ಮಡಿಕೇರಿ ಏ.28 NEWS DESK : ನಾಪೋಕ್ಲುವಿನಲ್ಲಿ ಆಯೋಜಿತ ಕೊಡವ ಕೌಟುಂಬಿಕ ಕುಂಡ್ಯೋಳಂಡ ಹಾಕಿ ಪಂದ್ಯಾವಳಿ ಗಿನ್ನಿಸ್ ಬುಕ್ ಆಫ್ ರೆಕಾರ್ಡ್ ನಲ್ಲಿ ಸ್ಥಾನ ಪಡೆಯುವ ಮೂಲಕ ಚರಿತ್ರೆ ನಿರ್ಮಿಸಿದೆ.
24ನೇ ವರ್ಷದ ಕುಂಡ್ಯೋಳಂಡ ಹಾಕಿ ಉತ್ಸವದಲ್ಲಿ ದಾಖಲೆಯ 360 ತಂಡಗಳು ಪ್ರಶಸ್ತಿಗಾಗಿ ಪೈಪೋಟಿ ನಡೆಸಿದ್ದವು. ಇದು ವಿಶ್ವದಲ್ಲೆ ಅತೀ ದೊಡ್ಡ ಕೌಟುಂಬಿಕ ಹಾಕಿ ಪಂದ್ಯಾವಳಿ ಎಂದು ಮಾನ್ಯ ಮಾಡುವ ಮೂಲಕ ಗಿನ್ನಿಸ್ ಬುಕ್ ಆಫ್ ರೆಕಾರ್ಡ್ಸ್ನಲ್ಲಿ ದಾಖಲು ಮಾಡಲಾಗಿದೆ.
ಅಂತಿಮ ಪಂದ್ಯಾವಳಿಯಂದು ಗಿನ್ನಿಸ್ ಬುಕ್ ಆಫ್ ರೆಕಾರ್ಡ್ಸ್ ಸಂಸ್ಥೆಯ ಸಮಿತಿ ಸದಸ್ಯ ಸ್ವಪ್ನಿಲ್ ಅವರು, ಕೌಟುಂಬಿಕ ಹಾಕಿ ಪಂದ್ಯಾವಳಿ ಗಿನ್ನಿಸ್ ದಾಖಲೆ ಪುಸ್ತಕಕ್ಕೆ ಸೇರ್ಪಡೆಯಾಗಿರುವುದನ್ನು ಘೋಷಿಸಿ, ಪ್ರಮಾಣ ಪತ್ರವನ್ನು ಕೊಡವ ಹಾಕಿ ಅಕಾಡೆಮಿ ಅಧ್ಯಕ್ಷ ಪಾಂಡಂಡ ಕೆ. ಬೋಪಣ್ಣ ಅವರಿಗೆ ಹಸ್ತಾಂತರಿಸಿದರು.
ಈ ಸಂದರ್ಭ ಜಿಲ್ಲಾಧಿಕಾರಿ ವೆಂಕಟ್ ರಾಜಾ, ಶಾಸಕ ಎ.ಎಸ್.ಪೊನ್ನಣ್ಣ, ಕುಂಡ್ಯೋಳಂಡ ಹಾಕಿ ಉತ್ಸವ ಸಮಿತಿಯ ಅಧ್ಯಕ್ಷ ರಮೇಶ್ ಮುದ್ದಯ್ಯ, ಸಂಚಾಲಕ ದಿನೇಶ್ ಕಾರ್ಯಪ್ಪ ಸೇರಿದಂತೆ ಹಲ ಗಣ್ಯರು ಉಪಸ್ಥಿತರಿದ್ದರು.