ಮಡಿಕೇರಿ ಏ.29 NEWS DESK : ಗಾಂಧಿ ಯುವಕ ಸಂಘ ಕಂಡಕರೆ ಮತ್ತು ಸರ್ವಧರ್ಮೀಯ ಬಡಹೆಣ್ಣುಮಕ್ಕಳ ಸಾಮೂಹಿಕ ವಿವಾಹ ಆಚರಣಾ ಸಮಿತಿ ವತಿಯಿಂದ ಜೂ.9 ರಂದು ಕಂಡಕರೆಯಲ್ಲಿ ಸರ್ವಧರ್ಮೀಯ ಬಡಹೆಣ್ಣುಮಕ್ಕಳ ಸಾಮೂಹಿಕ ಕಾರ್ಯಕ್ರಮದ ನಡೆಯಲಿದೆ ಎಂದು ಗಾಂಧಿ ಯುವಕ ಸಂಘದ ಮತ್ತು ಸರ್ವಧರ್ಮೀಯ ಬಡಹೆಣ್ಣುಮಕ್ಕಳ ಸಾಮೂಹಿಕ ವಿವಾಹ ಆಚರಣಾ ಸಮಿತಿ ಅಧ್ಯಕ್ಷ ಇಸ್ಮಾಯಿಲ್ ಕಂಡಕರೆ ತಿಳಿಸಿದ್ದಾರೆ.
ಪತ್ರಿಕಾ ಬಿಡುಗಡೆ ಮಾಡಿರುವ ಇಸ್ಮಾಯಿಲ್ ಕಂಡಕರೆ, 2023 ಡಿಸೆಂಬರ್ ತಿಂಗಳಲ್ಲಿ ನಡೆಯಬೇಕಿದ್ದ ಸಾಮೂಹಿಕ ವಿವಾಹ ಕಾರ್ಯಕ್ರಮವನ್ನು ಕಾರಣಾಂತರಗಳಿಂದ ಮುಂದೂಡಲಾಗಿತ್ತು. ಇದೀಗ ಜೂ.9 ರಂದು ಕಂಡಕರೆಯಲ್ಲಿ ಕಾರ್ಯಕ್ರಮ ನಡೆಸಲು ತೀರ್ಮಾನಿಸಲಾಗಿದ್ದು,ಎಲ್ಲರೂ ಕೈ ಜೋಡಿಸಬೇಕಾಗಿ ಇಸ್ಮಾಯಿಲ್ ಕಂಡಕರೆ ಪತ್ರಿಕಾ ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ.