Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*
  • *ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*
  • *ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*
  • *ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*
  • *ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*
  • *ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*
  • *2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*
  • *ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*
  • *ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*
  • *ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*”ಕೊಡವ ಕ್ರಿಕೆಟ್ ಪ್ರೀಮಿಯರ್ ಲೀಗ್” ಕ್ರಿಕೆಟ್ ಪಂದ್ಯಾವಳಿ ಆರಂಭ : ಕ್ರೀಡಾ ವಿಶ್ವವಿದ್ಯಾನಿಲಯ ಸ್ಥಾಪನೆಗೆ ಸಲಹೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*”ಕೊಡವ ಕ್ರಿಕೆಟ್ ಪ್ರೀಮಿಯರ್ ಲೀಗ್” ಕ್ರಿಕೆಟ್ ಪಂದ್ಯಾವಳಿ ಆರಂಭ : ಕ್ರೀಡಾ ವಿಶ್ವವಿದ್ಯಾನಿಲಯ ಸ್ಥಾಪನೆಗೆ ಸಲಹೆ*

ಮೇ 1, 20243 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link


ಮಡಿಕೇರಿ ಮೇ 1 NEWS DESK : ಕೊಡಗಿನ ಜನರ ಬಹುಕಾಲದ ಬೇಡಿಕೆಯಾಗಿರುವ ಕ್ರೀಡಾ ವಿಶ್ವವಿದ್ಯಾನಿಲಯ ಸ್ಥಾಪನೆಯ ಕುರಿತು ಕೇಂದ್ರ ಸರಕಾರದ ಮೇಲೆ ಒತ್ತಡ ಹೇರುವ ಅಗತ್ಯವಿದೆ. ಆ ಮೂಲಕ ಕ್ರೀಡಾಸಕ್ತರ ಬೇಡಿಕೆಯನ್ನು ಈಡೇರಿಸಿಕೊಳ್ಳಲು ಸಾಧ್ಯವಿದೆ ಎಂದು ಹೈಕೋರ್ಟ್ ಹಿರಿಯ ವಕೀಲ ಮುಕ್ಕಾಟಿರ ತಿಮ್ಮಯ್ಯ ನಾಣಯ್ಯ ತಿಳಿಸಿದ್ದಾರೆ.

ಕೂರ್ಗ್ ಕ್ರಿಕೆಟ್ ಫೌಂಡೇಷನ್ ವತಿಯಿಂದ ನಗರದ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಲೆದರ್ ಬಾಲ್ “ಕೊಡವ ಕ್ರಿಕೆಟ್ ಪ್ರೀಮಿಯರ್ ಲೀಗ್” ಕ್ರಿಕೆಟ್ ಪಂದ್ಯಾವಳಿಯ ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು ಯುವ ಕ್ರೀಡಾ ಪ್ರತಿಭೆಗಳಿಗೆ ಪ್ರೋತ್ಸಾಹ ನೀಡುವಂತೆ ಕರೆ ನೀಡಿದರು.

ಸಣ್ಣ ಜಿಲ್ಲೆಯಾಗಿರುವ ಕೊಡಗನ್ನು ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಅವರು ಇಡೀ ಪ್ರಪಂಚಕ್ಕೆ ತಿಳಿಯುವಂತೆ ಮಾಡಿದ್ದಾರೆ. ಇದೀಗ ಜಿಲ್ಲೆಯ ಕ್ರೀಡಾಪಟುಗಳು ಹಾಗೂ ಯುವ ಪ್ರತಿಭೆಗಳು ರಾಷ್ಟ್ರೀಯ ಅಂತರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡುತ್ತಿದ್ದಾರೆ. ದೇಶಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಕ್ರೀಡಾಪಟುಗಳು ಹಾಗೂ ಸೈನಿಕರನ್ನು ಕೊಡುಗೆಯಾಗಿ ನೀಡಿದ ಹೆಗ್ಗಳಿಕೆ ಕೊಡಗು ಜಿಲ್ಲೆಯದ್ದಾಗಿದೆ.

