡ ಕುಟುಂಬದ ಸಾರಥ್ಯದಲ್ಲಿ ನಡೆಸಲಾಗಿದೆ. ಕೊಡವ ಹಾಕಿ ಅಕಾಡೆಮಿ, ಹಾಕಿ ಕೂರ್ಗ್, ಹಾಕಿ ಕರ್ನಾಟಕ ಹಾಗೂ ಸ್ಥಳೀಯ ಗ್ರಾಮಸ್ಥರು ಸಂಪೂರ್ಣ ಸಹಕಾರ ನೀಡಿದ್ದಾರೆ.
ಪಾಂಡಂಡ ಕುಟ್ಟಣ್ಣಿ ಹಾಗೂ ಅವರ ಸಹೋದರ ಕಾಶಿಯವರಿಂದ ಕೊಡವ ಹಾಕಿ ಉತ್ಸವ ಆರಂಭವಾಯಿತು. 1997 ರಲ್ಲಿ ಕರಡದಲ್ಲಿ ಪಾಂಡಂಡ ಕುಟುಂಬ ಮೊದಲ ಬಾರಿಗೆ ಆಯೋಜಿಸಿದ್ದ ಹಾಕಿಹಬ್ಬದಲ್ಲಿ 60 ತಂಡಗಳು ಪಾಲ್ಗೊಂಡಿದ್ದವು. ಈ ಬಾರಿಯ ಕುಂಡ್ಯೋಳಂಡ ಹಾಕಿ ಹಬ್ಬದಲ್ಲಿ 360 ತಂಡಗಳ ನೋಂದಣಿಯೊಂದಿಗೆ ಹೊಸ ದಾಖಲೆ ಸೃಷ್ಟಿಸುವ ಮೂಲಕ ಪ್ರತಿಷ್ಠಿತ ಕಪ್ ಗಾಗಿ ಸೆಣಸಾಟ ನಡೆದಿರುವುದು ವಿಶೇಷ. ಇದೇ ಮೊದಲ ಬಾರಿಗೆ “ಕುಂಡ್ಯೋಳಂಡ ಹಾಕಿ ಹಬ್ಬ” ಗಿನ್ನಿಸ್ ದಾಖಲೆಯ ಪುಟದಲ್ಲಿ ಸ್ಥಾನ ಪಡೆಯಲು ಅಧಿಕೃತ ಅನುಮತಿ ಪಡೆದಿದ್ದು, ಅಂತಿಮ ಪಂದ್ಯಾಟ ನಡೆಯುವ ಏ.28 ರಂದು ತೀರ್ಪುಗಾರರ ತಂಡ ಆಗಮಿಸಲಿದೆ.
ಕುಂಡ್ಯೋಳಂಡ ಕುಟುಂಬಸ್ಥರು ಹಾಗೂ ಕೊಡವ ಹಾಕಿ ಅಕಾಡೆಮಿ ಹಾಕಿ ಹಬ್ಬವನ್ನು ಯಶಸ್ವಿಯಾಗಿ ಆಯೋಜಿಸುವ ಮೂಲಕ ಸಮುದಾಯದ ಬಾಂಧವ್ಯವನ್ನು ಬೆಳೆಸುವ ಮತ್ತು ಕೊಡವ ಪರಂಪರೆಯನ್ನು ಸಂರಕ್ಷಿಸುವ ಕಾರ್ಯವನ್ನು ಮಾಡಿದೆ ಎಂದು ದಿನೇಶ್ ಕಾರ್ಯಪ್ಪ ಮಾಹಿತಿ ನೀಡಿದರು.
ಸುದ್ದಿಗೋಷ್ಠಿಯಲ್ಲಿ ಅಧ್ಯಕ್ಷ ಕುಂಡ್ಯೋಳಂಡ ರಮೇಶ್ ಮುದ್ದಯ್ಯ, ಖಜಾಂಚಿ ಕುಂಡ್ಯೋಳಂಡ ವಿಶು ಪೂವಯ್ಯ, ಸದಸ್ಯರುಗಳಾದ ಕುಂಡ್ಯೋಳಂಡ ಸುರೇಶ್ ಉತ್ತಪ್ಪ ಹಾಗೂ ಕುಂಡ್ಯೋಳಂಡ ಶಂಭು ಪೂಣಚ್ಚ ಉಪಸ್ಥಿತರಿದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಹಾತೂರಿನಲ್ಲಿ ಹೊಲಿಗೆ ತರಬೇತಿ ಕಾರ್ಯಕ್ರಮದ ಸಮಾರೋಪ : ಪ್ರಮಾಣಪತ್ರ ವಿತರಣೆ* 

