Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*
  • *ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*
  • *ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*
  • *ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*
  • *ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*
  • *ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*
  • *2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*
  • *ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*
  • *ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*
  • *ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕುಶಾಲನಗರ : ಚಿತ್ರಕಲಾ ಶಿಕ್ಷಕ ಉ.ರಾ.ನಾಗೇಶ್ ಗೆ ಬೀಳ್ಕೊಡುಗೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕುಶಾಲನಗರ : ಚಿತ್ರಕಲಾ ಶಿಕ್ಷಕ ಉ.ರಾ.ನಾಗೇಶ್ ಗೆ ಬೀಳ್ಕೊಡುಗೆ*

ಮೇ 1, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಕುಶಾಲನಗರ ಮೇ 1 NEWS DESK : ಸರ್ಕಾರಿ ಅಧಿಕಾರಿಗಳು ನಿಷ್ಠೆ, ಪ್ರಾಮಾಣಿಕತೆಯಿಂದ ಸೇವೆ ಸಲ್ಲಿಸುವುದರ ಮೂಲಕ ಸಮಾಜದಲ್ಲಿ ಗೌರವ ಸಂಪಾದನೆ ಮಾಡಬೇಕು ಎಂದು ಡಿಡಿಪಿಐ ಎಂ.ಚಂದ್ರಕಾಂತ್ ಹೇಳಿದರು.

ಕುಶಾಲನಗರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದಲ್ಲಿ ಚಿತ್ರಕಲಾ ಶಿಕ್ಷಕರಾಗಿ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ ಉ.ರಾ.ನಾಗೇಶ್ ಅವರಿಗೆ ಶಾಲೆಯ ವತಿಯಿಂದ ನಡೆದ ಬೀಳ್ಕೊಡುಗೆ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದರು.

ಪ್ರತಿ ಸರ್ಕಾರಿ ನೌಕರರಿಗೆ ನಿವೃತ್ತಿ ಅನಿವಾರ್ಯ. ಯಾವುದೇ ಇಲಾಖೆಯಲ್ಲಿ ತಮ್ಮ ಕೆಲಸವನ್ನು ಯಶಸ್ವಿಯಾಗಬೇಕಾದರೆ ಮಾನವೀಯತೆ ಮತ್ತು ಸರಳತೆಯಿರಬೇಕು. ವೃತ್ತಿ ಮತ್ತು ಪ್ರವೃತ್ತಿಯಿಂದ ಉ.ರಾ.ನಾಗೇಶ್ ಅವರು ಉತ್ತಮ ಹೆಸರು ಗಳಿಸಿದ್ದಾರೆ ಎಂದರು.

ಜಿಲ್ಲಾ ಜನಪದ ಪರಿಷತ್ ನ ಅಧ್ಯಕ್ಷ ಬಿ.ಜಿ.ಅನಂತಶಯನ ಮಾತನಾಡಿ, ಚಿತ್ರಕಲಾ ಕ್ಷೇತ್ರದಲ್ಲಿ ಉತ್ತಮ ಪ್ರಾವೀಣ್ಯತೆ ಹೊಂದುವ ಮೂಲಕ ಉತ್ತಮ ಶಿಕ್ಷಕರೆನಿಸಿಕೊಂಡಿರುವ ಉ.ರಾ.ನಾಗೇಶ್ ನಿವೃತ್ತಿ ನಂತರ ಚಿತ್ರಕಲಾ ಕ್ಷೇತ್ರದಲ್ಲಿ ಇನ್ನೂ ಉತ್ತಮ ಸಾಧನೆ ಮಾಡಲಿ ಎಂದು ಹಾರೈಸಿದರು.

ಜಿ.ಪಂ. ಶಿಕ್ಷಣ ಸ್ಥಾಯಿ ಸಮಿತಿಯ ಮಾಜಿ ಅಧ್ಯಕ್ಷ ವಿ.ಪಿ.ಶಶಿಧರ್ ಮಾತನಾಡಿ, ಸರಳ ಸಜ್ಜನ ವ್ಯಕ್ತಿತ್ವ ಹೊಂದಿದ್ದ ಉ.ರಾ.ನಾಗೇಶ್ ಅವರು ಚಿತ್ರಕಲಾ ಕ್ಷೇತ್ರದಲ್ಲಿ ಸಲ್ಲಿಸಿರುವ ಸೇವೆ ಅನನ್ಯವಾಗಿದೆ ಎಂದು ಬಣ್ಣಿಸಿದರು. ನಿವೃತ್ತಿ ನಂತರ ನಾಗೇಶ್ ಅವರು ಸಾಮಾಜಿಕ ಚಟುವಟಿಕೆಗಳಲ್ಲಿ ತೊಡಗಲಿ ಎಂದರು.