ದೇಶದ ಮುಂದಿನ ಭವಿಷ್ಯವಾಗಿರುವ ಯುವ ಪೀಳಿಗೆಯನ್ನು ಇದೇ ಮಾರ್ಗದಲ್ಲಿ ಕೊಂಡೊಯ್ಯುವ ಜವಾಬ್ದಾರಿ ಸಮಾಜ ಬಾಂಧವರದ್ದಾಗಿದೆ. ಕ್ರೀಡೆ ಕೊಡಗಿನ ಶಕ್ತಿಯಾಗಿದ್ದು, ಜಿಲ್ಲೆಯಲ್ಲಿ ಕ್ರೀಡಾ ವಿಶ್ವ ವಿದ್ಯಾನಿಲಯವನ್ನು ಸ್ಥಾಪಿಸುವ ಅಗತ್ಯವಿದೆ. ಈ ಬಗ್ಗೆ ರಾಜ್ಯ ಸರಕಾರ ಆಸಕ್ತಿ ತೋರಬೇಕು ಮತ್ತು ಕೇಂದ್ರ ಸರಕಾರದ ಮೇಲೆ ಒತ್ತಡ ಹೇರಬೇಕು ಎಂದರು.

ಮಕ್ಕಳು ಸಜ್ಜನರ ಸಹವಾಸ ಮಾಡುವಂತೆ ಪೋಷಕರು ಎಚ್ಚರ ವಹಿಸಬೇಕು. ಮಕ್ಕಳ ಬಗ್ಗೆ ತಾರತಮ್ಯ ತೋರದೆ ಅವರಿಷ್ಟದ ಕ್ಷೇತ್ರದಲ್ಲಿ ಮುನ್ನಡೆಯಲು ಪ್ರೋತ್ಸಾಹ ನೀಡಬೇಕು. ಕೊಡವ ಸಂಸ್ಕೃತಿ, ಆಚಾರ, ವಿಚಾರ, ಪದ್ಧತಿಯ ಕುರಿತು ಅರಿವು ಮೂಡಿಸಬೇಕೆಂದು ಮುಕ್ಕಾಟಿರ ತಿಮ್ಮಯ್ಯ ನಾಣಯ್ಯ ಸಲಹೆ ನೀಡಿದರು.

ಕೂರ್ಗ್ ಕ್ರಿಕೆಟ್ ಫೌಂಡೇಷನ್ ಯುವ ಪ್ರತಿಭೆಗಳನ್ನು ಪ್ರೋತ್ಸಾಹಿಸುವ ಕೆಲಸ ಮಾಡುತ್ತಿದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಕಾರ್ಯಕ್ರಮಗಳನ್ನು ಆಯೋಜನೆ ಮಾಡುವಂತಾಗಲಿ ಎಂದು ಶುಭಹಾರೈಸಿದರು.

ಕೊಡವ ಅಕಾಡೆಮಿ ಅಧ್ಯಕ್ಷ ಅಜ್ಜಿನಿಕಂಡ ಮಹೇಶ್ ನಾಚಯ್ಯ ಮಾತನಾಡಿ, ಕಳೆದ 24 ವರ್ಷಗಳಿಂದ ನಡೆಸಿಕೊಂಡು ಬರುತ್ತಿರುವ ಕೊಡವ ಕುಟುಂಬಗಳ ನಡುವಿನ ಹಾಕಿ ಪಂದ್ಯಾವಳಿಯು ಇದೀಗ ಅಂತರರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಂಡಿದ್ದು, ಗಿನ್ನಿಸ್ ಬುಕ್ ಆಫ್ ರೆಕಾಡ್ರ್ಸ್‍ನಲ್ಲಿ ಸೇರ್ಪಡೆಗೊಂಡಿದೆ. ಹಾಕಿಹಬ್ಬ ಹೊಸ ದಾಖಲೆ ಬರೆದಿರುವುದು ಹೆಮ್ಮೆಯ ವಿಚಾರವಾಗಿದೆ ಎಂದರು.

