ಮಡಿಕೇರಿ ಏ.29 NEWS DESK : ಕಂಡಕರೆ ಗಾಂಧಿ ಯುವಕ ಸಂಘದ ವತಿಯಿಂದ ವರ್ಷಂಪ್ರತೀ ನೀಡಲಾಗುತ್ತಿರುವ 2023-24ನೇ ಸಾಲಿನ ಅತ್ಯುತ್ತಮ ಸಮಾಜ ಸೇವಕ ಪ್ರಶಸ್ತಿಗೆ ಚೆಟ್ಟಳ್ಳಿ ಗ್ರಾ.ಪಂ ಸದಸ್ಯ ಸಿ.ಇ.ತೀರ್ಥಕುಮಾರ್(ಮೂಡಳ್ಳಿ ರವಿ), ಮಡಿಕೇರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮತ್ತು ಹೊದ್ದೂರು ಗ್ರಾ.ಪಂ ಅಧ್ಯಕ್ಷ ಹೆಚ್.ಎ ಹಂಸ ಕೊಟ್ಟಮುಡಿ, ಸೋಮವಾರಪೇಟೆ ಬ್ಲಾಕ್ ಕಾಂಗ್ರೆಸ್ ವಕ್ತಾರ ಕೆ.ಎ.ಅಬ್ದುಲ್ ರಜಾಕ್ ಬಜೆಗುಂಡಿ, ಕೂಡಮಂಗಳೂರು ಗ್ರಾ.ಪಂ ಸದಸ್ಯ ಕೆ.ಬಿ.ಶಂಸುದ್ದೀನ್ ಕುಶಾಲನಗರ, ಮತ್ತು ಸಮಾಜ ಸೇವಕಿ ಶಹರಬಾನು ಚೆಟ್ಟಳ್ಳಿ ಭಾಜನರಾಗಿದ್ದಾರೆ.
ಜೂ.9 ರಂದು ಕಂಡಕರೆಯಲ್ಲಿ ನಡೆಯಲಿರುವ ಸರ್ವಧರ್ಮೀಯ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಪ್ರಶಸ್ತಿ ವಿತರಣೆ ಮಾಡಲಾಗುವುದೆಂದು ಎಂದು ಗಾಂಧಿ ಯುವಕ ಸಂಘದ ಅಧ್ಯಕ್ಷ ಇಸ್ಮಾಯಿಲ್ ಕಂಡಕರೆ ತಿಳಿಸಿದ್ದಾರೆ.
2020-21ನೇ ಸಾಲಿನ ಚೆಟ್ಟಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಬಲ್ಲಾರಂಡ ಮಣಿ ಉತ್ತಪ್ಪ, 2022-23ನೇ ಸಾಲಿನ ಅತ್ಯುತ್ತಮ ಸಮಾಜ ಸೇವಕ ಪ್ರಶಸ್ತಿಯನ್ನು ಹಿಂದೂ ಮಲಯಾಳಿ ಸಮಾಜದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪಿ.ಕೆ.ಶಶಿಕುಮಾರ್ ಗಾಂಧಿ ಯುವಕ ಸಂಘದ ಅತ್ಯುತ್ತಮ ಸಮಾಜ ಸೇವಕ ಪ್ರಶಸ್ತಿಗೆ ಭಾಜನರಾಗಿದ್ದರು.