ಮಾರ್ಚ್ 23, 2026

*ಶೈಕ್ಷಣಿಕ ಹಾಗೂ ವೈದ್ಯಕೀಯ ಕ್ಷೇತ್ರದಲ್ಲಿ ಕ್ರೈಸ್ತ ಮಿಷನರಿಗಳ ಕೊಡುಗೆ ಅಪಾರ : ಅರುಣ್ ಮಾಚಯ್ಯ*

ಮಾರ್ಚ್ 23, 2026

*ಪೊನ್ನಂಪೇಟೆ ಮತ್ತು ಶ್ರೀಮಂಗಲ : ಮಾ.26 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ*

ಮಾರ್ಚ್ 23, 2026

*ಶೈಕ್ಷಣಿಕ ಹಾಗೂ ವೈದ್ಯಕೀಯ ಕ್ಷೇತ್ರದಲ್ಲಿ ಕ್ರೈಸ್ತ ಮಿಷನರಿಗಳ ಕೊಡುಗೆ ಅಪಾರ : ಅರುಣ್ ಮಾಚಯ್ಯ*

ಮಾರ್ಚ್ 23, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿರಾಜಪೇಟೆ ಮಾ.23 NEWS DESK : ಕೊಡಗು ಕ್ರಿಶ್ಚಿಯನ್ ಅಸೋಸಿಯೇಷನ್ ಸಹಯೋಗದಲ್ಲಿ ಕೂರ್ಗ್ ಕ್ಲಿಫ್ ರೆಸಾರ್ಟ್‍ನಲ್ಲಿ ನಡೆದ ಕ್ಲಿಫ್ ಆಫ್…

*ಪೊನ್ನಂಪೇಟೆ ಮತ್ತು ಶ್ರೀಮಂಗಲ : ಮಾ.26 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ*

ಮಾರ್ಚ್ 23, 2026

*ಮಾ.27 ರಂದು ಕೂಡಿಗೆಯಲ್ಲಿ ವೃತ್ತಿ ಶಿಕ್ಷಣ ಪ್ರದರ್ಶನ, ವೃತ್ತಿ ಮಾರ್ಗದರ್ಶನ*

ಮಾರ್ಚ್ 23, 2026

*ಏ.7 ರಿಂದ 30 ರವರೆಗೆ ಬೇಸಿಗೆ ತರಬೇತಿ ಶಿಬಿರ*

ಮಾರ್ಚ್ 23, 2026

*ಮಡಿಕೇರಿಯಲ್ಲಿ ದೇವರ ದಾಸಿಮಯ್ಯ ಜಯಂತಿ :  ಕೈಮಗ್ಗ ಉತ್ಪನ್ನಗಳಿಗೆ ಮಾರುಕಟ್ಟೆ ಕಲ್ಪಿಸಿ : ಟಿ.ಕೆ.ಪಾಂಡುರಂಗ*

ಮಾರ್ಚ್ 23, 2026

*ಕೊಡಗು ಪ್ರೆಸ್ ಕ್ಲಬ್ ಕ್ರಿಕೆಟ್ ಪ್ರೀಮಿಯರ್ ಲೀಗ್-4 : ಮೀಡಿಯಾ ಚಾಲೆಂಜರ್ಸ್ ತಂಡ ಚಾಂಪಿಯನ್*

ಮಾರ್ಚ್ 23, 2026

*ಕೆ.ಜಿ.ಬೋಪಯ್ಯರಿಂದ ಅನೇಕ ಅಭಿವೃದ್ಧಿ ಕಾರ್ಯಗಳು ನಡೆದಿದೆ : ಕಾಂಗ್ರೆಸ್ಸಿಗರು ಅಪಪ್ರಚಾರದಲ್ಲಿ ತೊಡಗಿದ್ದಾರೆ : ಪರಮೇಶ್ವರ್ ಅಸಮಾಧಾನ*

ಮಾರ್ಚ್ 23, 2026

*ಸುಂಟಿಕೊಪ್ಪದಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ಶ್ರೀ ಚಾಮುಂಡೇಶ್ವರಿ, ಶ್ರೀಮುತ್ತಪ್ಪ ಮತ್ತು ಪರಿವಾರ ದೇವರುಗಳ ತೆರೆ ಮಹೋತ್ಸವ*

ಮಾರ್ಚ್ 23, 2026

*ಕಾಸ್ಮೋಪಾಲಿಟನ್ ಕ್ಲಬ್ ಅಧ್ಯಕ್ಷರಾಗಿ ರತನ್ ತಮ್ಮಯ್ಯ ಆಯ್ಕೆ*

ಮಾರ್ಚ್ 23, 2026

*ಅಡುಗೆ ಅನಿಲ ಬೆಲೆ ಏರಿಕೆ ವಿರೋಧಿಸಿ ಮಡಿಕೇರಿ ನಗರ ಕಾಂಗ್ರೆಸ್ ನಿಂದ ಪ್ರತಿಭಟನೆ*

ಮಾರ್ಚ್ 23, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.