ದೇಶ ಸೇವೆಯ ಮನೋಭಾವ ಹೊಂದಿರುವ ಕೊಡವ ಜನಾಂಗ ಶಿಸ್ತಿಗೆ ಹೆಸರುವಾಸಿಯಾಗಿದೆ. ಕ್ರೀಡಾಜಿಲ್ಲೆ ಕೊಡಗಿನಲ್ಲಿ ಕೂರ್ಗ್ ಕ್ರಿಕೆಟ್ ಫೌಂಡೇಶನ್ ಯುವ ಆಟಗಾರರಿಗೆ ಪ್ರೋತ್ಸಾಹ ನೀಡುತ್ತಿದ್ದು, ರಾಷ್ಟ್ರ ಮಟ್ಟಕ್ಕೆ ಉತ್ತಮ ಆಟಗಾರರನ್ನು ಕೊಡುಗೆಯಾಗಿ ನೀಡುವ ಉದ್ದೇಶ ಹೊಂದಿರುವುದು ಶ್ಲಾಘನೀಯವೆಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಹಾಕಿಯೊಂದಿಗೆ ಕ್ರಿಕೆಟ್ ಅನ್ನು ಕೂಡ ಬೆಳೆಸುವ ಮೂಲಕ ಅಂತರ ರಾಷ್ಟ್ರೀಯ ಮಟ್ಟದಲ್ಲಿ ಜಿಲ್ಲೆಯ ಪ್ರತಿಭೆಗಳು ಗುರುತಿಸಿಕೊಳ್ಳುವಂತಾಗಬೇಕು. ಆ ಮೂಲಕ ಕೊಡಗು ಪ್ರತಿಯೊಬ್ಬರಿಗೂ ಮಾದರಿಯಾಗಬೇಕು ಎಂದು ಹೇಳಿದರು.

ಕೂರ್ಗ್ ಕ್ರಿಕೆಟ್ ಫೌಂಡೇಶನ್‍ನ ಹಿರಿಯ ಸಲಹೆಗಾರ ಕಿಶನ್ ಮಾದಪ್ಪ ಮಾತನಾಡಿ, ಜಿಲ್ಲೆಯಲ್ಲಿ ಲೆದರ್ ಬಾಲ್ ಕ್ರಿಕೆಟ್ ಪಂದ್ಯಾವಳಿಗೆ ಹೆಚ್ಚು ಪ್ರೋತ್ಸಾಹ ನೀಡುವಂತಾಗಬೇಕು. ಕರ್ನಾಟಕ ತಂಡದಲ್ಲೂ ಕೊಡಗಿನ ಪ್ರತಿಭೆಗಳು ಗುರುತಿಸಿಕೊಳ್ಳುವಂತಾಗಬೇಕು. ಈ ನಿಟ್ಟಿನಲ್ಲಿ ಕ್ರೀಡಾಪಟುಗಳಿಗೆ ಬೇಕಾದ ಎಲ್ಲಾ ಸಹಕಾರ ನೀಡುವುದಾಗಿ ಭರವಸೆ ನೀಡಿದರು.

ಕಾರ್ಯಕ್ರಮದಲ್ಲಿ ಪಂದ್ಯಾವಳಿಯ ಮುಖ್ಯ ಸಂಚಾಲಕ ಪೊರ್ಕೊಂಡ ಸುನಿಲ್, ಪ್ರಮುಖರಾದ ಕೊಕ್ಕಲೆರ ಅಪ್ಪಯ್ಯ, ಪಂದ್ಯಾವಳಿಯ ನಿರ್ದೇಶಕರು ಹಾಗೂ ಫ್ರಾಂಚೈಸಿಗಳ ನಾಯಕರು ಉಪಸ್ಥಿತರಿದ್ದರು.

ಪೊರ್ಕೊಂಡ ಡಿಂಪಲ್ ದೇಚಮ್ಮ ಪ್ರಾರ್ಥಿಸಿ, ಕೂರ್ಗ್ ಕ್ರಿಕೆಟ್ ಫೌಂಡೇಶನ್ ನ ನಿರ್ದೇಶಕ ಕುಲ್ಲೇಟಿರ ಶಾಂತ ಕಾಳಪ್ಪ ಸ್ವಾಗತಿಸಿ, ಬಾಳೆಯಡ ದಿವ್ಯ ಮಂದಪ್ಪ ನಿರೂಪಿಸಿ, ವಂದಿಸಿದರು.

