ಏ.27 NEWS DESK : ಕೇಂದ್ರ ಸರ್ಕಾರವು ರಾಜ್ಯಕ್ಕೆ ಬರ ಪರಿಹಾರ ರೂ.3455 ಕೋಟಿ ಬಿಡುಗಡೆ ಮಾಡಿದೆ.
ರಾಜ್ಯ ಸರ್ಕಾರ ಬರ ಕುರಿತು ಪರಿಶೀಲನೆ ನಡೆಸಿ ರೂ.18,174 ಕೋಟಿ ಪರಿಹಾರ ನೀಡುವಂತೆ ಕೇಂದ್ರಕ್ಕೆ ಮನವಿ ಸಲ್ಲಿಸಿತ್ತು. ಸದ್ಯ ಕೇಂದ್ರ ಸರ್ಕಾರ ಕರ್ನಾಟಕಕ್ಕೆ ರೂ.3455 ಕೋಟಿ ಮಾತ್ರ ಬಿಡುಗಡೆ ಮಾಡಿದೆ. ಹಣ ಬಿಡುಗಡೆ ಮಾಡುವ ಕುರಿತು ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಬಳಿಕ ಅಲ್ಲಿ ಹಣ ಬಿಡುಗಡೆಯ ಭರವಸೆ ನೀಡಿತ್ತು. ಅದಾದ ಕೆಲವೇ ದಿನಗಳಲ್ಲಿ ಬಿಡುಗಡೆ ಮಾಡಿದೆ.