ಮಡಿಕೇರಿ ಏ.29 NEWS DESK : ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರು ಮೈಸೂರಿನಲ್ಲಿ ಹಿರಿಯ ನಾಯಕರು, ಚಾಮರಾಜನಗರ ಲೋಕಸಭಾ ಕ್ಷೇತ್ರದ ಸಂಸದರು ಹಾಗೂ ಮಾಜಿ ಕೇಂದ್ರ ಸಚಿವರಾಗಿದ್ದ ಪಿ.ಶ್ರೀನಿವಾಸ್ ಪ್ರಸಾದ್ ಅವರ ಪಾರ್ಥಿವ ಶರೀರದ ದರ್ಶನ ಪಡೆದು, ಕುಟುಂಬದವರಿಗೆ ಸಾಂತ್ವನ ಹೇಳಿದರು.
ಹಿರಿಯ ನಾಯಕರು, ಚಾಮರಾಜನಗರ ಲೋಕಸಭಾ ಕ್ಷೇತ್ರದ ಸಂಸದರು ಹಾಗೂ ಮಾಜಿ ಕೇಂದ್ರ ಸಚಿವರಾಗಿದ್ದ ಪಿ.ಶ್ರೀನಿವಾಸ್ ಪ್ರಸಾದ್ ಅವರ ನಿಧನ ಸುದ್ದಿ ತಿಳಿದು ನೋವಾಗಿದೆ. ಅನ್ಯಾಯ, ಅಸಮಾನತೆ ವಿರುದ್ಧ ಧ್ವನಿಯಾಗಿದ್ದ ಅವರ ಅಗಲಿಕೆ ರಾಜಕೀಯ ಕ್ಷೇತ್ರಕ್ಕೆ ದೊಡ್ಡ ನಷ್ಟವಾಗಿದೆ. ಈ ಸಮಯದಲ್ಲಿ ಮೃತರ ಆತ್ಮಕ್ಕೆ ಶಾಂತಿಯನ್ನು ಕೋರುತ್ತಾ, ಭಗವಂತ ಅವರ ಕುಟುಂಬಸ್ಥರಿಗೆ ನೋವು ಭರಿಸುವ ಶಕ್ತಿ ನೀಡಲಿ ಎಂದು ಶಾಸಕ ಪೊನ್ನಣ್ಣ ಸಂತಾಪ ಸೂಚಿಸಿದರು.