ಮಡಿಕೇರಿ ಏ.26 NEWS DESK : ಲೋಕಸಭಾ ಚುನಾವಣೆಯು ಸುಳ್ಳು ಮತ್ತು ಸತ್ಯಗಳ ನಡುವೆ ನಡೆಯುತ್ತಿರುವ ಸಮರವಾಗಿದೆ. ರಾಜ್ಯ ಸರ್ಕಾರದ ಗ್ಯಾರಂಟಿಗಳು ಮತದಾರರಿಗೆ ವರದಾನವಾಗಿದ್ದು, ಕಾಂಗ್ರೆಸ್ ಅಭ್ಯರ್ಥಿ ಪರ ಮತದಾರರ ಒಲವು ಇದೆ ಎಂದು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಹೇಳಿದರು.
ಲೋಕಸಭಾ ಚುನಾವಣೆ ಸಂದರ್ಭ ವಿರಾಜಪೇಟೆ ನಗರದ ಭೂತ್ ಕೇಂದ್ರಗಳಿಗೆ ಭೇಟಿ ನೀಡಿ ಮತದಾನದ ಅವಲೋಕನ ಮಾಡಿ ನಗರದ ಭೂತ್ ಕೇಂದ್ರ 148 ಸೇರಿದಂತೆ ಎಲ್ಲಾ ಮತದಾನ ಕೇಂದ್ರಗಳಿಗೆ ಭೇಟಿ ನೀಡಿ ಮಾಹಿತಿ ಪಡೆದರು.
ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಿಲ್ಲೆಯಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ರಾಜ್ಯ ಸರ್ಕಾರದ ಐದು ಗ್ಯಾರಂಟಿಗಳು ಜನತೆಯ ಮೇಲೆ ಪ್ರಭಾವ ಬೀರಿದೆ. ಇದರಿಂದ ಪಕ್ಷದ ಅಭ್ಯರ್ಥಿಯು ಗೆಲುವು ಸಾಧಿಸಲಿದ್ದಾರೆ ಎಂದು ಹೇಳಿದರು.
ಈ ಸಂದರ್ಭ ವಿಧಾನ ಪರಿಷತ್ ಮಾಜಿ ಸದಸ್ಯರಾದ ಶಾಂತೆಯಂಡ ವೀಣಾ ಅಚ್ಚಯ್ಯ, ನಗರ ಕಾಂಗ್ರೆಸ್ ಅದ್ಯಕ್ಷರಾದ ಮಾದಂಡ ಪಿ.ತಿಮ್ಮಯ್ಯ, ವಿರಾಜಪೇಟೆ ಪುರಸಭಾ ಸದಸ್ಯರಾದ ಡಿ.ಪಿ.ರಾಜೇಶ್, ಪಟ್ಟಣ ಪಂಚಾಯತಿ ಮಾಜಿ ಸದಸ್ಯ ಹರೀಶ್, ಹಿರಿಯ ಕಾಂಗ್ರೆಸಿಗ ಕೆ.ಟಿ.ಜೇಕಬ್,
ಸರ್ಕಾರಿ ನಾಮ ನಿರ್ದೇಶನ ಸದಸ್ಯರಾದ ಶಬರೀಶ್ ಶೆಟ್ಟಿ, ಪ್ರಮುಖರಾದ ಪವನ್ ಪೆಮ್ಮಯ್ಯ, ವೆಂಕಟೇಶ್ ಶೆಟ್ಟಿ, ಶ್ರೀಕಾಂತ್ ಶೆಟ್ಟಿ, ನಿತಿನ್ ಲೇಪು, ಯೊಗೇಶ್ ನಾಯ್ಡು, ಸತೀಶ್, ಮೋಹನ್, ಮತ್ತು ಕಾರ್ಯಕರ್ತರು ಹಾಜರಿದ್ದರು.