ಮಡಿಕೇರಿ, ಏ.27 NEWS DESK : ಕೊಡ್ಲಿಪೇಟೆಯ ಮೂದರವಳ್ಳಿ ಈಶ್ವರ ಹಾಗೂ ಕಟ್ಟೆ ಬಸವಣ್ಣ ಸೇವಾ ಸಮಿತಿಯ ವತಿಯಿಂದ ನೂತನವಾಗಿ ನಿರ್ಮಿಸಿರುವ ಈಶ್ವರ ಹಾಗೂ ಕಟ್ಟೆ ಬಸವಣ್ಣ ದೇವಾಲಯದ ಪ್ರತಿಷ್ಠಾಪನಾ ಮಹೋತ್ಸವವು ಏ.28 ಮತ್ತು 29 ರಂದು ನಡೆಯಲಿವೆ.
ಏ.28 ರಂದು ಬೆಳಿಗ್ಗೆ 8 ಗಂಟೆಗೆ ಗಂಗಾಪೂಜೆ, ಯಾಗ ಮಂಟಪ ಪ್ರವೇಶ ನಡೆಯಲಿದೆ. ಅಂದು ಸಂಜೆ 4 ಗಂಟೆಗೆ ಗಣಪತಿ ಪೂಜೆ, ಕಳಶ ಪ್ರತಿಷ್ಠಾಪನೆ ಮತ್ತಿತರ ಧಾರ್ಮಿಕ ವಿಧಿ ವಿಧಾನಗಳು ನಡೆಯಲಿವೆ.
ಏ.29 ರಂದು ಸೋಮವಾರ ಬೆಳಿಗ್ಗೆ 4 ಗಂಟೆಯಿಂದ ಬಸವಣ್ಣ ಮೂರ್ತಿಗೆ ವಿಶೇಷ ಅಲಂಕಾರ, ರುದ್ರಾಭಿಷೇಕ ಸೇರಿದಂತೆ ವಿವಿಧ ಧಾರ್ಮಿಕ ಕೈಂಕರ್ಯಗಳ ಮೂಲಕ ದೇವಾಲಯದ ಪ್ರತಿಷ್ಠಾಪನಾ ಮಹೋತ್ಸವವನ್ನು ನೆರವೇರಿಸಲಾಗುವುದು.
ಬೆಳಿಗ್ಗೆ 10.00 ಗಂಟೆಗೆ ಆದಿಚುಂಚನಗಿರಿ ಮಠಾಧ್ಯಕ್ಷರಾದ ಡಾ. ನಿರ್ಮಲಾನಂದ ಸ್ವಾಮೀಜಿ, ಶಾಖಾಮಠದ ಶಂಭುನಾಥ ಸ್ವಾಮೀಜಿ ಹಾಗೂ ಧರ್ಮಸ್ಥಳದ ಧರ್ಮಾಧಿಕಾರಿ ಡಾ ಡಿ.ವೀರೇಂದ್ರ ಹೆಗ್ಗಡೆ ಅವರ ಗೌರವ ಉಪಸ್ಥಿತಿಯಲ್ಲಿ ಕಾರ್ಯಕ್ರಮ ನಡೆಯಲಿದ್ದು, ಅತಿಥಿಗಳಾಗಿ ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂಥರ್ ಗೌಡ, ಮಾಜಿ ಶಾಸಕ ಎಂ.ಪಿ.ಅಪ್ಪಚ್ಚುರಂಜನ್, ರಾಜ್ಯ ಒಕ್ಕಲಿಗರ ಸಂಘದ ನಿರ್ದೇಶಕ ಹರಪಳ್ಳಿ ರವೀಂದ್ರ, ಉದ್ಯಮಿ ಸಿಂಗನಕುಪ್ಪೆ ಸುರೇಶ್, ಡಿವೈಎಸ್ಪಿ ಗಂಗಾಧರಪ್ಪ, ಜಿ.ಪಂ. ಮಾಜಿ ಸದಸ್ಯ ಪಿ.ಬಿ.ಪುಟ್ಟರಾಜು, ಕಟ್ಟೆ ಬಸವಣ್ಣ ದೇವಸ್ಥಾನ ಸಮಿತಿ ಅಧ್ಯಕ್ಷ ಎಂ.ಎ.