ಸನ್ಮಾನ ಸ್ವೀಕರಿಸಿ ಮಾತನಾಡಿದ ಉ.ರಾ.ನಾಗೇಶ್, ವೃತ್ತಿ ಜೀವನದ ಯಶಸ್ವಿಗೆ ಸಹಕರಿಸಿದವರಿಗೆ ಕೃತಜ್ಞತೆ ಸಲ್ಲಿಸಿದರು.
ಪ್ರೌಢಶಾಲಾ ವಿಭಾಗದ ಪ್ರಾಂಶುಪಾಲ ವೈ.ಎಸ್.ಪರಮೇಶ್ವರಪ್ಪ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಡಿಕೇರಿ ಕ್ಷೇತ್ರ ಶಿಕ್ಷಣ ಅಧಿಕಾರಿ ಡಾ. ಬಿ.ಸಿ.ದೊಡ್ಡೇಗೌಡ, ಉಪ ಯೋಜನಾ ಸಮನ್ವಯಾಧಿಕಾರಿ ಸೌಮ್ಯ, ಡಯಟ್ ನ ಹಿರಿಯ ಉಪನ್ಯಾಸಕ ಶಿವಕುಮಾರ್, ಚಿತ್ರದುರ್ಗ ಡಯಟ್ ನ ಉಪನ್ಯಾಸಕ ಸಿದ್ದೇಶಿ, ಬಿ.ಆರ್.ಸಿ.ಜಿ.ಎಂ.ಹೇಮಂತ್, ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ಡಾ. ಸದಾಶಿವಯ್ಯ ಎಸ್.ಪಲ್ಲೇದ್, ವಿಷಯ ಪರಿವೀಕ್ಷಕಿ ಬಿಂದು, ಕಾಲೇಜಿನ ಪ್ರಾಂಶುಪಾಲ ನಾಗೇಶ್, ನಿವೃತ್ತ ಪ್ರಾಂಶುಪಾಲ ಸುರೇಶ್ ಬಾಬು, ಮೈಸೂರು ಸರ್ಕಾರಿ ಪಿಯೂ ಕಾಲೇಜಿನ ಪ್ರಾಂಶುಪಾಲ ಪಿ.ಎಸ್.ಜಾನ್, ಜಿಲ್ಲಾ ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಅಧ್ಯಕ್ಷ ಸಿ.ಟಿ.ಸೋಮಶೇಖರ್, ಕಾರ್ಯದರ್ಶಿ ಎಚ್.ಜೆ.ಕುಮಾರ್, ಸಂಘಟನಾ ಕಾರ್ಯದರ್ಶಿ ದಯಾನಂದ ಪ್ರಕಾಶ್, ಕೋಶಾಧಿಕಾರಿ ಎ.ಸಿ.ಮಂಜುನಾಥ್, ಜಿಲ್ಲಾ ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕರ ಸಂಘದ ಅಧ್ಯಕ್ಷ ಎಚ್.ಎ.ಕುಮಾರ್, ಜಿಲ್ಲಾ ವಿಜ್ಞಾನ ಪರಿಷತ್ತಿನ ಅಧ್ಯಕ್ಷ ಟಿ.ಜಿ.ಪ್ರೇಮಕುಮಾರ್, ಕೂಡಿಗೆ ಮೊರಾರ್ಜಿ ಶಾಲೆಯ ಪ್ರಾಂಶುಪಾಲ ಕೆ.ಪ್ರಕಾಶ್, ಪ್ರೌಢಶಾಲೆಯ ಹಿರಿಯ ವಿದ್ಯಾರ್ಥಿಗಳ ಸಂಘದ ಅಧ್ಯಕ್ಷ ಆದಂ, ಸದಸ್ಯರು, ಶಿಕ್ಷಣ ಇಲಾಖೆಯ ವಿವಿಧ ಹಂತದ ಅಧಿಕಾರಿಗಳು, ವಿವಿಧ ಶಾಲಾ ಮುಖ್ಯಸ್ಥರು, ಶಿಕ್ಷಕರು ಇದ್ದರು.

ಶಾಲೆಯ ಉಪ ಪ್ರಾಂಶುಪಾಲ ವೈ.ಎಸ್. ಪರಮೇಶ್ವರಪ್ಪ ಮತ್ತು ಶಿಕ್ಷಕರು ನಾಗೇಶ್ ಅವರನ್ನು ಆತ್ಮೀಯವಾಗಿ ಸನ್ಮಾನಿಸಿ ನೆನಪಿನ ಕಾಣಿಕೆ ನೀಡಿದರು. ಕೂಡಿಗೆ ಡಯಟ್ ಸೇರಿದಂತೆ ಶಿಕ್ಷಣ ಇಲಾಖೆಯ ವಿವಿಧ ಸ್ತರದ ಅಧಿಕಾರಿಗಳು ಹಾಗೂ ವಿವಿಧ ಶಾಲೆಗಳ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.

Follow us Follow us
Share. WhatsApp Facebook Twitter Email Telegram Copy Link

Related Posts

*ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಸೆ.26: ನಗರದ ನಾಲ್ಕು ಶಕ್ತಿ ದೇವತೆಗಳಲ್ಲಿ ಒಂದಾದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್…

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*

ಸೆಪ್ಟೆಂಬರ್ 26, 2026

*ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*

ಸೆಪ್ಟೆಂಬರ್ 26, 2026

*ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*

ಸೆಪ್ಟೆಂಬರ್ 26, 2026

*2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*

ಸೆಪ್ಟೆಂಬರ್ 26, 2026

*ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*

ಸೆಪ್ಟೆಂಬರ್ 26, 2026

*ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*

ಸೆಪ್ಟೆಂಬರ್ 26, 2026

*ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*

ಸೆಪ್ಟೆಂಬರ್ 26, 2026

*36 ವರ್ಷ ಸೇವೆ ಸಲ್ಲಿಸಿದ ಅಂಗನವಾಡಿ ಕಾರ್ಯಕರ್ತೆ ದೇವಮಾಜಿ, ಶಿಕ್ಷಕಿ ಭೋಜಮ್ಮಗೆ ಆತ್ಮೀಯ ಬೀಳ್ಕೊಡುಗೆ*

ಸೆಪ್ಟೆಂಬರ್ 26, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.