


ಸುಂಟಿಕೊಪ್ಪ ಮೇ 1 NEWS DESK : ಕೊಡಗರಹಳ್ಳಿಯ ಕುಂದೂರುಮೊಟ್ಟೆ ಚಾಮುಂಡೇಶ್ವರಿ ಸೇವಾ ಸಮಿತಿ ವತಿಯಿಂದ ಶ್ರೀ ಮಹಾವಿಷ್ಣು, ಶ್ರೀ ಚಾಮುಂಡೇಶ್ವರಿ, ರಕ್ತೇಶ್ವರಿ ಪರಿವಾರ ದೇವರುಗಳ 46ನೇ ವಾರ್ಷಿಕ ಮಹೋತ್ಸವವು ಶ್ರದ್ಧಾಭಕ್ತಿಯಿಂದ ನಡೆಯಿತು.
ಏ.29 ರಿಂದ ಆರಂಭಗೊಂಡ ವಾರ್ಷಿಕ ಮಹೋತ್ಸವದಲ್ಲಿ ವಿವಿಧ ಪೂಜಾ ಮತ್ತು ಧಾರ್ಮಿಕ ವಿಧಿ ವಿಧಾನಗಳೊಂದಿಗೆ ಸಂಪನ್ನಗೊಂಡಿತು.
ದೀಪರಾಧನೆ, ಏಳು ಸುತ್ತಿನ ಪ್ರದಕ್ಷಣೆ ಹಾಗೂ ಶ್ರೀ ಚಾಮುಂಡಿ ತಂಡದಿಂದ ಚಂಡೆ ಮೇಳ ನಡೆಯಿತು. ಮಂಗಳವಾರದಂದು ಶ್ರೀ ಚಾಮುಂಡೇಶ್ವರಿ ದೇವಿಯ ಅಭಿಷೇಕ ಪೂಜೆಯೊಂದಿಗೆ ಭಕ್ತರ ಹರಕೆ ಮತ್ತು ಬೇಡಿಕೆಗಳು ನಡೆದವು.
ರಾತ್ರಿಯಿಂದ ವಿವಿಧ ದೈವಗಳ ಕೋಲ ನಡೆದ ಸಂದರ್ಭ ಆಕರ್ಷಕ ಪಟಾಕಿ ಮತ್ತು ಸಿಡಿಮದ್ದಿನ ಕಾರ್ಯಕ್ರಮ ಬಾನಂಗಳದಲ್ಲಿ ಚೆಲುವಿನ ಚಿತ್ತಾರವನ್ನು ಬಿಡಿಸುವ ಮೂಲಕ ಭಕ್ತರು ವಯಸ್ಕರು ಎನ್ನದೆ ನೇರೆದಿದ್ದ ಜನಸ್ತೋಮದ ಮನಸೂರೆಗೊಂಡಿತು. ಬುಧವಾರ ಪೂರ್ವಾಹ್ನ ಅಜ್ಜಪ್ಪ ಕೋಲ ವಿಷ್ಣುಮೂರ್ತಿ ಕೋಲ, ರಕ್ತೇಶ್ವರಿ ಹಾಗೂ ಚಾಮುಂಡೇಶ್ವರಿ ಕೋಲದೊಂದಿಗೆ ಶ್ರೀದೇವಿ ನೇವೈದ್ಯದೊಂದಿಗೆ ವಾರ್ಷಿಕ ಜಾತ್ರಾ ಮಹೋತ್ಸವ ಸಂಪನ್ನಗೊಂಡಿತು.
ಮೂರು ದಿನಗಳ ಕಾಲ ನಡೆದ ಪೂಜಾ ಮಹೋತ್ಸವದಲ್ಲಿ ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು.








