
ನಾಪೋಕ್ಲು ಮೇ 2 NEWS DESK : ಚೇರಂಬಾಣೆ ಗ್ರಾ.ಪಂ ವತಿಯಿಂದ ಬೇಂಗೂರು ಗ್ರಾಮದ ಶ್ರೀ ನಾಡು ಕಡಪಾಲಪ್ಪ ದೇವಾಲಯದ ಪುನರ್ ಪ್ರತಿಷ್ಠಾ ಅಷ್ಟ ಬಂಧ ಬ್ರಹ್ಮಕಲಶೋತ್ಸವವು ಶ್ರದ್ಧಾಭಕ್ತಿಯಿಂದ ನೆರವೇರಿತು.
ದ್ವಾದಶ ನಾಳಿಕೇರ ಗಣಯಾಗ, ನವಗ್ರಹ ಯಾಗ, ರಕ್ಷಾ ಕಲಶ ಪ್ರತಿಷ್ಠೆ, ಬಿಂಬಶುದ್ಧಿ, ಕಡಪಾಲಪ್ಪ ದೇವರ ಪುನರ್ ಪ್ರತಿಷ್ಠೆ, ಜೀವಕುಂಭಾಭಿಷೇಕ, ಮಹಾ ಗಣಪತಿ ದೇವರ ಪ್ರತಿಷ್ಠೆ ,ಶಾಂತಿ ಪೂಜೆ, ಪ್ರಾಯಶ್ಚಿತ ಹೋಮ, ಆಶ್ಲೇಷಬಲಿ, ತತ್ವ ಹೋಮ, ಬ್ರಹ್ಮ ಕಲಶ, ಮಂಡಲ ಪೂಜೆ, ಕಡಪಾಲಪ್ಪ ದೇವರಿಗೆ ಶಾಂತಿ ಪ್ರಾಯಶ್ಚಿತ ಹೋಮಗಳು, ತತ್ವ ಕಲಶಾ ಅಭಿಷೇಕ ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನೆರವೇರಿದವು.
ವಿಶೇಷ ಅಲಂಕಾರ, ಮಹಾಪೂಜೆ ಮಂಗಳಾರತಿ ಬಲಿಕ ಭಕ್ತಾದಿಗಳಿಗೆ ತೀರ್ಥ ಪ್ರಸಾದ ವಿತರಣೆ ನಡೆಯಿತು. ನಂತರ ದೇವರ ಪ್ರದರ್ಶನ, ನೃತ್ಯಬಲಿ ನಡೆಯಿತು.
ವಿವಿಧೆಡೆಗಳಿಂದ ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು.
ಕೊಳಲು ವಾದನ, ಭರತನಾಟ್ಯ ಸೇರಿದಂತೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಗ್ರಾಮದ ಜನರ ಮನಸೂರೆಗೊಂಡವು.
ಬೇಂಗೂರು ಗ್ರಾಮದ ಶ್ರೀ ದೇವರ ನೂತನ ಶಿಲಾಮಯ ಗರ್ಭಗುಡಿಯಲ್ಲಿ ಸಪರಿವಾರ ಸಹಿತ ಕಡಪಾಲಪ್ಪ ದೇವರ ಪುನರ್ ಪ್ರತಿಷ್ಠಾ ಬ್ರಹ್ಮ ಕಲಶೋತ್ಸವವನ್ನು ಉಡುಪಿ ಪೇಜಾವರ ವಿಶ್ವ ಪ್ರಸನ್ನ ತೀರ್ಥ ನೆರವೇರಿಸಿದರು. ದೇವರ ಅರ್ಚಕ ರಾಧಾಕೃಷ್ಣ ಭಟ್ ಉಪಸ್ಥಿತಿಯಲ್ಲಿ ವೈದಿಕ ವಿದ್ವಾಂಸ ಕಳತೂರು ವೇದಮೂರ್ತಿ ಬ್ರಹ್ಮಶ್ರೀ ಉದಯತಂತ್ರಿ ನೇತೃತ್ವದಲ್ಲಿ, ರಂಜಾಳ ಪೌರೋಹಿತ್ಯ ವಾಚಸ್ಪತಿ ವೇದಮೂರ್ತಿ ಗುರುರಾಜ ಉಪಾಧ್ಯಾಯರ ಮಾರ್ಗದರ್ಶನದಲ್ಲಿ ಧಾರ್ಮಿಕ ಕಾರ್ಯಕ್ರಮಗಳು ನಡೆದವು.
ಈ ಸಂದರ್ಭ ಕಾರ್ಯಕ್ರಮದಲ್ಲಿ ದೇವಾಲಯದ ಆಡಳಿತ ಮಂಡಳಿ ಅಧ್ಯಕ್ಷ ತೇಲಪಂಡ ನಂದ ಮಂದಣ್ಣ, ಉಪಾಧ್ಯಕ್ಷ ಕುಂಚೆಟ್ಟಿರ ಸುಬ್ಬಯ್ಯ, ಕಾರ್ಯದರ್ಶಿ ಕುಂಚೆಟ್ಟಿರ ಗೋಪಾಲ, ಖಜಾಂಚಿ ಪಟ್ಟ ಮಾಡ ಅಶೋಕ್, ಸದಸ್ಯರಾದ ಕಲ್ಲುಮಾಡಂಡ ವಾಸು, ಕುಂಚೆಟ್ಟಿರ ರಮೇಶ್, ಚೋಕಿರ ಪೊನ್ನಣ್ಣ, ಕಲ್ಲು ಮಾಡಂಡ ಅಶೋಕ್, ಕುಂಚೆಟ್ಟಿರ ರಮೇಶ್, ಚೋಕಿರ ಪೊನ್ನಣ್ಣ, ಕೀಪಾಡಂಡ ವಾಸು, ಬೊಳ್ಳಾರ್ಪಂಡ ಚಂಗಪ್ಪ, ತಕ್ಕಮುಖ್ಯಸ್ಥರು, ಚುನಾಯಿತ ಪ್ರತಿನಿಧಿಗಳು ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಹಾಗೂ ಸದಸ್ಯರು ಪಾಲ್ಗೊಂಡಿದ್ದರು.
ವರದಿ : ದುಗ್ಗಳ ಸದಾನಂದ.