ಪ್ರವೀಣ್ , ಶ್ರೀ ಈಶ್ವರ ದೇವಸ್ಥಾನ ಸಮಿತಿ ಅಧ್ಯಕ್ಷ ಎಂ.ಪಿ.ದಿನೇಶ್, ಉದ್ಯಮಿ ನಿಲವಾಗಿಲು ಮಂಜಣ್ಣ, ಬೆಟ್ಟದಳ್ಳಿ ಕಾಫಿ ಬೆಳೆಗಾರ ಮೂರ್ತಿ , ಕಾಫಿ ಬೆಳೆಗಾರ ಶುಂಢಿಯ ಎಸ್.ಬಿ.ಭರತ್ ಕುಮಾರ್, ಗೌಡಳ್ಳಿ ಕೃಷಿಪತ್ತಿನ ಸಹಕಾರ ಸಂಘದ ಅಧ್ಯಕ್ಷ ಸುರೇಶ್, ಕಾಫಿ ಬೆಳೆಗಾರ ಕಳಲೆಯ ಕೃಷ್ಣೇಗೌಡ, ಜಿಲ್ಲಾ ಒಕ್ಕಲಿಗರ ಯುವ ವೇದಿಕೆ ಅಧ್ಯಕ್ಷ ಗಿರೀಶ್ ಮಲ್ಲಪ್ಪ, ಒಕ್ಕಲಿಗರ ಯುವ ವೇದಿಕೆಯ ತಾಲ್ಲೂಕು ಅಧ್ಯಕ್ಷ ಸುರೇಶ್ ಚಕ್ರವರ್ತಿ, ಉದ್ಯಮಿಗಳಾದ ಅರುಣ್ ಕೊತ್ತನಳ್ಳಿ, ಪವನ್ ದೇವಯ್ಯ, ಮಧು ಬಾಗೇರಿ, ತಾಲ್ಲೂಕು ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನಾಧಿಕಾರಿ ಎಚ್.ರೋಹಿತ್, ಹಂಡ್ಲಿ ಗ್ರಾ.ಪಂ.ಅಧ್ಯಕ್ಷೆ ಇ.ಪಿ.ಸುಧಾ, ಸದಸ್ಯೆ ಸುವರ್ಣ ಮತ್ತಿತರರು ಭಾಗವಹಿಸಲಿದ್ದಾರೆ.
ಉಪನ್ಯಾಸಕ ಕೆ.ಪಿ.ಜಯಕುಮಾರ್ ಕಾರ್ಯಕ್ರಮ ನಿರ್ವಹಿಸಲಿದ್ದಾರೆ. ಧಾರ್ಮಿಕ ಮಹೋತ್ಸವದ ಅಂಗವಾಗಿ ಭಕ್ತಾದಿಗಳಿಗೆ ಪ್ರಸಾದ ಹಾಗೂ ಅನ್ನ ಸಂತರ್ಪಣೆ ಏರ್ಪಡಿಸಲಾಗಿದೆ.
ಆದಿಚುಂಚನಗಿರಿ ಮಠಾಧ್ಯಕ್ಷರಾದ ಡಾ.ನಿರ್ಮಲಾನಂದ ಸ್ವಾಮೀಜಿ, ಶಾಖಾಮಠದ ಶಂಭುನಾಥ ಸ್ವಾಮೀಜಿ ಹಾಗೂ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಅವರ ಮಾರ್ಗದರ್ಶನದಲ್ಲಿ ಈ ಎರಡು ನೂತನ ದೇವಸ್ಥಾನಗಳನ್ನು ನಿರ್ಮಿಸಲಾಗಿದ್ದು, ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ದೇವಸ್ಥಾನಗಳ ಉದ್ಘಾಟನೆ ಹಾಗೂ ಧಾರ್ಮಿಕ ಮಹೋತ್ಸವಕ್ಕೆ ಪಾಲ್ಗೊಳ್ಳುವಂತೆ ದೇವಾಲಯ ಸಮಿತಿ ಮನವಿ ಮಾಡಿದೆ.