ಮಡಿಕೇರಿ ಏ.28 NEWS DESK : ಇತಿಹಾಸ ಪ್ರಸಿದ್ಧ ಎಮ್ಮೆಮಾಡು ಮಖಾಂ ಉರೂಸ್ ಪ್ರಯುಕ್ತ ಏ.29 ರಂದು ಸಾರ್ವಜನಿಕ ಸಮ್ಮೇಳನ ಜರುಗಲಿದೆ. ಕಾರ್ಯಕ್ರಮವನ್ನು ಸಯ್ಯಿದ್ ಮುಈನಲಿ ಶಿಹಾಬ್ ತಂಙಳ್ ಪಾಣಕ್ಕಾಡ್ ಉದ್ಘಾಟಿಸಲಿದ್ದಾರೆ. ಅಧ್ಯಕ್ಷತೆಯನ್ನು ಸುನ್ನೀ ವಿದ್ಯಾಭ್ಯಾಸ ಬೋರ್ಡ್ ಕೋಶಾಧಿಕಾರಿ ಸಯ್ಯಿದ್ ಆಟಕೋಯ ತಂಙಳ್ ಅಧ್ಯಕ್ಷತೆ ವಹಿಸಲಿದ್ದು, ಮೌಲಾನಾ ಪೇರೋಡ್ ಅಬ್ದರ‍್ರಹ್ಮಾನ್ ಸಖಾಫಿ ಉದ್ಬೋಧನೆ, ಕರ್ನಾಟಕ ವಕ್ಫ್ ಮಂಡಳಿ ಮಾಜಿ ಚೆರ್ಮಾನ್ ಮೌಲಾನಾ ಶಾಫಿ ಸಅದಿ ಭಾಷಣ ಮಾಡಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಕರ್ನಾಟಕ ವಕ್ಫ್ ಮಂಡಳಿ ಸಚಿವ ಝಮೀರ್ ಅಹ್ಮದ್, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ, ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ, ಕರ್ನಾಟಕ ವಕ್ಫ್ ಮಂಡಳಿ ಚೆರ್ಮಾನ್ ಅನ್ವರ್ ಪಾಶ ಸೇರಿದಂತೆ ವಿವಿಧ ಕ್ಷೇತ್ರದ ಗಣ್ಯರು ಪಾಲ್ಗೊಳ್ಳಲಿದ್ದಾರೆ ಎಂದು ಮಾಹಿತಿ ನೀಡಿದರು.
ರಾತ್ರಿ 8 ಗಂಟೆಗೆ ಮತಪ್ರವನ ಕಾರ್ಯಕ್ರಮ ನಡೆಯಲಿದ್ದು, ಶಮೀರ್ ದಾರಿಮಿ ಕೊಲ್ಲಂ “ವೃದ್ಧ ಸದನಂ ವಳರುನ್ನುಂಡೋ” ಎಂಬ ವಿಷಯದ ಕುರಿತು ಭಾಷಣ ಮಾಡಲಿದ್ದಾರೆ. ಸಂಜೆ 4 ಗಂಟೆಗೆ ಅನ್ನದಾನ ನೆರವೇರಲಿದ್ದು, ಸ್ತ್ರೀಯರಿಗೆ ಪ್ರತ್ಯೇಕ ಸ್ಥಳಾವಕಾಶವನ್ನು ಕಲ್ಪಿಸಲಾಗಿದೆ.