ಸಭಾ ಕಾರ್ಯಕ್ರಮಕ್ಕೂ ಮೊದಲು ಅತಿಥಿಗಳನ್ನು ಕೊಡವ ಸಾಂಪ್ರದಾಯಿಕ ವಾಲಗದೊಂದಿಗೆ ಮೆರವಣಿಗೆ ಮೂಲಕ ವೇದಿಕೆಗೆ ಕರೆ ತರಲಾಯಿತು. ಕೂರ್ಗ್ ಬ್ಲಾಸ್ಟರ್ಸ್ ಮತ್ತು ಕೂರ್ಗ್ ಕೊಡವ ಟ್ರೈಬ್ಸ್ ನಡುವೆ ಮೊದಲ ಪಂದ್ಯಾವಳಿ ನಡೆಯಿತು.

ಮೇ 15ರವರೆಗೆ ಪಂದ್ಯಾವಳಿ ನಡೆಯಲಿದ್ದು, ವಿಜೇತ ತಂಡಕ್ಕೆ ಪ್ರಥಮ ಬಹುಮಾನ ರೂ.1.50 ಲಕ್ಷ, ದ್ವಿತೀಯ 75 ಸಾವಿರ, ತೃತೀಯ 25 ಸಾವಿರ ರೂ. ನಗದು ಹಾಗೂ ಆಕರ್ಷಕ ಟ್ರೋಫಿ ನೀಡಲಾಗುತ್ತದೆ ಎಂದು ಆಯೋಜಕರು ತಿಳಿಸಿದರು. 10 ಫ್ರಾಂಚೈಸಿಗಳನ್ನು ಒಳಗೊಂಡಂತೆ ಇದೇ ಪ್ರಥಮ ಬಾರಿಗೆ ಲೆದರ್ ಬಾಲ್ ಕ್ರೆಕೆಟ್ ಪಂದ್ಯಾವಳಿ ನಡೆಯಲಿದೆ. ಮೊದಲ ವರ್ಷದ ಫ್ರಾಂಚೈಸಿಗಳಾಗಿ ದಿ ಕೊಡವ ಬ್ರೈಟ್, ಕೊಡವ ವಾರಿಯರ್ಸ್, ವೈಲ್ಡ್ ಫ್ಲವರ್  ಹಾತೂರು, ಪ್ರಗತಿ ಕ್ರಿಕೆಟರ್ಸ್, ಕೂರ್ಗ್ ಬ್ಲಾಸ್ಟರ್ಸ್, ರಾಯಲ್ ಟೈಗರ್ಸ್, ಅಂಜಿಗೇರಿ ನಾಡ್, ಕೂರ್ಗ್ ಯುನೈಟೆಡ್, ಎಂ.ಟಿ.ಬಿ. ರಾಯಲ್ಸ್, ಟೀಮ್ ಲೀವರೇಜ್ ಭಾಗವಹಿಸಲಿದೆ.

 

Follow us Follow us
Share. WhatsApp Facebook Twitter Email Telegram Copy Link

Related Posts

*ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಸೆ.26: ನಗರದ ನಾಲ್ಕು ಶಕ್ತಿ ದೇವತೆಗಳಲ್ಲಿ ಒಂದಾದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್…

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*

ಸೆಪ್ಟೆಂಬರ್ 26, 2026

*ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*

ಸೆಪ್ಟೆಂಬರ್ 26, 2026

*ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*

ಸೆಪ್ಟೆಂಬರ್ 26, 2026

*2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*

ಸೆಪ್ಟೆಂಬರ್ 26, 2026

*ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*

ಸೆಪ್ಟೆಂಬರ್ 26, 2026

*ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*

ಸೆಪ್ಟೆಂಬರ್ 26, 2026

*ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*

ಸೆಪ್ಟೆಂಬರ್ 26, 2026

*36 ವರ್ಷ ಸೇವೆ ಸಲ್ಲಿಸಿದ ಅಂಗನವಾಡಿ ಕಾರ್ಯಕರ್ತೆ ದೇವಮಾಜಿ, ಶಿಕ್ಷಕಿ ಭೋಜಮ್ಮಗೆ ಆತ್ಮೀಯ ಬೀಳ್ಕೊಡುಗೆ*

ಸೆಪ್ಟೆಂಬರ್ 26, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.